ಜೂನಿಯರ್‌ ಇಂಜಿನಿಯರ್‌ ಕಪಾಳಕ್ಕೆ ಬಾರಿಸಿದ ಬಿಜೆಪಿ ಬೆಂಬಲಿತ ಶಾಸಕಿ

Date:

ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ವೇಳೆ ಶಾಸಕಿಯೊಬ್ಬರು ಜೂನಿಯರ್‌ ಇಂಜಿನಿಯರ್‌ ಕಪಾಳಕ್ಕೆ ಬಾರಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಶಾಸಕಿಯ ನಡೆ ಭಾರೀ ವಿವಾದಕ್ಕೆ ಕಾರಣವಾಗಿದೆ.

- Advertisement -

ಮಹಾರಾಷ್ಟ್ರದ ಮೀರಾ ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ (ಎಂಬಿಎಂಸಿ) ವ್ಯಾಪ್ತಿಯ ವಾರ್ಡ್ ಸಂಖ್ಯೆ 6ರಲ್ಲಿ ಮಂಗಳವಾರ, ಜೂನಿಯರ್ ಇಂಜಿನಿಯರ್ ಶುಭಂ ಪಾಟೀಲ್ ನೇತೃತ್ವದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಮೀರಾ-ಭಯಂದರ್ ಶಾಸಕಿ ಗೀತಾ ಜೈನ್ ಅವರು ಕಾರ್ಯಾಚಾರಣೆ ಕುರಿತು ಮಾಹಿತಿ ಪಡೆದಿದ್ದಾರೆ. ಆದರೆ ಇಂಜಿನಿಯರ್‌ ಬಳಿ ಮಾತನಾಡುತ್ತಿರುವಾಗಲೇ ಏಕಾಏಕಿ ಕೋಪಗೊಂಡ ಶಾಸಕಿ, ಶುಭಂ ಪಾಟೀಲ್‌ರನ್ನು ದೂಡಿದ ಬಳಿಕ ಕಪಾಳಕ್ಕೆ ಬಾರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಅಕ್ರಮ ಕಟ್ಟಡ ನೆಲಸಮ ಕಾರ್ಯಾಚರಣೆ ವೇಳೆ ಆರು ತಿಂಗಳ ಪುಟ್ಟ ಮಗುವನ್ನು ಹೊಂದಿದ್ದ ಕುಟುಂಬವೊಂದು ವಾಸವಾಗಿದ್ದ ಜೋಪಡಿಯನ್ನು ತೆರವುಗೊಳಿಸಲಾಗಿತ್ತು. ಇದೇ ವೇಳೆ ಅನೇಕ ವಯಸ್ಸಾದವರು ಸೇರಿದಂತೆ ನಿವಾಸಿಗಳನ್ನು ಬಲವಂತವಾಗಿ ಹೊರಹಾಕಲಾಗಿತ್ತು ಎಂದು ಆರೋಪಿಸಲಾಗಿದೆ. ಈ ರೀತಿಯ ಅಮಾನವೀಯ ವರ್ತನೆಯಿಂದ ಕೋಪಗೊಂಡ ಗೀತಾ ಜೈನ್, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಳೆಗಾಲದಲ್ಲಿ ವಸತಿ ಕಟ್ಟಡಗಳನ್ನು ಕೆಡವುದರ ವಿರುದ್ಧ ಸರ್ಕಾರ ನಿರ್ಣಯ ಅಂಗೀಕರಿಸಿದ್ದರೂ ಸಹ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಶಾಸಕಿ ಆರೋಪಿಸಿದ್ದಾರೆ. ಶಾಸಕಿಯ ಕೋಪಕ್ಕೆ ತುತ್ತಾದ ಜೂನಿಯರ್ ಇಂಜಿನಿಯರ್ ಶುಭಂ ಪಾಟೀಲ್, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ..

ಪಶ್ಚಾತ್ತಾಪವಿಲ್ಲ ಎಂದ ಶಾಸಕಿ ಗೀತಾ ಜೈನ್

ಘಟನೆಯು ವಿವಾದವಾಗುತ್ತಲೇ ಸ್ಪಷ್ಟನೆ ನೀಡಿರುವ ಶಾಸಕಿ, ʻಮಾಹಿತಿ ಕೇಳಿದ ವೇಳೆ ಜೂನಿಯರ್‌ ಇಂಜಿನಿಯರ್‌ ನಗುತ್ತಿದ್ದರು. ಹೀಗಾಗಿ  ಕಪಾಳಮೋಕ್ಷ ಮಾಡಿದ್ದೇನೆ. ಈ ಕುರಿತು ‘ನನಗೆ ಯಾವುದೇ ವಿಷಾದವಿಲ್ಲ’ ಎಂದು ಬಿಜೆಪಿಗೆ ಬೆಂಬಲ ನೀಡಿರುವ ಸ್ವತಂತ್ರ ಶಾಸಕಿ ಗೀತಾ ಜೈನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...