‘ಮಿಸ್ ಯೂನಿವರ್ಸ್ ಇಂಡಿಯಾ 2025’ ಕಿರೀಟ ಮಣಿಕಾ ವಿಶ್ವಕರ್ಮ ಮುಡಿಗೆ

Date:

ರಾಜಸ್ಥಾನದ ಮಣಿಕಾ ವಿಶ್ವಕರ್ಮ ಮಿಸ್ ಯೂನಿವರ್ಸ್ ಇಂಡಿಯಾ 2025 ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಉತ್ತರ ಪ್ರದೇಶದ ತಾನ್ಯಾ ಶರ್ಮಾ ಮೊದಲ ರನ್ನರ್ ಅಪ್, ಹರಿಯಾಣದ ಮೆಹಕ್ ಧಿಂಗ್ರಾ ಎರಡನೇ ರನ್ನರ್ ಅಪ್ ಮತ್ತು ಅಮಿಶಿ ಕೌಶಿಕ್ ಮೂರನೇ ರನ್ನರ್ ಅಪ್ ಆಗಿದ್ದಾರೆ.

- Advertisement -

ಸೋಮವಾರ(ಆಗಸ್ಟ್ 18) ರಾಜಸ್ಥಾನದ ಜೈಪುರದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ, ಮಣಿಕಾ ವಿಶ್ವಕರ್ಮ ಮಿಸ್ ಯೂನಿವರ್ಸ್ ಇಂಡಿಯಾ 2025 ಕಿರೀಟವನ್ನು ಪಡೆದಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರಿಯಾ ಸಿಂಘಾ ಅವರು ಮಣಿಕಾಗೆ ಕಿರೀಟಧಾರಣೆ ಮಾಡಿದರು. ಈ ನವೆಂಬರ್‌ನಲ್ಲಿ ಥೈಲ್ಯಾಂಡ್‌ನಲ್ಲಿ ನಡೆಯಲಿರುವ 74ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಮಣಿಕಾ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ ಮುಡಿಗೇರಿಸಿಕೊಂಡ 18ರ ರಿಯಾ ಸಿಂಘಾ

ತಮ್ಮ ಗೆಲುವಿನ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮಣಿಕಾ, “ನನ್ನ ಪ್ರಯಾಣವು ನನ್ನ ಊರು ಗಂಗಾನಗರದಿಂದ ಪ್ರಾರಂಭವಾಯಿತು. ನಾನು ದೆಹಲಿಗೆ ಬಂದು ಸ್ಪರ್ಧೆಗೆ ಸಿದ್ಧಳಾದೆ. ನಾವು ಆತ್ಮವಿಶ್ವಾಸ ಮತ್ತು ಧೈರ್ಯವನ್ನು ಬೆಳೆಸಿಕೊಳ್ಳಬೇಕು. ನನಗೆ ಸಹಾಯ ಮಾಡಿದ ಮತ್ತು ನಾನು ಈ ಮಟ್ಟಿಗೆ ಬೆಳೆಯುವಂತೆ ಮಾಡಿದ ಎಲ್ಲರಿಗೂ ಧನ್ಯವಾದ. ಸ್ಪರ್ಧೆಯು ಕೇವಲ ಒಂದು ಕ್ಷೇತ್ರವಲ್ಲ, ಇದು ನಮ್ಮ ಪಾತ್ರವನ್ನು ನಿರ್ಮಿಸುವ ಜಗತ್ತು” ಎಂದು ಹೇಳಿದರು.

ಮಣಿಕಾ ಮೂಲತಃ ರಾಜಸ್ಥಾನದ ಶ್ರೀ ಗಂಗಾನಗರದವರಾಗಿದ್ದು, ಈಗ ದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಮಿಸ್ ಯೂನಿವರ್ಸ್ ರಾಜಸ್ಥಾನ 2024 ಕಿರೀಟವನ್ನು ಸಹ ಮಣಿಕಾ ಪಡೆದಿದ್ದಾರೆ. ಪ್ರಸ್ತುತ ರಾಜಕೀಯ ವಿಜ್ಞಾನ ಮತ್ತು ಅರ್ಥಶಾಸ್ತ್ರ ವಿಷಯದಲ್ಲಿ ಪದವಿ ಪಡೆಯುತ್ತಿದ್ದು, ಅಂತಿಮ ವರ್ಷದ ವಿದ್ಯಾರ್ಥಿನಿ.

ಶಾಸ್ತ್ರೀಯ ನೃತ್ಯದಲ್ಲಿ ತರಬೇತಿ ಪಡೆದಿರುವ ಮಣಿಕಾ, ಚಿತ್ರಕಲೆಯನ್ನೂ ಮಾಡುತ್ತಾರೆ. ವಿದೇಶಾಂಗ ಸಚಿವಾಲಯದ ಅಡಿಯಲ್ಲಿ ಆಯೋಜಿಸಲಾದ BIMSTEC ಸೆವೊಕಾನ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಲಲಿತ ಕಲಾ ಅಕಾಡೆಮಿ ಮತ್ತು ಜೆಜೆ ಸ್ಕೂಲ್ ಆಫ್ ಆರ್ಟ್ಸ್‌ ಅವರನ್ನು ಗೌರವಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...