ನಾಪತ್ತೆಯಾಗಿದ್ದ 22 ವರ್ಷದ ಅಗ್ನಿವೀರ ಸೈನಿಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Date:

ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಅಗ್ನಿವೀರ ಯೋಧರೊಬ್ಬರು ಇಂದು ಪಂಜಾಬ್‌ನ ಫತೇಗಢದ ‘ಸಿಖ್ ಲೈಟ್ ಇನ್ಫೆಂಟ್ರಿ ರೆಜಿಮೆಂಟಲ್ ಸೆಂಟರ್’ನ ಖಾಲಿ ಬ್ಯಾರಕ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಯೋಧನನ್ನು ಪಂಜಾಬ್‌ನ ಬರ್ನಾಲಾ ಜಿಲ್ಲೆಯ ಭಗತ್‌ಗಢ ಗ್ರಾಮದ ಜಸನ್‌ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸೇನೆಯ ಸಿಖ್ ಲೈಟ್ ಇನ್ಫೆಂಟ್ರಿ ರೆಜಿಮೆಂಟಲ್ ಸೆಂಟರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಜಸನ್‌ಪ್ರೀತ್, ಕಳೆದ ಮಾರ್ಚ್ ತಿಂಗಳಲ್ಲಿ ತರಬೇತಿಗಾಗಿ ಫತೇಗಢಕ್ಕೆ ಆಗಮಿಸಿದ್ದರು. ಮೂರು ದಿನಗಳ ಹಿಂದೆ ಅವರು ತಮ್ಮ ಬೆಟಾಲಿಯನ್‌ನಿಂದ ದಿಢೀರ್ ನಾಪತ್ತೆಯಾಗಿದ್ದರು. ಬಳಿಕ ರೆಜಿಮೆಂಟ್ ಅಧಿಕಾರಿಗಳು ಅವರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದರು. ಮಿಲಿಟರಿ ತರಬೇತಿ ಕೇಂದ್ರದ ವಸತಿಗೃಹದ ಬಳಿ ಇರುವ ಪಾಳುಬಿದ್ದ ಬ್ಯಾರಕ್‌ನಿಂದ (ಸೇನಾ ಕೊಠಡಿ) ತೀವ್ರವಾದ ದುರ್ವಾಸನೆ ಬರತೊಡಗಿದಾಗ ಮೃತದೇಹ ಇರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ಒಪ್ಪಿಗೆಯಿಲ್ಲದೆ ಖಾಸಗಿ ಚಿತ್ರಗಳ ಹಂಚಿದರೆ ಎಫ್‌ಐಆರ್: ವಿಕೃತ ಪ್ರವೃತ್ತಿ ವಿರುದ್ಧ ಡಿಜಿಪಿ ಸಲೀಂ ಎಚ್ಚರಿಕೆ

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸೆಂಟ್ರಲ್ ಜೈಲ್ ಔಟ್‌ಪೋಸ್ಟ್ ಅಧಿಕಾರಿ ಶಿವಕುಮಾರ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿತು. ಒಳಗಿನಿಂದ ಬೀಗ ಹಾಕಿದ್ದ ಬ್ಯಾರಕ್ ಬಾಗಿಲು ತೆರೆದು ನೋಡಿದಾಗ, ಯೋಧ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿದ್ದು, ಸುಮಾರು 2-3 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಬಳಿಕ ವಿಧಿವಿಜ್ಞಾನ (ಫೊರೆನ್ಸಿಕ್) ತಂಡ ಕೂಡ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಸಾಕ್ಷ್ಯಗಳನ್ನು ಕಲೆಹಾಕಿದೆ.

ಬ್ಯಾರಕ್ ಅನ್ನು ಒಳಗಿನಿಂದಲೇ ಬೀಗ ಹಾಕಿಕೊಂಡಿದ್ದರಿಂದ, ಇದೊಂದು ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷಾ ವರದಿಯಲ್ಲೂ ನೇಣುಬಿಗಿದುಕೊಂಡಿರುವುದೇ ಸಾವಿಗೆ ಕಾರಣ ಎಂಬುದು ಹಾಗೂ ಮೃತದೇಹ ಪತ್ತೆಯಾಗುವ ಎರಡು ದಿನಗಳ ಮೊದಲೇ ಸಾವು ಸಂಭವಿಸಿದೆ ಎಂಬುದು ದೃಢಪಟ್ಟಿದೆ. ಸದ್ಯ ಘಟನೆ ಕುರಿತು ಯೋಧನ ಕುಟುಂಬಕ್ಕೆ ಮಾಹಿತಿ ನೀಡಲಾಗಿದ್ದು, ಸ್ಥಳೀಯ ಪೊಲೀಸರು ಹಾಗೂ ಸೇನಾ ಅಧಿಕಾರಿಗಳು ಸಾವಿನ ಹಿಂದಿನ ನಿಖರ ಕಾರಣಗಳ ಕುರಿತು ಜಂಟಿಯಾಗಿ ತನಿಖೆ ಮುಂದುವರಿಸಿದ್ದಾರೆ. ಈ ದುರ್ಘಟನೆಯಿಂದ ರೆಜಿಮೆಂಟ್‌ನಲ್ಲಿ ಶೋಕ ಮಡುಗಟ್ಟಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...