ಬಳ್ಳಾರಿಯಿಂದ ನಾಪತ್ತೆಯಾಗಿದ್ದ ಮಹಿಳೆ 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದಲ್ಲಿ ಪತ್ತೆ

Date:

ಬಳ್ಳಾರಿಯ ತಮ್ಮ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಬಳ್ಳಾರಿಯಿಂದ ವಿಡಿಯೋ ಕಾಲ್ ಮೂಲಕ ತಾಯಿಯನ್ನು ನೋಡಿದ ಮಕ್ಕಳು ದುಃಖಿತರಾದರು.

- Advertisement -

ಬಳ್ಳಾರಿ ಮೂಲದ ಸಾಕಮ್ಮ ಅವರು 25 ವರ್ಷಗಳ ಹಿಂದೆ ನಾಪತ್ತೆಯಾಗಿದ್ದರು. ಮಹಿಳೆಯ ಸುಳಿವು ಸಿಗದ ಕಾರಣ ಕುಟುಂಬಸ್ಥರು ಮೃತಪಟ್ಟಿದ್ದಾಳೆ ಎಂದು ತಿಳಿದು ಆಕೆಯ ತಿಥಿ ಕಾರ್ಯವನ್ನೂ ಮಾಡಿದ್ದರು. ಆದರೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಹಾಗೂ ಹಿಮಾಚಲ ಪ್ರದೇಶದ ಕನ್ನಡಿಕ ಐಪಿಎಸ್‌ ಅಧಿಕಾರಿ ರವಿನಂದನ್‌ ಅವರ ನೆರವಿನಿಂದ ಮೃತಪಟ್ಟಿದ್ದಾಳೆ ಎಂದುಕೊಂಡಿದ್ದ ಮಹಿಳೆ ಹಿಮಾಚಲ ಪ್ರದೇಶದ ಮಂಡಿ ನಗರದಲ್ಲಿ ಪತ್ತೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಾಕಮ್ಮ ಅವರು ಹಿಮಾಚಲ ಪ್ರದೇಶದ ಮಂಡಿಯ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದಿದ್ದರು. ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯ ತಾಯಿಯಾಗಿದ್ದ ಇವರು ಮಾನಸಿಕ ಸಮಸ್ಯೆ ಹೊಂದಿದ್ದರು.

ಈ ಸುದ್ದಿ ಓದಿದ್ದೀರಾ? ಆರ್‌ ಅಶ್ವಿನ್ | ಸಾಧಾರಣ ಕುಟುಂಬದ ಹುಡುಗ ಸ್ಟಾರ್‌ ಕ್ರಿಕೆಟಿಗನಾದ ಕತೆ

ಮಕ್ಕಳಾದ ವಿಕ್ರಮ್, ಬೋಧರಾಜ್, ಲಕ್ಷ್ಮಿ ಸಣ್ಣವರಿರುವಾಗಲೇ ಬಳ್ಳಾರಿಯ ಹೊಸಪೇಟೆಯಿಂದ ಆಕಸ್ಮಿಕವಾಗಿ ರೈಲು ಹತ್ತಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದರು. ಅನಾಥವಾಗಿದ್ದ ಸಾಕಮ್ಮ ಹಿಮಾಚಲ ಪ್ರದೇಶದ ಮಂಡಿಯ ನಿರಾಶ್ರಿತ ಶಿಬಿರದಲ್ಲೇ ಉಳಿದುಕೊಂಡಿದ್ದರು. ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮಂಡ್ಯ ಮೂಲದ ಐಪಿಎಸ್ ಅಧಿಕಾರಿ ರವಿನಂದನ್ ಅವರು ಸಾಕಮ್ಮ ಅವರ ಬಗ್ಗೆ ಬೆಂಗಳೂರಿನಲ್ಲಿರುವ ತಮ್ಮ ಸ್ನೇಹಿತರಿಗೆ ವಿಡಿಯೋ ಮೂಲಕ ಮಾಹಿತಿ ನೀಡಿದ್ದರು. ಐಪಿಎಸ್ ಅಧಿಕಾರಿಯ ಸ್ನೇಹಿತ ಸಾಕಮ್ಮ ಅವರ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋ ಗಮನಿಸಿದ್ದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಐಪಿಎಸ್ ಅಧಿಕಾರಿ ರವಿನಂದನ್ ಜೊತೆ ಚರ್ಚಿಸಿ ಮಾಹಿತಿ ಪಡೆದಿದ್ದರು. ಬಳ್ಳಾರಿ ಮೂಲದ ಸಾಕಮ್ಮ ಅವರ ಬಗ್ಗೆ ಬಳ್ಳಾರಿಯ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಣಿವಣ್ಣನ್ ನಿರ್ದೇಶನದ ಮೇರೆಗೆ ಮೂವರು ಸಿಬ್ಬಂದಿಗಳ ತಂಡ ಹಿಮಾಚಲ ಪ್ರದೇಶದ ಮಂಡಿಗೆ ತೆರಳಿತ್ತು.

ಅಲ್ಲಿಗೆ ತೆರಳಿದಾಗ ಸಾಕಮ್ಮ ಅವರಿಗೆ ಮಕ್ಕಳು, ಕುಟುಂಬ ಇದೆ ಎಂಬ ಮಾಹಿತಿ ದೊರಕಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಕುಟುಂಬಸ್ಥರನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಮಂಡಿಯಿಂದಲೇ ವಿಡಿಯೋ ಕಾಲ್ ಮೂಲಕ ಮಕ್ಕಳ ಜೊತೆ ತಾಯಿ ಸಾಕಮ್ಮ ಅವರನ್ನು ಮಾತನಾಡಿಸಿದರು. ತಾಯಿ ಜೊತೆ ಮಾತನಾಡುವಾಗ ಮಕ್ಕಳು ಕೂಡ ಭಾವುಕರಾಗಿ ಕಣ್ಣೀರು ಹಾಕಿದರು. ಸಾಕಮ್ಮ ಕೂಡ ಬೆಂಗಳೂರಿಗೆ ಆಗಮಿಸಿ ಮಕ್ಕಳ ಮನೆ ಸೇರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...