ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

Date:

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ ವಿಷಯ ವಸ್ತುಗಳನ್ನು ತೆರವುಗೊಳಿಸುವಂತೆ ಕೋರಿ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -

ಕಂಗನಾ ರಣಾವತ್ ಅವರ ಪರ ವಾದ ಮಂಡಿಸಿದ ವಕೀಲರು, ಸಾಮಾಜಿಕ ಜಾಲತಾಣಗಳಲ್ಲಿ ನಟಿಯ ಧ್ವನಿ, ಮುಖ ಮತ್ತು ಬಾಹ್ಯರೂಪವನ್ನು ಅನುಮತಿಯಿಲ್ಲದೆ ಎಐ ತಂತ್ರಜ್ಞಾನದ ಮೂಲಕ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನೂ ಓದಿ: ಕಂಗನಾ ರಣಾವತ್ ತಮಿಳುನಾಡಿಗೆ ಬಂದ್ರೆ ಕಪಾಳಕ್ಕೆ ಹೊಡೆಯಿರಿ: ಕಾಂಗ್ರೆಸ್‌ ನಾಯಕನ ವಿವಾದಾತ್ಮಕ ಹೇಳಿಕೆ

ಕಂಗನಾ ಹೇಳಿಲ್ಲದ ಹೇಳಿಕೆಗಳನ್ನು ಅವರು ಹೇಳಿದರೆಂದು ಬಿಂಬಿಸಿ ನಕಲಿ ಸುದ್ದಿಗಳನ್ನು ಹರಡಲಾಗುತ್ತಿದೆ. ಅವರ ಪ್ರತಿಷ್ಠೆಗೆ ಧಕ್ಕೆ ತರುವಂತಹ ಅಶ್ಲೀಲ ರೂಪದ ಕಂಟೆಂಟ್ ಅನ್ನು ಹರಿದುಬಡಲಾಗುತ್ತಿದೆ ಎಂದು ದೂರಿದ್ದಾರೆ.

ಈ ಕುರಿತು ನಡೆದ ಸತ್ಯಾಸತ್ಯತೆ ಪರೀಕ್ಷೆಗಳಲ್ಲಿ (Fact-checks) ಇವು ನಿಜವಾದ ಚಿತ್ರಗಳಲ್ಲ, ಬದಲಿಗೆ ಎಐ ಸೃಷ್ಟಿತ ನಕಲಿ ಚಿತ್ರಗಳು ಎಂದು ಸ್ಪಷ್ಟವಾಗಿದೆ ಎಂದೂ ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನ್ಯಾಯಪೀಠವು, ಸಂಬಂಧಪಟ್ಟ ಪ್ರತಿವಾದಿಗಳಿಗೆ ಹಾಗೂ ಡಿಜಿಟಲ್ ವೇದಿಕೆಗಳಿಗೆ ಸಮನ್ಸ್ ಮತ್ತು ನೋಟಿಸ್ ಜಾರಿಗೊಳಿಸಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...

ಆಪ್ ಕಾರ್ಯಕರ್ತನಿಗೆ ಹಲ್ಲೆ ಪ್ರಕರಣ: ಡಿಸಿಎಂ ಪರ್ವೇಶ್ ವರ್ಮಾ, ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್

ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನಿಗೆ...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...

ಕಳೆದ ಆರು ತಿಂಗಳಲ್ಲಿ ನೆಲ ಕಚ್ಚಿದೆ ಗ್ರಾಮೀಣ ಗ್ರಾಹಕರ‌ ವಿಶ್ವಾಸ- RBI ಸಮೀಕ್ಷೆ

ಭಾರತದ ಗ್ರಾಮೀಣ ಗ್ರಾಹಕರ ವಿಶ್ವಾಸವು 2026ರ ವರ್ಷದ ಉದ್ದಕ್ಕೂ ನಿರಂತರವಾಗಿ ಕುಸಿಯುತ್ತಲೇ...