ಶಾಸಕರ ಸಹಿ ನಕಲು ಪ್ರಕರಣ: ಮಮತಾ ನಿವಾಸದಲ್ಲಿ ಸಿಐಡಿ ಶೋಧ

Date:

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಟಿಎಂಸಿ ಶಾಸಕರ ಸಹಿ ನಕಲು’ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಅಧಿಕಾರಿಗಳು ಮಂಗಳವಾರ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್‌ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಮಮತಾ ಅವರ ಹರೀಶ್ ಚಟರ್ಜಿ ರಸ್ತೆಯಲ್ಲಿರುವ ನಿವಾಸವನ್ನು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಕಚೇರಿಯನ್ನಾಗಿಯೂ ಬಳಸಲಾಗುತ್ತದೆ. ಹೀಗಾಗಿ ಸಾಕ್ಷ್ಯಾಧಾರ ಕಲೆಹಾಕಲು ಕಟ್ಟಡದೊಳಗೆ ಪ್ರವೇಶಿಸಲು ಸಿಐಡಿ ಅಧಿಕಾರಿಗಳು ಮುಂದಾದರು. ಈ ವೇಳೆ ಸ್ಥಳದಲ್ಲಿದ್ದ ಟಿಎಂಸಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸಂಸದ ಸುಭಾಶಿಷ್ ಚಕ್ರವರ್ತಿ ಅವರು ಅಧಿಕಾರಿಗಳನ್ನು ತಡೆದಿದ್ದು, ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಕಟ್ಟಡದ ಆವರಣದಲ್ಲಿ ತಾವು ಕಡ್ಡಾಯವಾಗಿ ಶೋಧ ನಡೆಸಬೇಕಿದೆ ಎಂದು ಅಧಿಕಾರಿಗಳು ಈ ವೇಳೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನು ಓದಿದ್ದೀರಾ? ನಾಯಕತ್ವ ಕೈತಪ್ಪಿದರೂ ಕ್ರೀಡಾಸ್ಫೂರ್ತಿ ಮೆರೆದ ಸೂರ್ಯಕುಮಾರ್ ಯಾದವ್‌

ಕಳೆದ ಮೇ 19ರಂದು ಮಂಡಿಸಲಾದ ನಿರ್ಣಯವೊಂದರಲ್ಲಿ ಹಲವು ಟಿಎಂಸಿ ಶಾಸಕರ ಸಹಿಗಳನ್ನು ನಕಲು ಮಾಡಲಾಗಿದೆ ಎಂಬ ಆರೋಪವಿದೆ. ಪಕ್ಷದಿಂದ ಉಚ್ಚಾಟನೆಗೊಂಡಿರುವ ಕೆಲ ಬಂಡಾಯ ನಾಯಕರು ಈ ಬಗ್ಗೆ ಲಿಖಿತ ದೂರು ನೀಡಿದ್ದರು. ವಿಧಾನಸಭೆ ಸ್ಪೀಕರ್ ಅವರ ಸೂಚನೆಯ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಸಿಐಡಿ, ಇದೀಗ ತನಿಖೆಯನ್ನು ಚುರುಕುಗೊಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೂ ಸಿಐಡಿ ಮೂರನೇ ಬಾರಿ ಸಮನ್ಸ್ ಜಾರಿ ಮಾಡಿದೆ. ಕೇವಲ 24 ಗಂಟೆಗಳ ಒಳಗೆ ವಿಚಾರಣೆಗೆ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅನಾರೋಗ್ಯದ ಕಾರಣ ನೀಡಿ ಈ ಹಿಂದಿನ ಎರಡು ಸಮನ್ಸ್‌ಗಳಿಗೆ ಗೈರಾಗಿದ್ದ ಅಭಿಷೇಕ್, ವಿಚಾರಣೆಗೆ 15 ದಿನಗಳ ಕಾಲಾವಕಾಶ ಕೋರಿದ್ದರು. ಆದರೆ, ಅವರ ಈ ಮನವಿಯನ್ನು ಸಿಐಡಿ ಸಾರಾಸಗಟಾಗಿ ತಿರಸ್ಕರಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...