ಬ್ಯಾಲೆಟ್ ಪೇಪರ್‌ನಲ್ಲೂ ‘ಕೈ’ ಖಾಲಿ ಎಂದ ಮೋದಿ; ಎಲ್ಲ ಚುನಾವಣೆಯಲ್ಲೂ ಬ್ಯಾಲೆಟ್‌ಅನ್ನೇ ಬಳಸಿ‌ ಎಂದು ಕಾಂಗ್ರೆಸ್ ತಿರುಗೇಟು

Date:

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಟ್ಟು 28 ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಈ ಫಲಿತಾಂಶ ಪ್ರಟಕವಾದ ಬೆನ್ನಲ್ಲೇ, ಪ್ರಧಾನಿ ಮೋದಿ ಅವರು ಕಾಂಗ್ರೆಸ್‌ಅನ್ನು ‘ಬ್ಯಾಲೆಟ್ ಪೇಪರ್‌ನಲ್ಲೂ ಕೈ ಖಾಲಿ’ ಎಂದು ಟೀಕಿಸಿದ್ದಾರೆ. ಟೀಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್, “ಎಲ್ಲ ಚುನಾವಣೆಗಳನ್ನೂ ಬ್ಯಾಲೆಟ್ ಪೇಪರ್‌ನಲ್ಲೇ ನಡೆಸಿ” ಎಂದು ಸವಾಲು ಹಾಕಿದೆ.

- Advertisement -

ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ‘ಎಕ್ಸ್’ನಲ್ಲಿ‌ ಟ್ವೀಟ್ ಮಾಡಿರುವ ಮೋದಿ, “ನಾಲ್ಕು ರಾಜ್ಯಗಳಲ್ಲಿ ನಡೆದ 28 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯನ್ನು ‘ಬ್ಯಾಲಟ್ ಪೇಪರ್’ ಬಳಸಿ ನಡೆಸಲಾಗಿತ್ತು. ಹಾಗಾದರೆ, ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ಗೆದ್ದಿದೆ ಎಂದು ಊಹಿಸಿ” ಎಂದು ಕಾಂಗ್ರೆಸ್‌ಗೆ ಕಾಲೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಸಬೇಕೆಂದು ನಿರಂತರವಾಗಿ ಆಗ್ರಹಿಸುತ್ತಿದ್ದ ಕಾಂಗ್ರೆಸ್‌ಗೆ, ಬ್ಯಾಲಟ್ ಪೇಪರ್‌ನಲ್ಲೇ ನಡೆದ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂಬುದು ಅವರ ಟ್ವೀಟ್‌ನಲ್ಲಿನ ವ್ಯಂಗ್ಯ.

ಮೋದಿ ಅವರ ಈ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಕಾಂಗ್ರೆಸ್ ಸಂಸದ ಪವನ್ ಖೇರಾ, “ಪ್ರಧಾನಿ ಮೋದಿಯವರಿಗೆ ಮತಪತ್ರ ಚುನಾವಣಾ ವ್ಯವಸ್ಥೆಯ ಮೇಲೆ ಅಷ್ಟೊಂದು ನಂಬಿಕೆ ಮತ್ತು ಆತ್ಮವಿಶ್ವಾಸವಿದ್ದರೆ, ಮುಂಬರುವ ಎಲ್ಲ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಕೂಡ ತಕ್ಷಣವೇ ಬ್ಯಾಲಟ್ ಪೇಪರ್ ಮೂಲಕವೇ ನಡೆಸಲು ನಿರ್ಧಾರ ಕೈಗೊಳ್ಳಲಿ,” ಎಂದು ಸವಾಲು ಹಾಕಿದ್ದಾರೆ.

“ಪ್ರಧಾನಿಯವರ ಹೇಳಿಕೆಗಳು ಕೇವಲ ಟೀಕೆಗೆ ಸೀಮಿತವೇ ಹೊರತು ಅವರ ಕ್ರಿಯೆಯಲ್ಲಿ ಕಂಡುಬರುತ್ತಿಲ್ಲ” ಎಂದು ಪವನ್ ಖೇರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ವಿಧಾನ ಪರಿಷತ್ ಚುನಾವಣೆಗಳು ಕರ್ನಾಟಕ, ಬಿಹಾರ, ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ನಡೆದಿವೆ. ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟವು ಚುನಾವಣೆ ನಡೆದ ಎಲ್ಲ ನಾಲ್ಕೂ ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಹಾರದಲ್ಲಿನ ಒಂದು ಸ್ಥಾನವನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ. ಒಟ್ಟಾರೆಯಾಗಿ ಕಾಂಗ್ರೆಸ್ 12 ಸ್ಥಾನಗಳಲ್ಲಿ ಸ್ಪರ್ಧಿಸಿ ಖಾತೆ ತೆರೆಯಲು ವಿಫಲವಾದರೆ, ಬಿಜೆಪಿ ಸ್ಪರ್ಧಿಸಿದ 21 ಸ್ಥಾನಗಳಲ್ಲಿ 9 ಸ್ಥಾನಗಳಲ್ಲಿ ಜಯಗಳಿಸಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುತೇಕ ಸ್ಥಾನಗಳನ್ನು ಗೆದ್ದುಕೊಂಡಿದೆಯಾದರೂ, ಪ್ರಧಾನಿ ಮೋದಿಯವರ ಸ್ವಕ್ಷೇತ್ರ ವಾರಣಾಸಿಯ ಶಿಕ್ಷಕರ ಕ್ಷೇತ್ರದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಅಲ್ಲಿ ಸಮಾಜವಾದಿ ಪಕ್ಷದ (SP) ಅಭ್ಯರ್ಥಿ ಲಾಲ್ ಬಿಹಾರಿ ಯಾದವ್ ಅವರು ಜಯಭೇರಿ ಬಾರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ ಅತ್ಯಗತ್ಯ : ವೀರಣ್ಣ ದಂಡೆ

ಹಳೆಗನ್ನಡ ಸಾಹಿತ್ಯ, ಶಾಸನಗಳು ಹಾಗೂ ಹಸ್ತಪ್ರತಿಗಳು ನಮ್ಮ ಜ್ಞಾನ ಪರಂಪರೆಯ ಮೂಲ...

ಪಶ್ಚಿಮ ಏಷ್ಯಾ ಸಂಘರ್ಷ: 14 ನಾವಿಕರು ಸೇರಿ 22 ಭಾರತೀಯರ ಸಾವು: ಕೇಂದ್ರ ಮಾಹಿತಿ

​ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ 14 ನಾವಿಕರು ಸೇರಿದಂತೆ 22 ಜನ...

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...