ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆಗೈದ ಗುಂಪು; ವಿಡಿಯೋ ವೈರಲ್ – ನೆಟ್ಟಿಗರ ಆಕ್ರೋಶ

Date:

ಮಹಿಳೆ ಮೇಲೆ ಪುರುಷರ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯರ ರಕ್ಷಣೆ ವಿಚಾರವಾಗಿ ಮಮತಾ ಸರ್ಕಾರದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಇತ್ತೀಚೆಗಷ್ಟೇ, ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣವು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಟ್ರೈನಿ ವೈದ್ಯರು ಕಳೆದ ಒಂದೂವರೆ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ವಾರವಷ್ಟೇ ವೈದ್ಯರ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದು, ಪ್ರತಿಭಟನೆಯ ಕಾವು ಕಡಿಮೆಯಾಗಿತ್ತು. ಇದೇ ಸಮಯದಲ್ಲಿ, ಮಹಿಳೆ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಪ್ರಕರಣ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ವೈರಲ್ ಆಗಿರುವ ವಿಡಿಯೋದಲ್ಲಿ ಪುಂಡ ಪುರುಷರು ಮಹಿಳೆಯ ಮೇಲೆ ರಸ್ತೆಯಲ್ಲಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುವ ಸಂದರ್ಭದಲ್ಲಿ ಹಲವು ಮಂದಿ ರಸ್ತೆ ಬದಿಯಲ್ಲಿ ನೆರೆದಿದ್ದು, ಘಟನೆಯನ್ನು ವೀಕ್ಷಿಸುತ್ತಾ ನಿಂತಿರುವುದು ಕಂಡುಬಂದಿದೆ. ಆದರೆ, ಯಾರೊಬ್ಬರೂ ಮಹಿಳೆಯ ರಕ್ಷಣೆಗೆ ಬಂದಿಲ್ಲ ಎಂಬುದು ವಿಡಿಯೋದಲ್ಲಿ ಕಾಣಿಸುತ್ತದೆ.

ಸಂತ್ರಸ್ತ ಮಹಿಳೆ ಮತ್ತು ಅವರ ನೆರೆಹೊರೆಯವರೊಂದಿಗೆ ಬಹಳ ವರ್ಷಗಳಿಂದ ಜಮೀನು ವಿವಾದವಿತ್ತು. ಆದೇ ಕಾರಣಕ್ಕಾಗಿ ಜಗಳ ನಡೆದಿದೆ. ಗಲಾಟೆ ವೇಳೆ ಸಂತ್ರಸ್ತೆಯ ಪತಿಯ ಮೇಲೆ ಗುಂಪು ಹಲ್ಲೆ ನಡೆಸಿದ್ದಾರೆ. ತನ್ನ ಪತಿಯನ್ನು ರಕ್ಷಿಸಲು ಮುಂದಾದ ಸಂತ್ರಸ್ತೆಯ ಮೇಲೂ ಪುಂಡರು ಹಲ್ಲೆ ನಡೆಸಿದ್ದಾರೆ.

ಮಹಿಳೆಯ ಮೋತಾಬರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆಯ ವಿರುದ್ಧವೂ ಹಲ್ಲೆಗೈದವರೇ ದೂರು ದಾಖಲಿಸಿದ್ದಾರೆ. ಇಎರಡೂ ದೂರುಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Formula E Case: ಎಸಿಬಿ ನ್ಯಾಯಾಲಯಕ್ಕೆ ಕೆಟಿಆರ್ ಹಾಜರು; ‘ದುರುದ್ದೇಶಪೂರಿತ ಪ್ರಚಾರ’ ಎಂದು ವಾಗ್ದಾಳಿ

ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ...

ಪಂಜಾಬ್: ಬಿಜೆಪಿ ನಾಯಕ ರವನೀತ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ಪಂಜಾಬ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಮಾದಕವಸ್ತು ವಿರೋಧಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಪಠಾಣ್‌ಕೋಟ್‌ನತ್ತ ತೆರಳುತ್ತಿದ್ದ...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...

ಅಮೆರಿಕದ ಶೇ 100 ಸುಂಕದಿಂದ ಭಾರತದ ಆರ್ಥಿಕತೆಗೆ ಕಾದಿದೆ ಭಾರಿ ಆಪತ್ತು

ವಾಷಿಂಗ್ಟನ್‌ನಿಂದ ಹೊರಬಿದ್ದಿರುವ ಈ ನಿರ್ಧಾರ ಭಾರತದ ಆರ್ಥಿಕತೆಯ ಪಾಲಿಗೆ ಅಕ್ಷರಶಃ ಮರಣಶಾಸನವಾಗಿ...