‘ಮೊಹಮ್ಮದ್ ದೀಪಕ್ ಕುಮಾರ್’ -ಮುಸ್ಲಿಂ ವ್ಯಾಪಾರಿಯನ್ನು ಬೆಂಬಲಿಸಿದ್ದಕ್ಕೆ ಯುವಕನ ವಿರುದ್ಧ ಸಂಘಪರಿವಾರ ಪ್ರತಿಭಟನೆ!

Date:

ಉತ್ತರಾಖಂಡದ ಪೌರಿ ಜಿಲ್ಲೆಯ ಕೋಟ್ದ್ವಾರ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಯೊಬ್ಬರ ಅಂಗಡಿಯ ಹೆಸರು ಬದಲಾಯಿಸುವಂತೆ ಬಜರಂಗದಳ ಸದಸ್ಯರು ಒತ್ತಡ ಹೇರಿದಾಗ ಹಿಂದೂ ಯುವಕನೊಬ್ಬ ಬಜರಂಗದಳ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಈ ಯುವಕನ ವಿರುದ್ಧ ಬಜರಂಗದಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದು, ಉತ್ತರಾಖಂಡದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದೆ.

- Advertisement -

75 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರು ಬಾಬಾ ಕಲೆಕ್ಷನ್ ಎಂಬ ಬಟ್ಟೆ ಅಂಗಡಿಯನ್ನು ಹೊಂದಿದ್ದು, 30 ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದಾರೆ. ಆದರೆ ಇತ್ತೀಚೆಗೆ ಬಜರಂಗದಳದವರು ‘ಬಾಬಾ’ ಎಂಬ ಪದವನ್ನು ಫಲಕದಿಂದ ತೆಗೆದುಹಾಕುವಂತೆ ಒತ್ತಡ ಹೇರಿದ್ದರು. ಇದು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿದ್ದರು. ಈ ವೇಳೆ ಜಿಮ್ ತರಬೇತುದಾರರಾಗಿ ಕಾರ್ಯನಿರ್ವಹಿಸುವ ದೀಪಕ್ ಕುಮಾರ್ ಕಶ್ಯಪ್ ವೃದ್ಧ ವ್ಯಾಪಾರಿ ಪರವಾಗಿ ನಿಂತಿದ್ದರು. ಸಂಘಪರಿವಾರದವರು ನಿನ್ನ ಹೆಸರೇನು ಎಂದು ಕೇಳಿದಾಗ ದೀಪಕ್, “ಮೊಹಮ್ಮದ್ ದೀಪಕ್ ಕುಮಾರ್” ಎಂದು ಹೇಳಿದ್ದರು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ‘ಜೈ ಶ್ರೀ ರಾಮ್’ ಹೇಳುವಂತೆ ಒತ್ತಾಯಿಸಿ ಕಾಶ್ಮೀರಿ ಶಾಲು ವ್ಯಾಪಾರಿಗಳ ಮೇಲೆ ಹಲ್ಲೆ: ಕೋಮುವಾದಿಗಳಿಂದ ಬೆದರಿಕೆ

ಹಾಗೆಯೇ ಕೋಮು ದ್ವೇಷ ಹರಡಲು ಯತ್ನಿಸುತ್ತಲೇ ಇರುವ ಈ ಗುಂಪಿಗೆ ಸೇರಿದ ಡೆಹ್ರಾಡೂನ್, ಋಷಿಕೇಶ್ ಮತ್ತು ಹರಿದ್ವಾರದ 150 ಮಂದಿ ಕೋಟ್ದ್ವಾರದಲ್ಲಿ ಶನಿವಾರ ಸೇರಿ ಪ್ರತಿಭಟಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಕಶ್ಯಪ್ ಕೆಲಸ ಮಾಡುವ ಜಿಮ್ ವಿರುದ್ಧ ಘೋಷಣೆ ಕೂಗಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ದೀಪಕ್ ಕಶ್ಯಪ್, “ಬಾಬಾ ಕಲೆಕ್ಷನ್ ಎಂಬ ಅಂಗಡಿಯು 30 ವರ್ಷಗಳಿಂದ ಇದೆ. ಯಾವುದೇ ಸಮಸ್ಯೆ ಆಗಿಲ್ಲ. ಆದರೆ ಈ ಗುಂಪು ಸುಖಾಸುಮ್ಮನೆ ಗಲಾಟೆ ಮಾಡುತ್ತಿದೆ. ಅದಕ್ಕಾಗಿ ನಾನು ಆ ವ್ಯಾಪಾರಿಯನ್ನು ಬೆಂಬಲಿಸಿ ಮಾತನಾಡಿದೆ. ಆದರೆ ಈಗ ನನ್ನನ್ನು ಗುರಿಯಾಗಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

“ಅವರು ನನ್ನ ಜಿಮ್ ಬಳಿ ವಾಹನಗಳಲ್ಲಿ ಬಂದಿದ್ದರು, ಕೆಲವರು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರು. ನನ್ನ ಕುಟುಂಬಸ್ಥರನ್ನು ನಿಂದಿಸಿದರು. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ನೋಡಿರುವ ನಾನು ಈಗಾಗಲೇ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಆದರೆ ಆಡಳಿತದ ಆರಂಭಿಕ ಪ್ರತಿಕ್ರಿಯೆ ಏಕಪಕ್ಷೀಯವಾಗಿ ಕಂಡುಬಂದಿದೆ” ಎಂದು ದೂರಿದರು.

ಇನ್ನು ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆ ಕಂಡು ಬಂದಾಗ ಪೊಲೀಸರು ಮಧ್ಯಪ್ರವೇಶಿಸಿದ್ದು, ಅಧಿಕಾರಿಗಳು ಘಟನೆಯ ಬಗ್ಗೆ ಸ್ವಯಂಪ್ರೇರಿತವಾಗಿ ದೂರು ನೀಡಿದ್ದಾರೆ ಎಂದು ಪೌರಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್ ಹೇಳಿದ್ದಾರೆ. “ಕೋಮು ಸಾಮರಸ್ಯವನ್ನು ಕದಡುವ ಉದ್ದೇಶದಿಂದ ಡೆಹ್ರಾಡೂನ್‌ನಿಂದ ಕೆಲವರು ಕೋಟ್ದ್ವಾರಕ್ಕೆ ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ನಾವು ಎಫ್ಐಆರ್ ದಾಖಲಿಸಿದ್ದೇವೆ. ಬಾಬಾ ಗಾರ್ಮೆಂಟ್ಸ್ ಮಾಲೀಕರ ದೂರಿನ ಆಧಾರದ ಮೇಲೆ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ನಡುವೆ ಉತ್ತರಾಖಂಡ ಕಾಂಗ್ರೆಸ್ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಾನಾ ಕಶ್ಯಪ್‌ಗೆ ತಕ್ಷಣ ಭದ್ರತೆ ನೀಡಬೇಕು ಎಂದು ಕೋರಿದ್ದಾರೆ. ಮುಖ್ಯ ಕಾರ್ಯದರ್ಶಿ ಆನಂದ್ ವರ್ಧನ್ ಅವರಿಗೆ ಪತ್ರ ಬರೆದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಹೇಳಿದ್ದಾರೆ. ದ್ವೇಷ ಹರಡುವವರಿಗೆ ಆಡಳಿತಾರೂಢ ಬಿಜೆಪಿ ಸರ್ಕಾರದಿಂದ ಪ್ರೋತ್ಸಾಹ ಸಿಗುತ್ತಿದೆ ಎಂದು ಆರೋಪಿಸಿದ್ದಾರೆ.

ನಾವೆಲ್ಲರೂ ಒಂದೇ ಎಂದು ಹೇಳಿ ಕೋಮು ಸೌಹಾರ್ದತೆ ಮೆರೆದ ಯುವಕನ ವಿರುದ್ಧವೇ ಪ್ರತಿಭಟಿಸಿದ ಬಜರಂಗದಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...