ಪಶ್ಚಿಮ ಬಂಗಾಳ: ಚರ್ಚ್ ಉದ್ಘಾಟನೆ ವೇಳೆ ದುಷ್ಕರ್ಮಿಗಳಿಂದ ದಾಳಿ; ಧರ್ಮಗುರುಗಳು, ಭಕ್ತರ ಮೇಲೆ ಹಲ್ಲೆ

Date:

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನಾರಾಯಣತಲಾದಲ್ಲಿ ಶನಿವಾರ (ಅ.31) ನೂತನ ಚರ್ಚ್ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದ ವೇಳೆ ನುಗ್ಗಿದ 30ರಿಂದ 35 ಜನರ ಗುಂಪೊಂದು ಭಾರಿ ದಾಂಧಲೆ ನಡೆಸಿದೆ. ಘಟನೆಯಲ್ಲಿ ಚರ್ಚ್‌ನ ಧರ್ಮಗುರುಗಳು ಹಾಗೂ ಸೇರಿದ್ದ ಭಕ್ತರ ಮೇಲೆ ಹಲ್ಲೆ ನಡೆಸಲಾಗಿದ್ದು, ಹಲವರು ಗಾಯಗೊಂಡಿದ್ದಾರೆ.

- Advertisement -

ಬಸಂತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಷಪ್ ಸುಬ್ರತಾ ಚಕ್ರವರ್ತಿ ಮತ್ತು ಇತರ ಧರ್ಮಗುರುಗಳು ಉಪಸ್ಥಿತರಿದ್ದರು. ‘ದಾಳಿಕೋರರು ಚರ್ಚ್‌ನ ಶಿಲುಬೆಯನ್ನು ಧ್ವಂಸಗೊಳಿಸಿದ್ದಾರೆ. ವಿಡಿಯೊ ಮಾಡಲು ಯತ್ನಿಸಿದವರ ಮೊಬೈಲ್ ಫೋನ್‌ಗಳನ್ನು ಒಡೆದು ಹಾಕಿದ್ದಾರೆ. ಅಲ್ಲದೆ, ಮಹಿಳೆಯರ ಮೇಲೂ ಹಲ್ಲೆ ನಡೆಸಿ, ಅವರು ಧರಿಸಿದ್ದ ಸಾಂಪ್ರದಾಯಿಕ ಬಿಳಿ ಬಳೆಗಳನ್ನು (ಶಾಖಾ) ತೆಗೆಯುವಂತೆ ಬೆದರಿಸಿ ಆವರಣದಿಂದ ಹೊರದಬ್ಬಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕ ಮಧ್ಯಂತರ ಚುನಾವಣೆ: ಡೊನಾಲ್ಡ್ ಟ್ರಂಪ್ ಕುರ್ಚಿಗಿಲ್ಲ ಕುತ್ತು;...

ಅಮೆರಿಕದ ಕಾಂಗ್ರೆಸ್‌ಗೆ ನ. 3ರಂದು ನಡೆಯಲಿರುವ 'ಮಧ್ಯಂತರ ಚುನಾವಣೆ' ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಬಹುದೊಡ್ಡ ಅಗ್ನಿಪರೀಕ್ಷೆ. ಈ ಸಮರದಲ್ಲಿ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷ ಬಹುಮತ ಕಳೆದುಕೊಂಡರೂ ಅವರ ಅಧ್ಯಕ್ಷ ಸ್ಥಾನಕ್ಕೇನೂ ಕುತ್ತಿಲ್ಲ;...

ಗೆಲ್ಲಬಹುದಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಲ್ಟಿ ಹೊಡೆದದ್ದು...

ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆದ ನಾಲ್ಕು ಎಮ್ಮೆಲ್ಸಿ ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಂದೇ ಒಂದು ಸೀಟನ್ನೂ ಪಡೆಯಲಾಗದೆ ಮುಗ್ಗರಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ವ್ಯಾಖ್ಯಾನ-ವಿಶ್ಲೇಷಣೆ ಹುಟ್ಟುಹಾಕಿದೆ....

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ಈ ಚರ್ಚ್ ಆವರಣದಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ನಡೆಸದಂತೆ ದಾಳಿಕೋರರು ಬೆದರಿಕೆ ಹಾಕಿದ್ದಾರೆ. ಸಂತ್ರಸ್ತರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಲ್ಪಸಂಖ್ಯಾತರನ್ನು ಬೆದರಿಸುವ ತಂತ್ರ ಇದಾಗಿದೆ ಎಂದು ‘ಬಂಗಿಯಾ ಕ್ರೈಸ್ತ ಪರಿಸೇಬಾ’ (ಬಿಸಿಪಿ) ಸಂಘಟನೆ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಬಿಸಿಪಿ ರಾಜ್ಯ ಕಾರ್ಯದರ್ಶಿ ಹೆರಾಡ್ ಮಲ್ಲಿಕ್, ‘ಬಿಷಪ್ ಸಮ್ಮುಖದಲ್ಲೇ ಧರ್ಮಗುರುಗಳ ಮೇಲೆ ನಡೆದಿರುವ ಈ ಹಲ್ಲೆ ಅಭೂತಪೂರ್ವವಾದದ್ದು. ಸರ್ಕಾರದ ಹಾಗೂ ಆಡಳಿತ ವ್ಯವಸ್ಥೆಯ ಯಾವುದೇ ಕಠಿಣ ಕ್ರಮದ ಭಯವಿಲ್ಲದ ಕಾರಣ ದುಷ್ಕರ್ಮಿಗಳು ಈ ಮಟ್ಟದ ಹಿಂಸಾಚಾರಕ್ಕೆ ಇಳಿದಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಅಕ್ಟೋಬರ್ 23ರಂದು ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ದುರ್ಗಾಪೂಜಾ ಪೆಂಡಾಲ್ ಬಳಿ ಮೂರು ಕ್ರಿಶ್ಚಿಯನ್ ಕುಟುಂಬಗಳ ಮೇಲೆ ಹಲ್ಲೆ ನಡೆಸಿ, ಓರ್ವ ವ್ಯಕ್ತಿಗೆ ಬಲವಂತವಾಗಿ ಸಾರ್ವಜನಿಕವಾಗಿ ಶುದ್ಧೀಕರಣ ಸ್ನಾನ ಮಾಡಿಸಲಾಗಿತ್ತು. ತಮ್ಮ ಇಚ್ಛೆಗೆ ವಿರುದ್ಧವಾಗಿ ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವಂತೆ ಬಲವಂತಪಡಿಸಲಾಗಿತ್ತು ಎಂದು ಸಂತ್ರಸ್ತರು ಆರೋಪಿಸಿದ್ದರು.

ಈ ಘಟನೆಗಳನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ‘ಇದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು, ಮೇ 13ರಿಂದ ಸೆಪ್ಟೆಂಬರ್ 20ರ ನಡುವೆ ಪಶ್ಚಿಮ ಬಂಗಾಳದ 13 ಜಿಲ್ಲೆಗಳಲ್ಲಿ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿ ಕನಿಷ್ಠ 60 ದಾಳಿಗಳು ನಡೆದಿವೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕಳವಳ ವ್ಯಕ್ತಪಡಿಸಿದ್ದಾರೆ. ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಮಾನ ದರ | ಅಗತ್ಯಬಿದ್ದರೆ ಟಿಕೆಟ್‌ ಬೆಲೆ ನಿಯಂತ್ರಿಸಲು ಕೇಂದ್ರಕ್ಕೆ ಅಧಿಕಾರ!

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ವಿಮಾನಯಾನ ಇಂಧನ (ಎಟಿಎಫ್) ಬೆಲೆ...

ಬಿಜೆಪಿ ಅಪಪ್ರಚಾರದ ಬಲೂನ್ ಪಂಕ್ಚರ್; ದೆಹಲಿ ಮಾರುಕಟ್ಟೆಗಳಲ್ಲಿ ಖರೀದಿ ಜೋರು ಎಂದ ಕಾಂಗ್ರೆಸ್

ಇಂಡಿಯಾ ಒಕ್ಕೂಟದ ಬೃಹತ್ ರ್‍ಯಾಲಿಯಿಂದಾಗಿ ದೆಹಲಿಯ ಮಾರುಕಟ್ಟೆಗಳಲ್ಲಿ ವ್ಯಾಪಾರಕ್ಕೆ ತೊಂದರೆ ಉಂಟಾಗಲಿದೆ...

ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದ ಗಾಳಿಯ ಗುಣಮಟ್ಟ; ದೆಹಲಿಯಲ್ಲಿ ಉಸಿರಾಟಕ್ಕೂ ಸಂಕಷ್ಟ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚಾಗಿದ್ದು, ಸೋಮವಾರ (ನ.2)...