‘ಮೊಬೈಲ್‌ಗಳು ಒಂಟಿತನಕ್ಕೆ ಕಾರಣವಾಗುತ್ತಿವೆ; ಜನರ ಆಘಾತಕಾರಿ ಹೆಜ್ಜೆಗೂ ಪ್ರೇರಕವಾಗುತ್ತಿವೆ’

Date:

ಮೊಬೈಲ್‌ ಫೋನ್‌ಗಳ ಆಗಮನ/ಬಳಕೆಯಿಂದಾಗಿ ಕುಟುಂಬ ಸದಸ್ಯರ ನಡುವಿನ ಸಂವಹನ ಕೊನೆಗೊಂಡಿದೆ. ಒಂಟಿತನಕ್ಕೆ ಕಾರಣವಾಗಿದೆ. ಮಾತ್ರವಲ್ಲದೆ, ಜನರು ಆತ್ಮಹತ್ಯೆಯಂತಹ ಆಘಾತಕಾರಿ ಹೆಜ್ಜೆ ಇಡುವುದಕ್ಕೂ ಪ್ರೇರಕವಾಗುತ್ತಿವೆ ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಶೇಖರ್ ಯಾದವ್ ಹೇಳಿದ್ದಾರೆ.

- Advertisement -

‘ಆತ್ಮಹತ್ಯೆಯನ್ನು ತಡೆಗಟ್ಟುವಲ್ಲಿ ಸಮಾಜದ ಪಾತ್ರ’ ವಿಷಯದ ಕುರಿತು ಪ್ರಯಾಜ್‌ರಾಜ್‌ನಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪೋಷಕರು ತಮ್ಮ ಮಕ್ಕಳಿಗೆ ಯಾವುದೇ ಹೊರೆ ಹಾಕಬಾರದು. ಮಕ್ಕಳಿಗೆ ‘ನೀವು ವೈದ್ಯನಾಗಬೇಕು, ನೀವು ಎಂಜಿನಿಯರ್’ ಆಗಬೇಕು ಎಂದು ಒತ್ತಾಯಿಸಬಾರದು. ಮತ್ತೊಂದು ಮಗುವಿನೊಂದಿಗೆ ಹೇಲಿಸಬಾರದು. ಮಗು ತನಗೆ ಬೇಕಾದ ದಿಕ್ಕಿನಲ್ಲಿ ವೃತ್ತಿಜೀವನವನ್ನು ಆಯ್ಕೆ ಮಾಡಿಕೊಳ್ಳಲಿ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಮಕ್ಕಳು ಎಂದಿಗೂ ತಾವು ಇತರರಿಗಿಂತ ದುರ್ಬಲರೆಂದು ಅಥವಾ ಕೀಳರಿಮೆ ಹೊಂದುವಂತೆ ಮಾಡಬಾರದು. ಪೋಷಕರು ಮಕ್ಕಳನ್ನು ನೈತಿಕವಾಗಿ ಕುಗ್ಗಿಸಿದರೆ, ಅವರು ಖಿನ್ನತೆಗೆ ಒಳಗಾಗಬಹುದು. ಅಂತಿಮವಾಗಿ ಆತ್ಮಹತ್ಯೆಯತ್ತ ಹೆಜ್ಜೆ ಹಾಕಬಹುದು” ಎಂದರು.

“ಮಕ್ಕಳ ನಡುವೆ ಸಂವಹನದ ಕೊರತೆ ಉಂಟಾಗಲು ಬಿಡಬೇಡಿ. ಅದೇ ರೀತಿ, ನಿಮ್ಮ ಸ್ನೇಹಿತರಲ್ಲಿ ಯಾರಾದರೂ ಅಸಹಜವಾಗಿ ವರ್ತಿಸುತ್ತಿದ್ದರೆ, ಅದನ್ನು ಹಗುರವಾಗಿ ಪರಿಗಣಿಸಬೇಡಿ. ಅವರೊಂದಿಗೆ ಸಮಾಲೋಚನೆ ನಡೆಸಿ. ಆಪ್ತತೆಯಿಂದಿರಿ. ಇಲ್ಲದಿದ್ದರೆ, ನಾಳೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ನಿಮ್ಮಲ್ಲಿಗೆ ಬರುತ್ತದೆ” ಎಂದು ಎಚ್ಚರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...