ಸಿಇಸಿ ಗ್ಯಾನೇಶ್ ವಿರುದ್ಧ ‘ಮಹಾಭಿಯೋಗ’ಕ್ಕೆ ‘ಇಂಡಿಯಾ’ ಒಕ್ಕೂಟದಿಂದ ಅಣಕು ಸಂಸತ್ ಅಧಿವೇಶನ

Date:

ಸಿಇಸಿ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಾಂಕೇತಿಕವಾಗಿ ‘ಮಹಾಭಿಯೋಗ’ (ವಜಾ) ನಿರ್ಣಯ ಮಂಡಿಸಲು ‘ಇಂಡಿಯಾ’ ಮೈತ್ರಿಕೂಟದ ನಾಯಕರು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಅಣಕು ಸಂಸತ್ ಅಧಿವೇಶನವನ್ನು ನಡೆಸಲಿದ್ದಾರೆ. ಚುನಾವಣಾ ಆಯೋಗವು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಈ ನಡೆಯ ಮೂಲಕ ತಮ್ಮ ಹೋರಾಟವನ್ನು ತೀವ್ರಗೊಳಿಸಿವೆ.

- Advertisement -

ಈ ಅಣಕು ಸಂಸತ್ ಕಲಾಪದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾನೇಶ್ ಕುಮಾರ್ ವಿರುದ್ಧ ನಿರ್ಣಯವನ್ನು ಮಂಡಿಸಲಿದ್ದಾರೆ. ಬಳಿಕ ಇತರ ನಾಯಕರಿಗೆ ಕಲಾಪವನ್ನು ಮುಕ್ತಗೊಳಿಸಲಾಗುತ್ತದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಂತಿಮ ಭಾಷಣ ಮಾಡಲಿದ್ದಾರೆ. ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ಈ ಅಣಕು ಕಲಾಪದ ಅಧ್ಯಕ್ಷತೆ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಈ ಮೊದಲು ಮೂವರು ಸಂಸದರಿಂದ ನಾಟಕೀಯ ಪ್ರದರ್ಶನ ಏರ್ಪಡಿಸಲು ಯೋಜಿಸಲಾಗಿತ್ತಾದರೂ, ನಂತರ ಕಾಂಗ್ರೆಸ್ ನಾಯಕತ್ವ ಆ ನಿರ್ಧಾರದಿಂದ ಹಿಂದೆ ಸರಿದಿದೆ. ಅಲ್ಲದೆ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಹಾಗೂ ಕಾನೂನು ತಜ್ಞರನ್ನು ಆಹ್ವಾನಿಸಲು ಉದ್ದೇಶಿಸಲಾಗಿತ್ತು. ಆದರೆ, ಕನಿಷ್ಠ ಐವರು ನಿವೃತ್ತ ನ್ಯಾಯಾಧೀಶರು ಇದರಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಅಶೋಕ ಹೋಟೆಲ್ ಮತ್ತು ರಾಮಲೀಲಾ ಮೈದಾನದಲ್ಲಿ ಅಣಕು ಅಧಿವೇಶನ ನಡೆಸಲು ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ, ನವದೆಹಲಿಯ 10 ರಾಜಾಜಿ ಮಾರ್ಗದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ಮಧ್ಯಾಹ್ನ 3.30ಕ್ಕೆ ಈ ಕಲಾಪ ನಡೆಯಲಿದೆ. ನವೆಂಬರ್ 1 ರಂದು ಇದೇ ವಿಚಾರವಾಗಿ ಬೃಹತ್ ಪ್ರತಿಭಟನೆಯನ್ನೂ ಹಮ್ಮಿಕೊಳ್ಳಲಾಗಿದೆ.

ವಿರೋಧ ಪಕ್ಷಗಳ ಸಂಸದರು, ಪಕ್ಷದ ನಾಯಕರು, ನಾಗರಿಕ ಸಮಾಜದ ಪ್ರಮುಖರು, ವಿದ್ಯಾರ್ಥಿ ನಾಯಕರು ಹಾಗೂ ಮತದಾರರ ಪಟ್ಟಿಯಿಂದ (ಎಸ್ಐಆರ್) ಹೆಸರು ಕೈಬಿಡಲಾದ ಕೆಲವು ಮತದಾರರು ಈ ಕಲಾಪದಲ್ಲಿ ಭಾಗವಹಿಸಲಿದ್ದಾರೆ. ಚುನಾವಣಾ ಆಯೋಗದ ಮೇಲಿನ ತಮ್ಮ ಆರೋಪಗಳನ್ನು ಜನರೆದುರು ಪ್ರಸ್ತುತಪಡಿಸಲು ಮತ್ತು ‘ಮತ ಕಳ್ಳತನ’ದ ವಿರುದ್ಧ ನವೆಂಬರ್ 1ರಂದು ನಡೆಯುವ ರ್‍ಯಾಲಿಗೆ ವೇದಿಕೆ ಸಿದ್ಧಪಡಿಸಲು ಈ ಅಣಕು ಕಲಾಪವನ್ನು ಆಯೋಜಿಸಲಾಗಿದೆ.

ಸಿಇಸಿ ಮತ್ತು ಚುನಾವಣಾ ಆಯುಕ್ತರಿಗೆ ವಿನಾಯಿತಿ ನೀಡುವ 2023ರ ಕಾಯ್ದೆಯನ್ನು ರದ್ದುಗೊಳಿಸಬೇಕು ಮತ್ತು ಸಿಇಸಿಯನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷಗಳು ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿವೆ. ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಸಿಇಸಿ ಅವರು ತಮ್ಮ ಅಧಿಕಾರವನ್ನು ‘ಏಕಪಕ್ಷೀಯ ಮತ್ತು ಸ್ವೇಚ್ಛೆಯಿಂದ’ ಚಲಾಯಿಸಿದ್ದಾರೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ.

ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆದ ಸಾಮಾನ್ಯ ಮತದಾರರಿಗೂ ತಮ್ಮ ಸಮಸ್ಯೆಗಳನ್ನು ಹಾಗೂ ಅನುಭವಗಳನ್ನು ಹಂಚಿಕೊಳ್ಳಲು ಈ ಅಣಕು ಸಂಸತ್ತಿನಲ್ಲಿ ಅವಕಾಶ ನೀಡಲಾಗುತ್ತದೆ. ವಿರೋಧ ಪಕ್ಷಗಳ ರಾಜಕೀಯ ಸಜ್ಜುಗೊಳಿಸುವಿಕೆಯನ್ನು ತಡೆಯುವ ಉದ್ದೇಶದಿಂದಲೇ ಸರ್ಕಾರ ಕಲಾಪಕ್ಕೆ ಮತ್ತು ರ್‍ಯಾಲಿಗೆ ಸ್ಥಳಗಳ ಅನುಮತಿಯನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಶಿಕ್ಷಕರು ಬದುಕಿನ ಭವಿಷ್ಯ ರೂಪಿಸಿದ ಶಿಲ್ಪಿಗಳು: ಪತ್ರಕರ್ತ ಗೌರೀಶ ಅಕ್ಕಿ

ಶಿಕ್ಷಕರು ನಮಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ, ಬದುಕಿನ ಭವಿಷ್ಯವನ್ನು ರೂಪಿಸಿದ...

ವಿಜಯಪುರ | ಯುವಜನರು ಜವಾಬ್ದಾರಿಯುತ ನೀತಿ ನಿರೂಪಕರಾಗಲಿ: ಡಿಸಿ ಆನಂದ ಕೆ

ಯುವಜನರು ಸಂವಿಧಾನದ ಆಶಯಗಳು, ಸಂಸದೀಯ ಕಾರ್ಯಕಲಾಪಗಳು ಹಾಗೂ ಕಾನೂನು ರಚನೆಯ ಪ್ರಕ್ರಿಯೆಯ...

ಶಾಲೆಯಲ್ಲಿ ಅಸಾರಾಂ ಪ್ರಚಾರ; ಶಾಲಾ ಮುಖ್ಯಶಿಕ್ಷಕ ವಜಾ!

ಛತ್ತೀಸ್‌ಗಢದ ಬಲರಾಮಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ...

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ...