ಬಿಹಾರ ಮಹಿಳೆಯರ ಸಿಂಧೂರದ ಬಗ್ಗೆ ಅಪಹಾಸ್ಯ: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಯಶ್ ಮಹೇಶ್ವರಿ ವಿರುದ್ಧ ಎಫ್‌ಐಆರ್

Date:

ಬಿಹಾರದ ಮಹಿಳೆಯರು ಮತ್ತು ‘ಛಠ್ ಪೂಜೆ’ಯ ಸಿಂಧೂರ ಸಂಪ್ರದಾಯದ ಬಗ್ಗೆ ಅಶ್ಲೀಲ ಹಾಗೂ ಅವಹೇಳನಕಾರಿ ಹಾಸ್ಯ ಮಾಡಿದ ಆರೋಪದ ಮೇಲೆ ದೆಹಲಿ ಮೂಲದ ಸ್ಟ್ಯಾಂಡ್-ಅಪ್ ಕಮಿಡಿಯನ್ ಯಶ್ ಮಹೇಶ್ವರಿ ವಿರುದ್ಧ ಪಟನಾ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ನವೆಂಬರ್ 21ರಂದು ಯಶ್ ಮಹೇಶ್ವರಿ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ‘ಮೊರಲಿ ಕ್ವೆಶ್ಚನಬಲ್’ ಎಂಬ ಶೀರ್ಷಿಕೆಯ ಸ್ಟ್ಯಾಂಡ್-ಅಪ್ ಕಾಮಿಡಿ ವಿಡಿಯೋವನ್ನು ಅಪ್‌ಲೋಡ್ ಮಾಡಿದ್ದರು. ಈ ವಿಡಿಯೋದಲ್ಲಿ ಛಠ್ ಪೂಜೆಯ ಸಂದರ್ಭದಲ್ಲಿ ವಿವಾಹಿತ ಮಹಿಳೆಯರು ಮೂಗಿನಿಂದ ಹಣೆಯ ಬೈತಲೆಯವರೆಗೆ ಹಚ್ಚುವ ಸಾಂಪ್ರದಾಯಿಕ ಕೇಸರಿ ಸಿಂಧೂರವನ್ನು ಅವರ ಪತಿಯ ಗುಪ್ತಾಂಗಕ್ಕೆ ಹೋಲಿಸಿ ಅತ್ಯಂತ ಅಶ್ಲೀಲವಾಗಿ ಹೋಲಿಸಿ ಹಾಸ್ಯ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ ಅವು ಲಾಕ್‌ಹೀಡ್, ಬೋಯಿಂಗ್, ಜನರಲ್ ಡೈನಾಮಿಕ್ಸ್‌ನಂತಹ ಖಾಸಗಿ ಕಂಪನಿಗಳ ಸಿಇಒಗಳ ಸಂಪೂರ್ಣ ನಿಯಂತ್ರಣದಲ್ಲಿವೆ... ನಾನು ಬರವಣಿಗೆಯನ್ನೇ ವೃತ್ತಿಯಾಗಿಸಿಕೊಂಡವನು;...

ಇದನ್ನೂ ಓದಿ: ಉತ್ತರ ಪ್ರದೇಶ | ಎರಡು ದಿನದಲ್ಲೇ 17 ನವಜಾತ ಹೆಣ್ಣು ಶಿಶುಗಳಿಗೆ ‘ಸಿಂಧೂರ್’ ಎಂದು ನಾಮಕರಣ

ಅಲ್ಲದೆ, ಸಿಂಧೂರ ಹಚ್ಚಿದ ಮಹಿಳೆಯರನ್ನು ಹನುಮಂತನಿಗೆ ಹೋಲಿಸಿದ್ದಲ್ಲದೆ, ಬಿಹಾರದ ಮಹಿಳೆಯರು ಮತ್ತು ಹರಿಯಾಣದ ಪುರುಷರ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಈ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಯಿತು.

ಪಟನಾ ಪೊಲೀಸರು, ನವೆಂಬರ್ 24ರಂದು ಯಶ್ ಮಹೇಶ್ವರಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 75(1), 79, 351, 352 ಹಾಗೂ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66ಸಿ ಮತ್ತು 66ಡಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪಟನಾ ಪೊಲೀಸರು ‘ಎಕ್ಸ್’ (X) ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ಮತ್ತೊಂದೆಡೆ, ಬಿಹಾರ ರಾಜ್ಯ ಮಹಿಳಾ ಆಯೋಗವು ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ (Suo Motu) ಕೈಗೆತ್ತಿಕೊಂಡಿದ್ದು, ಆರೋಪಿಯನ್ನು ಶೀಘ್ರ ಬಂಧಿಸುವಂತೆ ಮತ್ತು ಆಕ್ಷೇಪಾರ್ಹ ವಿಡಿಯೋವನ್ನು ತೆಗೆದುಹಾಕುವಂತೆ ಪಟನಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಾರ್ತಿಕೇಯ ಕೆ. ಶರ್ಮಾ ಅವರಿಗೆ ಪತ್ರ ಬರೆದಿದೆ. ಸುಪ್ರೀಂ ಕೋರ್ಟ್ ವಕೀಲೆ ಅಮಿತಾ ಸಚ್‌ದೇವ್ ಸಹ ಕಮಿಡಿಯನ್‌ಗೆ ಲೀಗಲ್ ನೋಟಿಸ್ ಜಾರಿಗೊಳಿಸಿದ್ದಾರೆ.

ಯಶ್ ಮಹೇಶ್ವರಿ ಅವರ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಶಿವಸೇನೆ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಪಕ್ಷಾತೀತವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಹಿರಿಯ ವಕೀಲ ಮತ್ತು ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರು, “ಕಾಮಿಡಿ ಹೆಸರಿನಲ್ಲಿ ಭಾರತದ ಸಾಂಸ್ಕೃತಿಕ ಮೌಲ್ಯಗಳು ಮತ್ತು ಮಹಿಳೆಯರ ಘನತೆಗೆ ಧಕ್ಕೆ ತರುವುದನ್ನು ಸಹಿಸಲಾಗದು. ಬಿಹಾರ ಮತ್ತು ದೆಹಲಿ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಬಿಹಾರದ ಎಲ್ಲಾ ಜಿಲ್ಲೆಗಳಲ್ಲೂ ಇವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ವಿವಾದ ತೀವ್ರಗೊಳ್ಳುತ್ತಿದ್ದಂತೆ ಯಶ್ ಮಹೇಶ್ವರಿ ತಮ್ಮ ಯೂಟ್ಯೂಬ್ ಚಾನೆಲ್‌ನಿಂದ ವಿವಾದಿತ ವಿಡಿಯೋವನ್ನು ತೆಗೆದುಹಾಕಿದ್ದು, ಇನ್‌ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ. ಅಲ್ಲದೆ, ವಿಡಿಯೋ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿರುವ ಅವರು, “ಬಿಹಾರದ ಸಾಂಸ್ಕೃತಿಕ ಆಚರಣೆಗಳ ಬಗ್ಗೆ ನಾನು ಆ ರೀತಿ ಮಾತನಾಡಬಾರದಿತ್ತು. ಯಾರ ಧಾರ್ಮಿಕ ಭಾವನೆಗಳಿಗೂ ನೋವುಂಟು ಮಾಡುವ ಉದ್ದೇಶ ನನಗಿರಲಿಲ್ಲ. ನನ್ನಿಂದ ನೂರಕ್ಕೆ ನೂರರಷ್ಟು ತಪ್ಪಾಗಿದೆ, ಮನಸ್ಪೂರ್ವಕವಾಗಿ ಕ್ಷಮೆ ಕೇಳುತ್ತೇನೆ ಮತ್ತು ಮುಂದೆ ಇಂತಹ ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇನೆ” ಎಂದು ಹೇಳಿದ್ದಾರೆ.

ಮಹಿಳೆಯರ ಕೇಂದ್ರೀಕರಿಸಿ ಹಾಸ್ಯಗಳ ಹೆಚ್ಚಳ

ಇತ್ತೀಚಿನ ದಿನಗಳಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯಲ್ಲಿ ಮಹಿಳೆಯರು, ಸಂಬಂಧಗಳು ಮತ್ತು ಸಂಸ್ಕೃತಿಯನ್ನು ಕೇಂದ್ರೀಕರಿಸಿ ಮಾಡುವ ಹಾಸ್ಯಗಳು ಹೆಚ್ಚಾಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾದ ಮತ್ತೊಂದು ವಿವಾದಾತ್ಮಕ ಪ್ರಸಂಗವೆಂದರೆ ‘370 ರೂಪಾಯಿ ಬಿರಿಯಾನಿ’ ಹಾಸ್ಯ. ಸ್ಟ್ಯಾಂಡ್-ಅಪ್ ಕಾಮಿಡಿಯ ಹೆಸರಿನಲ್ಲಿ ಮಹಿಳೆಯರನ್ನು ಹೇಗೆ ಅಗ್ಗವಾಗಿ ಮತ್ತು ಅವಹೇಳನಕಾರಿಯಾಗಿ ಬಿಂಬಿಸಲಾಗುತ್ತಿದೆ ಎಂಬುದಕ್ಕೆ ಈ ಘಟನೆಯೂ ಒಂದು ಪ್ರಮುಖ ಉದಾಹರಣೆ.

ಸ್ಟ್ಯಾಂಡ್-ಅಪ್ ಕಾಮಿಡಿ ಕಾರ್ಯಕ್ರಮವೊಂದರಲ್ಲಿ ಕಾಮಿಡಿಯನ್ ಒಬ್ಬರು ಡೇಟಿಂಗ್ ಮತ್ತು ಸಂಬಂಧಗಳ ಕುರಿತು ಹಾಸ್ಯ ಮಾಡುವ ಭರದಲ್ಲಿ, ಮಹಿಳೆಯರ ವ್ಯಕ್ತಿತ್ವ ಮತ್ತು ಘನತೆಯನ್ನು ಕೇವಲ ‘370 ರೂಪಾಯಿಯ ಬಿರಿಯಾನಿ’ಗೆ ಹೋಲಿಸಿ ಅಶ್ಲೀಲ ಹಾಗೂ ಕೀಳುಮಟ್ಟದ ವ್ಯಾಖ್ಯಾನ ನೀಡಿದ್ದರು. ಯಶ್ ಮಹೇಶ್ವರಿ ಅವರ ‘ಛಠ್-ಸಿಂಧೂರ’ ವಿವಾದವಿರಲಿ ಅಥವಾ ‘370 ರೂಪಾಯಿ ಬಿರಿಯಾನಿ’ ಹಾಸ್ಯವಿರಲಿ—ಎರಡರಲ್ಲೂ ಕಂಡುಬರುವ ಸಾಮಾನ್ಯ ಅಂಶವೆಂದರೆ, ಹಾಸ್ಯದ ಚೌಕಟ್ಟನ್ನು ಮೀರಿ ಮಹಿಳೆಯರ ಘನತೆ, ನಂಬಿಕೆ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವುದು.

ಮತ್ತೊಂದೆಡೆ, ಇಂದು ಮಹಿಳಾ ಸ್ಟ್ಯಾಂಡ್-ಅಪ್ ಕಾಮಿಡಿಯನ್‌ಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದೆ. ಅವರು ತಮ್ಮದೇ ಜೀವನಾನುಭವ, ಸಮಾಜ ಮಹಿಳೆಯರ ಮೇಲೆ ಹೇರುವ ಕಟ್ಟುಪಾಡುಗಳು, ಮತ್ತು ಲಿಂಗ ಅಸಮಾನತೆಯನ್ನು ಹಾಸ್ಯದ ಮೂಲಕವೇ ಮೊನಚಾಗಿ ವಿಡಂಬಿಸುತ್ತಿದ್ದಾರೆ. ಇಲ್ಲಿ ಮಹಿಳೆಯರನ್ನು ಕೇವಲ ಹಾಸ್ಯದ ವಸ್ತುವನ್ನಾಗಿ ನೋಡದೆ, ಅವರ ದೃಷ್ಟಿಕೋನವನ್ನು ಸಮಾಜದ ಮುಂದಿಡುವ ಪ್ರಯತ್ನ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಹಲವರ ಬಂಧನ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್; 10 ದಿನಗಳಲ್ಲಿ ಸಮಗ್ರ ಉತ್ತರಕ್ಕೆ ಸೂಚನೆ

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಬಾಗಲಕೋಟೆ |ವಿದ್ಯಾರ್ಹತೆಗೆ ತಕ್ಕ ಉದ್ಯೋಗ, ಉದ್ಯಮಕ್ಕೆ ಮಾರ್ಗದರ್ಶನ: ‘ಉದ್ಯೋಗ ಸೇತು’ ನೋಂದಣಿಗೆ ಆಹ್ವಾನ

ರಾಜ್ಯದ ನಿರುದ್ಯೋಗಿ ಯುವಜನತೆಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ...

ಗದಗ ಅಭಿವೃದ್ಧಿಗೆ ಹೊಸ ವೇಗ: ಶಾಸಕ ಎಚ್.ಕೆ. ಪಾಟೀಲ್

ಗದಗ ನಗರದಲ್ಲಿ ಸುಸಜ್ಜಿತ ವಸತಿ ವಿನ್ಯಾಸ ನಿರ್ಮಿಸಬೇಕೆಂಬ ಬಹುದಿನಗಳ ಕನಸು ಇಂದು...

ಗದಗ | ಮಾದರಿ ನಗರ ನಿರ್ಮಾಣಕ್ಕೆ ಆದ್ಯತೆ: ಸಚಿವ ಬಸವರಾಜ ರಾಯರೆಡ್ಡಿ

ಗದಗ-ಬೆಟಗೇರಿ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ, ಸುಂದರ ಹಾಗೂ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ...