ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು; ಖರ್ಗೆ, ರಾಹುಲ್‌ ಏನೆಂದರು?

Date:

ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್‌’ ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಇಂದು ಸಂಸತ್‌ ಭವನದಲ್ಲಿ ಸರ್ವಪಕ್ಷ ಸಭೆ ಹಮ್ಮಿಕೊಂಡಿತ್ತು. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗೈರು ಹಾಜರಾಗಿದ್ದರು.

- Advertisement -

ಸರ್ವಪಕ್ಷ ಸಭೆ ಮುಗಿದ ನಂತರ ಪ್ರಧಾನಿ ಮೋದಿ ಅವರ ಗೈರು ಹಾಜರಿಯ ಬಗ್ಗೆ ಪತ್ರಕರ್ತರು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನಿಸಿದರು. ಆಗ ಉತ್ತರಿಸಿದ ಖರ್ಗೆ, ಟೀಕೆ ಮಾಡಲು ಇದು ಸೂಕ್ತವಾದ ಸಮಯವಲ್ಲ. ನಾವು ಪ್ರಸ್ತುತ ಸಂಕಷ್ಟದ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದೇವೆ. ದೇಶದ ಹಿತಾಸಕ್ತಿ ನಮಗೆ ಮುಖ್ಯ. ಈ ಬಗ್ಗೆ ನಾವು ನಂತರದ ಸಂದರ್ಭಗಳಲ್ಲಿ ಕೇಳುತ್ತೇವೆ ಎಂದು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೇ ಸಂದರ್ಭದಲ್ಲಿ ಮಾತನಾಡಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ನಾವು ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ದೇಶದ ಹಿತಾಸಕ್ತಿ ನಮಗೆ ಮುಖ್ಯವಾಗಿದೆ ಎಂದು ತಿಳಿಸಿದರು.

ಇದು ನಿಜವಾದ ರಾಷ್ಟ್ರಪ್ರೇಮ. ದೇಶದ ಪರವಾಗಿ ಯಾವಾಗಲು ದೇಶಭಕ್ತರು ನಿಲ್ಲುತ್ತಾರೆ ಎಂದು ನೆಟ್ಟಿಗರು ಸಾಮಾಜಿಕ ಮಾಧ್ಯಮದಲ್ಲೂ ಕೂಡ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ.

100ಕ್ಕೂ ಹೆಚ್ಚು ಉಗ್ರರ ಹತ್ಯೆ ಎಂದು ಹೇಳಿದ ರಾಜನಾಥ್

ಸರ್ವಪಕ್ಷ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಕಾರ್ಯಾಚರಣೆಯಲ್ಲಿ ನೂರು ಉಗ್ರರನ್ನು ಕೊಲ್ಲಲಾಗಿದೆ. ಕಾರ್ಯಾಚರಣೆಯು ಇನ್ನೂ ಮುಂದುವರಿಯುತ್ತದೆ. ಪಾಕ್‌ ದಾಳಿ ನಡೆಸಿದರೆ ನಾವು ಪ್ರತಿದಾಳಿ ನಡೆಸಲು ತಯಾರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ನಡೆದ ಉಗ್ರರ ದಾಳಿ ಬಳಕ ನಡೆಯುತ್ತಿರುವ ಎರಡನೇ ಸರ್ವಪಕ್ಷ ಸಭೆ ಇದಾಗಿದೆ.

ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಜೆ.ಪಿ. ನಡ್ಡಾ, ವಿದೇಶಾಂಗ ಸಚಿವ ಎಸ್.ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಪರವಾಗಿ ಹಾಜರಾಗಿದ್ದರು. ಕಾಂಗ್ರೆಸ್‌ನಿಂದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಜರಿದ್ದರು.

ಇತರ ವಿರೋಧ ಪಕ್ಷಗಳಾದ ತೃಣಮೂಲ ಕಾಂಗ್ರೆಸ್‌ನ ಸಂದೀಪ್ ಬಂಡೋಪಾಧ್ಯಾಯ, ಡಿಎಂಕೆಯ ಟಿ.ಆರ್.ಬಾಲು, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವ ಸೇನಾದ (ಯುಬಿಟ) ಸಂಜಯ್ ರಾವುತ್, ಎನ್‌ಸಿಪಿಯ (ಶರದ್ ಪವಾರ್) ಸುಪ್ರಿಯಾ ಸುಳೆ ಅವರೂ ಪಾಲ್ಗೊಂಡಿದ್ದರು.

ಜೆಡಿ(ಯು) ನಾಯಕ ಸಂಜಯ್ ಝಾ, ಎಲ್‌ಜಿಪಿ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರೂ ಸಭೆಯಲ್ಲಿದ್ದಾರೆ.

‘ಆಪರೇಷನ್ ಸಿಂಧೂರ’ದ ಕುರಿತು ಎಲ್ಲ ಪಕ್ಷಗಳಿಗೆ ಮಾಹಿತಿ ನೀಡಲು ಸರ್ಕಾರ ಬಯಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಕಾಮ್ ನಲ್ಲಿ ಉಗ್ರರು ಏಪ್ರಿಲ್ 22ರಂದು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ, ಭಾರತೀಯ ಸೇನೆ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ ಬುಧವಾರ ಮುಂಜಾನೆ ‘ಆಪರೇಷನ್ ಸಿಂಧೂರ್‌’ ಕಾರ್ಯಾಚರಣೆ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....