ಮೋದಿ, ಶಾ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಪ್ರಧಾನಿಯ ‘ವೈಚಾರಿಕ ನಕ್ಸಲರು’ ಹೇಳಿಕೆಗೆ ಬಘೇಲ್ ತಿರುಗೇಟು

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ವಿರುದ್ಧ ನಡೆಸಿದ ‘ವೈಚಾರಿಕ ನಕ್ಸಲರು’ ಅಥವಾ ‘ಮಾನಸಿಕ ನಕ್ಸಲರು’ ಎಂಬ ವಾಗ್ದಾಳಿಗೆ ಕಾಂಗ್ರೆಸ್ ಹಿರಿಯ ನಾಯಕ, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತೀವ್ರವಾಗಿ ತಿರುಗೇಟು ನೀಡಿದ್ದಾರೆ.

- Advertisement -

ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಬ್ಬರೂ ತಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ ಎಂದು ಭೂಪೇಶ್ ಬಘೇಲ್ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಇದನ್ನೂ ಓದಿ: ‘ಮೋದಿಯ ಸುಳ್ಳುಗಳನ್ನು ಯೋಧರು ನಂಬಲಿಲ್ಲ’: ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಾಹುಲ್ ತಿರುಗೇಟು

ಪ್ರಧಾನಮಂತ್ರಿಯವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಘೇಲ್, “ನಕ್ಸಲಿಸಂ ಮತ್ತು ದೇಶದ ಭದ್ರತೆಯ ವಿಷಯದಲ್ಲಿ ಸಾರ್ವಜನಿಕರನ್ನು ಹಾದಿತಪ್ಪಿಸಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ವಿರೋಧ ಪಕ್ಷದ ನಾಯಕರನ್ನು ‘ಮಾನಸಿಕ ನಕ್ಸಲರು’ ಎಂದು ಕರೆಯುವ ಮೂಲಕ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಹಾಗೂ ಈ ಇಬ್ಬರೂ ನಾಯಕರು ತಮ್ಮ ಮಾನಸಿಕ ಸ್ಥಿರತೆಯನ್ನು ಕಳೆದುಕೊಂಡಿದ್ದಾರೆ,” ಎಂದು ಆರೋಪಿಸಿದರು.

ಅಲ್ಲದೆ, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಬಸ್ತಾರ್ ಮೂಲದ ಜನರ ಮತ್ತು ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡುವವರನ್ನು ಅಥವಾ ಸರ್ಕಾರದ ಜನವಿರೋಧಿ ನೀತಿಗಳನ್ನು ಪ್ರಶ್ನಿಸುವವರನ್ನು ‘ನಕ್ಸಲರು’ ಎಂದು ಬಿಂಬಿಸುವುದು ಮೋದಿಯವರ ಅಭ್ಯಾಸವಾಗಿದೆ ಎಂದು ಅವರು ದೂರಿದರು.

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಆಡಳಿತದಲ್ಲಿದ್ದಾಗ ನಕ್ಸಲ್ ನಿಗ್ರಹ ಕಾರ್ಯಚರಣೆಗೆ ನೀಡಿದ ಕೊಡುಗೆಯನ್ನು ಸ್ಮರಿಸಿದ ಬಘೇಲ್, ನಕ್ಸಲಿಸಂ ಸಮಸ್ಯೆಯನ್ನು ರಾಜಕೀಯ ವಸ್ತುವನ್ನಾಗಿ ಮಾಡದೆ ಗಂಭೀರವಾಗಿ ಎದುರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸತ್ಯಶುದ್ಧ ಕಾಯಕ, ಪ್ರಾಮಾಣಿಕತೆಯಿಂದ ಜೀವನದಲ್ಲಿ ಯಶಸ್ಸು: ಬಸವಲಿಂಗ ಪಟ್ಟದ್ದೇವರು

ಭಾಲ್ಕಿ: ಸತ್ಯಶುದ್ಧ ಕಾಯಕ, ಕಾಯಕನಿಷ್ಠೆ, ಪ್ರಾಮಾಣಿಕ ನಡೆ ಹಾಗೂ ನಿರಂತರ ಪರಿಶ್ರಮದಿಂದ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ ಕಲಿಯುವುದು ಯಾವಾಗ?

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ...

ಬೀದರ್‌ | ಹುಬ್ಬಳಿಯಲ್ಲಿ ನ.17ರಂದು ಖಾಸಗಿ ಶಾಲೆಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ಬೇಡಿಕೆಗಳ...

ಲಂಡನ್‌ | ಭಾರತೀಯ ಮೂಲದ ಯುವತಿ ಗುಂಡೇಟಿಗೆ ಬಲಿ; ಓರ್ವನ ಬಂಧನ

ಭಾರತೀಯ ಮೂಲದ 26 ವರ್ಷದ ಯುವತಿಯೊಬ್ಬರು ಗುಂಡೇಟಿನಿಂದ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ...