ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ; ಹೊಸ ಮಸೂದೆ ಮಂಡನೆ: ಪ್ರಧಾನಿ ಮೋದಿ ಘೋಷಣೆ

Date:

ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ಬಿಡುಗಡೆ ಮಾಡಿದ ವಿಡಿಯೋ ಹೇಳಿಕೊಂಡಿದ್ದಾರೆ. “ಶುಕ್ರವಾರ (ಇಂದು) ನಡೆಯುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕಠಿಣ ಕ್ರಮಗಳ ಕುರಿತು ಚರ್ಚಿಸಲಾಗುವುದು. ಸಚಿವ ಸಂಪುಟದ ಅನುಮೋದನೆ ದೊರೆತ ಬಳಿಕ ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಮಸೂದೆಯನ್ನು ಮಂಡಿಸಿ ಸಾಧ್ಯವಾದಷ್ಟು ಬೇಗ ಅಂಗೀಕರಿಸಲು ಸರ್ಕಾರ ಪ್ರಯತ್ನಿಸಲಿದೆ” ಎಂದು ಹೇಳಿದ್ದಾರೆ.

- Advertisement -

ನೀಟ್ ಸೇರಿದಂತೆ ಹಲವು‌ ಪರೀಕ್ಷೆಗಳಲ್ಲಿ ನಡೆದಿರುವ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ದೀರ್ಘಕಾಲದಿಂದ ಮೌನವಾಗಿದ್ದ ಮೋದಿ, ಇದೀಗ ತಮ್ಮ‌ ಮಾತಿನ ವಿಡಿಯೋ ಬಿಡುಗಡೆ ಮಾಡಿದ್ದಾರೆ. “ಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ ವಿಷಯವಲ್ಲ. ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಇದು ಅಪಾರ ನೋವನ್ನುಂಟು ಮಾಡಿದೆ ಎಂಬುದು ನನಗೆ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ನಿಯಂತ್ರಿಸಲು ತ್ವರಿತ ನ್ಯಾಯಾಲಯಗಳ (ಫಾಸ್ಟ್-ಟ್ರ್ಯಾಕ್ ಕೋರ್ಟ್) ಸ್ಥಾಪನೆ, ತಪ್ಪಿತಸ್ಥರಿಗೆ ಇನ್ನಷ್ಟು ಕಠಿಣ ಶಿಕ್ಷೆ ಸೇರಿದಂತೆ ಹಲವು ಹೊಸ ನಿಯಮಗಳನ್ನು ಜಾರಿಗೆ ತರಲಾಗುವುದು” ಎಂದು ಮೋದಿ ಹೇಳಿದ್ದಾರೆ.

“ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದ ನಂತರ ಕಳೆದ ಎರಡೂವರೆ ತಿಂಗಳಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಆದರೆ, ಸರ್ಕಾರದ ಮೊದಲ ಆದ್ಯತೆ ವಿದ್ಯಾರ್ಥಿಗಳ ಒಂದು ಶೈಕ್ಷಣಿಕ ವರ್ಷ ವ್ಯರ್ಥವಾಗದಂತೆ ನೋಡಿಕೊಳ್ಳುವುದಾಗಿತ್ತು. ಅದಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಿ, ಸುಮಾರು 22 ಲಕ್ಷ ವಿದ್ಯಾರ್ಥಿಗಳು ಅತಿ ಕಡಿಮೆ ಅವಧಿಯಲ್ಲಿ ಮರುಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಲಾಯಿತು” ಎಂದು ಹೇಳಿಕೊಂಡಿದ್ದಾರೆ.

“ಜುಲೈ 19ರಂದು ಪರೀಕ್ಷಾ ಫಲಿತಾಂಶ ಪ್ರಕಟವಾಯಿತು. ಇಂದು ನಾನು ಸಂಬಂಧಿತ ಇಲಾಖೆಗಳಿಗೆ ತ್ವರಿತ ನ್ಯಾಯಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೇನೆ. ತಡರಾತ್ರಿಯಲ್ಲಿ ಇಲಾಖೆಗಳು ಈ ಸಂಬಂಧದ ಪ್ರಸ್ತಾವನೆಯನ್ನು ನನ್ನ ಮುಂದೆ ಮಂಡಿಸಿವೆ. ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ ಮತ್ತು ಕಠಿಣ ಶಿಕ್ಷೆಯಂತಹ ನಿಯಮಗಳನ್ನು ಒಳಗೊಂಡ ಈ ಪ್ರಸ್ತಾವನೆಯನ್ನು ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಸಚಿವ ಸಂಪುಟದ ಸಹೋದ್ಯೋಗಿಗಳ ಸಲಹೆಗಳನ್ನು ಪಡೆದು ಮಸೂದೆಗೆ ಅಂತಿಮ ರೂಪ ನೀಡಲಾಗುವುದು. ಸೋಮವಾರದಿಂದ ಸಂಸತ್ತಿನ ಎರಡನೇ ವಾರದ ಕಲಾಪ ಆರಂಭವಾಗುತ್ತಿರುವುದರಿಂದ ಸಾಧ್ಯವಾದಷ್ಟು ಬೇಗ ಈ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲು ಪ್ರಯತ್ನಿಸಲಾಗುವುದು,” ಎಂದು ಹೇಳಿದ್ದಾರೆ.

ಸೋನಮ್ ವಾಂಗ್ಚುಕ್ ಅವರ ಉಪವಾಸದ ಕುರಿತುನ’ಎಕ್ಸ್’ನಲ್ಲಿ‌ಪೋಸ್ಟ್ ಹಂಚಿಕೊಂಡಿರುವ ಮೋದಿ, “ಸೋನಮ್ ಜಿ ಅವರು ವೈದ್ಯರ ಸಲಹೆಯಂತೆ ತಮ್ಮ ದಿನಚರಿಯನ್ನು ಅನುಸರಿಸಿ, ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ತಮ್ಮ ಹಳೆಯ ತೂಕ ಮತ್ತು ಆರೋಗ್ಯವನ್ನು ಮರಳಿ ಪಡೆಯಬೇಕೆಂದು ಕೋರುತ್ತೇನೆ. ಸೋನಮ್ ಜಿ ಅವರು ಪೂರ್ಣ ಆರೋಗ್ಯದಿಂದಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...