ಆರಂಭದಲ್ಲೇ ಮೋದಿ ಸರ್ಕಾರಕ್ಕೆ ಶುರುವಾಯ್ತು ಸಂಕಷ್ಟ; ಭಾರಿ ಬೇಡಿಕೆಯಿಟ್ಟ ನಿತೀಶ್

Date:

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಎರಡನೇ ಅತೀ ದೊಡ್ಡ ಮಿತ್ರಪಕ್ಷ ಆರಂಭದಲ್ಲೇ ಸಂಕಷ್ಟ ತಂದೊಡ್ಡಿದೆ. ನೂತನ ಸರ್ಕಾರದ ಬಜೆಟ್‌ನಲ್ಲಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ್‌ ರಾಜ್ಯ ಸರ್ಕಾರ ಹಲವು ಯೋಜನೆಗಳಿಗೆ ಸಹಾಯವಾಗಲು 30 ಸಾವಿರ ಕೋಟಿ ರೂ ಅನುದಾನ ನೀಡುವಂತೆ ಬೇಡಿಕೆಯಿಟ್ಟಿದೆ. ಎನ್‌ಡಿಎ ಸರ್ಕಾರಕ್ಕೆ ಮೊದಲನೇ ದೊಡ್ಡ ಪರೀಕ್ಷೆ ಇದಾಗಿದೆ.

- Advertisement -

ಜೆಡಿಯುದ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರದ ಪ್ರತಿನಿಧಿಗಳು ಕಳೆದ ತಿಂಗಳು ಹಮ್ಮಿಕೊಳ್ಳಲಾಗಿದ್ದ ನಿರ್ಮಲಾ ಸೀತಾರಾಮನ್‌ ನೇತೃತ್ವದ ಬಜೆಟ್‌ ಪೂರ್ವಸಿದ್ಧತಾ ಸಭೆಯ ವೇಳೆ ಬಹಿರಂಗವಾಗಿ ಕೇಳಲಿಲ್ಲವಾದರೂ ಖಾಸಗಿಯಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಸರ್ಕಾರ ಬಿಹಾರದ ಮನವಿಯನ್ನು ಸ್ವೀಕರಿಸಿದ್ದು, ರಾಜ್ಯಕ್ಕೆ ಈ ವರ್ಷ ಎಷ್ಟು ಅನುದಾನ ನೀಡುತ್ತೇನೆಂದು ತಿಳಿಸಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನರೇಂದ್ರ ಮೋದಿ ಸರ್ಕಾರದ ಎನ್‌ಡಿಎ ಸರ್ಕಾರದಲ್ಲಿ ಚಂದ್ರಬಾಬು ನೇತೃತ್ವದ ತೆಲುಗು ದೇಶಂ ಪಕ್ಷ ಈಗಾಗಲೇ ಆಂಧ್ರ ಪ್ರದೇಶ ರಾಜ್ಯಕ್ಕೆ ಮುಂದಿನ ಕೆಲವು ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಅನುದಾನ ನೀಡುವಂತೆ ತನ್ನ ಬೇಡಿಕೆಯೊಡ್ಡಿದೆ.

ಎರಡು ಮಿತ್ರಪಕ್ಷಗಳ ಸಂಯೋಜಿತ ಹಣಕಾಸಿನ ಬೇಡಿಕೆಗಳು ಕೇಂದ್ರ ಒಟ್ಟು ಬಜೆಟ್ ಮೊತ್ತವಾದ 2.2 ಲಕ್ಷ ಕೋಟಿ ಮೊತ್ತದಲ್ಲಿ ಅರ್ಧದಷ್ಟು ಹಣವಾಗಿದೆ. ಮೋದಿ ಸರ್ಕಾರ ಆರಂಭದಲ್ಲೇ ಈ ಸವಾಲನ್ನು ಹೇಗೆ ನಿಗ್ರಹಿಸುತ್ತದೆ ಎಂಬುದು ಚರ್ಚೆಯ ವಿಷಯವಾಗಿದೆ. ಈ ವರ್ಷದ ಬಜೆಟ್‌ನಲ್ಲಿ ಮೋದಿ ಸರ್ಕಾರಕ್ಕೆ ಒಂದಿಷ್ಟು ಅವಕಾಶವಿದೆ. ಕೇಂದ್ರ ಬ್ಯಾಂಕ್‌ ಸರ್ಕಾರಕ್ಕೆ ದಾಖಲೆ ಮೊತ್ತದ ಲಾಭಾಂಶ ನೀಡಿದೆ. ಜೊತೆಗೆ ತೆರಿಗೆ ಮೊತ್ತವು ಹೆಚ್ಚಾಗಿದೆ. ಇದರಿಂದ ಒಂದಷ್ಟು ಅನುಕೂಲವಾಗಬಹುದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಳೆ ಮತ್ತು ಡೆಂಘೀ- ಜನ ಎಷ್ಟು ಅಂತ ಸಹಿಸಿಕೊಳ್ಳುತ್ತಾರೆ?

ಕಳೆದ ಒಂದು ದಶಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಮೊದಲ ಬಾರಿಗೆ ಬಹುಮತ ಗಳಿಸಲು ವಿಫಲವಾಗಿದ್ದು, ಇತರ ಮಿತ್ರ ಪಕ್ಷಗಳನ್ನು ನೆಚ್ಚಿಕೊಂಡಿದೆ. ಟಿಡಿಪಿ ಹಾಗೂ ಜೆಡಿಯು ಪಕ್ಷಗಳು ಎನ್‌ಡಿಎ ಒಕ್ಕೂಟದಲ್ಲಿ ಶೇ.9.5 ರಷ್ಟು ಸಂಸದರ ಸ್ಥಾನವನ್ನು ಹೊಂದಿವೆ.

ಹಣಕಾಸಿನ ನಿಯಮಗಳು ರಾಜ್ಯಗಳಿಗೆ ಪ್ರದೇಶವಾರು ಜಿಡಿಪಿ ಆಧಾರದ ಮೇಲೆ ಶೇ.3 ರಷ್ಟು ಸಾಲ ನೀಡಬೇಕೆಂದು ಹೇಳುತ್ತವೆ. ಆದರೆ ಬಿಹಾರ್‌ ರಾಜ್ಯವು ಶೇ. 1ರಷ್ಟು ಹೆಚ್ಚಿಗೆ ಕೇಳಿದರೆ, ಆಂದ್ರ ಪ್ರದೇಶ ಶೇ.0.5 ರಷ್ಟು ಅಧಿಕ ಕೇಳುತ್ತಿದೆ.

ಈ ತಿಂಗಳ ಜುಲೈ 23ರಂದು ಮಂಡಿಸಲಾಗುವ ಬಜೆಟ್ ಮಾರ್ಚ್‌ 2025ರವರೆಗೆ ಜಾರಿಯಲ್ಲಿರುತ್ತದೆ. ಕೆಲವು ರಾಜ್ಯಗಳು ಕೇಂದ್ರಕ್ಕೆ ಹೆಚ್ಚು ತೆರಿಗೆ ನೀಡಿದರೂ ದೊಡ್ಡ ಮೊತ್ತದ ಸಾಲ ಪಡೆಯಲು ನಿರ್ಬಂಧವಿದೆ. ಮೋದಿ ಸರ್ಕಾರದ ಮೊದಲ ಆಡಳಿತದ ಅವಧಿಯಲ್ಲಿ ಬಿಹಾರ ಸರ್ಕಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ 1.25 ಲಕ್ಷ ಕೋಟಿ ರೂ. ಪ್ಯಾಕೇಜ್‌ ಪಡೆದಿತ್ತು.

ಈ ನಡುವೆ ಕೆಲವು ವರ್ಷಗಳಿಂದ ಬಿಹಾರ ಮತ್ತು ಆಂಧ್ರಪ್ರದೇಶ ಆರ್ಥಿಕ ಕೊರತೆಯನ್ನು ಎದುರಿಸುತ್ತಿದ್ದು, ಅಭಿವೃದ್ಧಿ ಯೋಜನೆಗಳಿಗೆ ಹಣವನ್ನು ಕಡಿಮೆ ಮಾಡಿವೆ. ಬಿಹಾರವು ರಾಜ್ಯದ ಒಟ್ಟು ಆದಾಯದ ಶೇ. 40 ರಷ್ಟು ಹಣವನ್ನು ವೇತನ, ಪಿಂಚಣಿ ಹಾಗೂ ಬಡ್ಡಿ ಮರು ಪಾವತಿಗೆ ವ್ಯಯಿಸುತ್ತಿದೆ. ಆರ್ಥಿಕತೆ ವಿಚಾರದಲ್ಲಿ ಆಂಧ್ರ ಪ್ರದೇಶದಲ್ಲೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ...