ಮಾತು ತಪ್ಪಿದ ಮೋದಿ ಸರ್ಕಾರ: ವಿದ್ಯಾರ್ಥಿ, ಪ್ರತಿಭಟನಾಕಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಜೆಪಿ ಆಗ್ರಹ

Date:

ದೆಹಲಿ ಸೇರಿದಂತೆ ದೇಶಾದ್ಯಂತ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ-ಯುವಜನರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಮೋದಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಸರ್ಕಾರ ಮೂರೇ ದಿನಗಳಲ್ಲಿ ತನ್ನ ಭರವಸೆಯನ್ನು ಉಲ್ಲಂಘಿಸಿದೆ. ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿದ್ಯಾರ್ಥಿಗಳು ಮತ್ತು ಇತರ ಪ್ರತಿಭಟನಾಕಾರರನ್ನು ಗುರಿಯಾಗಿಸಿ ಬಂಧಿಸಲಾಗುತ್ತಿದೆ. ಈ ಬಗ್ಗೆ ಸಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣವೇ ಬಂಧಿತ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.

- Advertisement -

ಸರ್ಕಾರಗಳ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಿಜೆಪಿ ಪ್ರಕಟಣೆ ನೀಡಿದೆ. “ಪ್ರತಿಭಟನೆಯ ಸಮಯದಲ್ಲಿ ‘ಬಿಜೆಪಿ ಅಥವಾ ಎನ್‌ಡಿಎ ಆಡಳಿತದ ಯಾವುದೇ ರಾಜ್ಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಈಗ ಅಥವಾ ಮುಂದೆಯೂ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳುವುದಿಲ್ಲ’ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಈ ಭರವಸೆಯ ಮೇರೆಗೆ ದೇಶವ್ಯಾಪಿ ಪ್ರತಿಭಟನೆಯನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಸಿಜೆಪಿ ಕೈಗೊಂಡಿತು. ಆದರೆ, ಈಗ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ಬಂಧನ ಮತ್ತು ವಶಕ್ಕೆ ಪಡೆದಿರುವ ವರದಿಗಳು ಬರುತ್ತಿವೆ. ಇವು ಕೇಂದ್ರ ಸರ್ಕಾರದ ಭರವಸೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಕೇಂದ್ರ ಸರ್ಕಾರ, ವಿಶೇಷವಾಗಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಡಾ. ಜಿತೇಂದ್ರ ಸಿಂಗ್ ಅವರು ತಾವು ನೀಡಿದ್ದ ಭರವಸೆಯನ್ನು ತಕ್ಷಣ ಪಾಲಿಸಬೇಕು. ಬಂಧಿತರನ್ನು ಕೂಡಲೇ ಬಿಡುಗಡೆ ಮಾಡುವುದರ ಜೊತೆಗೆ, ದೇಶದ ಯಾವುದೇ ಭಾಗದಲ್ಲಿ ಪ್ರತಿಭಟನಾಕಾರರ ವಿರುದ್ಧ ಬಲವಂತದ ಅಥವಾ ಪ್ರತೀಕಾರಾತ್ಮಕ ಕ್ರಮ ಕೈಗೊಳ್ಳದಂತೆ ಸಂಬಂಧಿತ ರಾಜ್ಯಗಳಿಗೆ ನಿರ್ದೇಶನ ನೀಡಬೇಕು. ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಸಹ ಹಿಂಪಡೆಯಬೇಕು” ಎಂದು ಸಿಜೆಪಿ ಆಗ್ರಹಿಸಿದೆ.

ಈ ಲೇಖನ ಓದಿದ್ದೀರಾ?: ಜೆನ್‌ ಝೀಗಳನ್ನು ಅರ್ಥಮಾಡಿಕೊಳ್ಳದೆ ಬಿಜೆಪಿ ‘ಔಟ್‌ ಡೇಟೆಡ್’ ಆಗುತ್ತಿದೆಯೇ?

“ಬಂಧಿತರ ಬಿಡುಗಡೆಗಾಗಿ ಈಗಾಗಲೇ ನಮ್ಮ ಕಾನೂನು ತಂಡವು ಸಂಬಂಧಿತ ರಾಜ್ಯಗಳ ವಕೀಲರೊಂದಿಗೆ ಸಮನ್ವಯ ಸಾಧಿಸುತ್ತಿದೆ. ಬಂಧಿತರಾದ ಪ್ರತಿಭಟನಾಕಾರರಿಗೆ ಅಗತ್ಯವಿರುವ ಎಲ್ಲ ರೀತಿಯ ಕಾನೂನು ನೆರವು ನೀಡಲಾಗುತ್ತಿದೆ. ಪ್ರತಿಭಟನೆ ಆರಂಭವಾದ ಮೊದಲ ದಿನದಿಂದಲೇ ಈ ಪ್ರಕ್ರಿಯೆ ನಡೆಯುತ್ತಿದೆ” ಎಂದು ಸಿಜೆಪಿ ಹೇಳಿದೆ.

ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಲಿಖಿತ ಭರವಸೆ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದ್ದನ್ನು ಸಿಜೆಪಿ ಉಲ್ಲೇಖಿಸಿದ್ದು, ಜುಲೈ 28ರೊಳಗೆ ಆ ಭರವಸೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ನೆನಪಿಸಿದೆ.

“ಕೇಂದ್ರ ಸರ್ಕಾರವು ತನ್ನ ಭರವಸೆಯಿಂದ ಹಿಂದೆ ಸರಿಯುವುದು ಸಿಜೆಪಿಗೆ ಮಾತ್ರವಲ್ಲದೆ ಸಂವಾದದ ಮಾರ್ಗವನ್ನು ಆಯ್ಕೆ ಮಾಡಿಕೊಂಡ ಲಕ್ಷಾಂತರ ಯುವಜನರ ವಿಶ್ವಾಸಕ್ಕೂ ಧಕ್ಕೆ ತರುತ್ತದೆ” ಎಂದು ಸಿಜೆಪಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್ಐಆರ್ ಅಂತಿಮ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 18,94,144 ಮತದಾರರು:

ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಚುನಾವಣಾ ಆಯೋಗದ...

SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಬೆಳಗಾವಿಯಲ್ಲಿ ಡಿ. 7ರಿಂದ ಚಳಿಗಾಲದ ಅಧಿವೇಶನ

ರಾಜ್ಯ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ...

ಪ್ರಶಾಂತ್ ಕಿಶೋರ್ ಆಪ್ತ, ‘ಜನ್ ಸುರಾಜ್’ ಡಿಜಿಟಲ್ ಮ್ಯಾನೇಜರ್ ರೈಲಿನಿಂದ ನಾಪತ್ತೆ, ನಿಗೂಢ ಸಾವು

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ್ ಸುರಾಜ್ ಪಾರ್ಟಿ'ಯ (ಜೆಎಸ್‌ಪಿ)...