ಮುಖಭಂಗಿತ ಮೋದಿ ಸರ್ಕಾರ: ನೀಟ್ ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಭಾರತೀಯ ವಾಯುಪಡೆ!

Date:

ನೈಸರ್ಗಿಕ ವಿಕೋಪಗಳು ಅಥವಾ ಯುದ್ಧದಂತಹ ತುರ್ತು ಪರಿಸ್ಥಿತಿಗಳಲ್ಲಿ ಬಳಸಬೇಕಾದ ಸಶಸ್ತ್ರ ಪಡೆಗಳನ್ನು ಪ್ರಶ್ನಾಪತ್ರಿಕೆ ಸಾಗಿಸಲು ಬಳಸುವುದು ಆಡಳಿತದ ದೌರ್ಬಲ್ಯವನ್ನು ಎತ್ತಿ ತೋರಿಸುತ್ತದೆ.

- Advertisement -

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ (NTA) ಆರಂಭವಾದಾಗಿನಿಂದ ಇಂದಿನವರೆಗೂ ವಿವಾದಗಳಲ್ಲೇ ಸಿಲುಕಿದೆ. ತನ್ನ ಬೇಜವಾಬ್ದಾರಿಯಿಂದ ವಿದ್ಯಾರ್ಥಿಗಳ ಜೀವನದ ಜತೆ ಚೆಲ್ಲಾಡವಾಡುತ್ತಿದೆ. 2019ರಿಂದ ನೀಟ್ (NEET-UG) ಪರೀಕ್ಷೆಗಳು ನಡೆಸಲು ಆರಂಭಿಸಿದ ನರೇಂದ್ರ ಮೋದಿ ಸರ್ಕಾರದಡಿ ಎನ್‌ಟಿಎ ನಡೆಸಲು ಆರಂಭಿಸಿದೆ. ಅಂದಿನಿಂದ ಇಂದಿನವರೆಗೂ ಪ್ರಶ್ನೆಪತ್ರಿಕೆ ಸೋರಿಕೆಯೇ ದೊಡ್ಡ ಸವಾಲಾಗಿದೆ. ಇದೀಗ ನೀಟ್ ಪರೀಕ್ಷೆಯನ್ನು ಸೋರಿಕೆಯಿಲ್ಲದೆ, ಅಕ್ರಮಗಳಿಲ್ಲದೆ ನಡೆಸಲು ಸಾಧ್ಯವಾಗದ ಮುಖಭಂಗಿತ ಮೋದಿ ಸರ್ಕಾರ ನೀಟ್ ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಭಾರತೀಯ ವಾಯುಪಡೆಯನ್ನು ಬಳಸಲು ಮುಂದಾಗಿದೆ. ಸರ್ಕಾರದ ಈ ಕ್ರಮವು ಆಡಳಿತ ವೈಫಲ್ಯದ ಪ್ರತಿಬಿಂಬ ಎಂದು ವಿಪಕ್ಷಗಳು ಟೀಕಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಳೆದ ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಿಂದಾಗಿ ಎನ್‌ಟಿಎ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಜೂನ್ 21ರಂದು ಮರುಪರೀಕ್ಷೆಯನ್ನು ನಡೆಸಲಾಗುತ್ತಿದೆ. ಮರುಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಅತ್ಯಂತ ಸುರಕ್ಷಿತವಾಗಿ ಸಾಗಿಸಲು ಭಾರತೀಯ ವಾಯುಪಡೆ ವಿಮಾನಗಳನ್ನು ಬಳಸಿಕೊಳ್ಳುವ ಚಿಂತನೆಯನ್ನು ಇದೀಗ ಕೇಂದ್ರ ಸರ್ಕಾರ ನಡೆಸುತ್ತಿದೆ. ಸರ್ಕಾರದ ಈ ನಿರ್ಧಾರವನ್ನು ವಿಪಕ್ಷಗಳು ಟೀಕಿಸುತ್ತಿದೆ. ಪರೀಕ್ಷಾ ಮಂಡಳಿಗಳು ತಮ್ಮದೇ ಆದ ಸುರಕ್ಷಿತ ನೆಟ್‌ವರ್ಕ್ ಹೊಂದುವಲ್ಲಿ ವಿಫಲವಾಗಿದೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಇದನ್ನು ಓದಿದ್ದೀರಾ? NTA ಎಂಬ ವ್ಯವಸ್ಥಿತ ವೈಫಲ್ಯ; ಮೋದಿ ಸರ್ಕಾರದ ಮಹಾ ಅಧ್ವಾನ

ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯು “ಆಡಳಿತಾತ್ಮಕ ಮತ್ತು ಆಡಳಿತ ವೈಫಲ್ಯವನ್ನು ನಾಚಿಕೆ ಇಲ್ಲದೆ ಒಪ್ಪಿದಂತೆ” ಎಂದು ಶಿವಸೇನೆ (ಯುಬಿಟಿ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಟೀಕಿಸಿದ್ದಾರೆ. “ದೇಶದಲ್ಲಿ ಸರಣಿ ಪ್ರಶ್ನೆಪತ್ರಿಕೆ ಸೋರಿಕೆಗಳಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಈಗ ಪರೀಕ್ಷಾ ಪತ್ರಿಕೆಗಳನ್ನು ಸಾಗಿಸಲು ವಾಯುಪಡೆಯನ್ನು ಬಳಸಲು ಮುಂದಾಗಿರುವುದು ಸರ್ಕಾರದ ಸಂಪೂರ್ಣ ಆಡಳಿತ ವೈಫಲ್ಯವನ್ನು ತೋರಿಸುತ್ತದೆ” ಎಂದಿದ್ದಾರೆ.

ಇನ್ನು, “ಕೇವಲ ಪರೀಕ್ಷೆಯ ಮೂಲಸೌಕರ್ಯ ಹಾಗೂ ಸಾಗಾಟದ ನಿರ್ವಹಣೆಗಾಗಿ ರಕ್ಷಣಾ ಸಚಿವರು ಮತ್ತು ಶಿಕ್ಷಣ ಸಚಿವರು ಉನ್ನತ ಮಟ್ಟದ ಸಭೆ ನಡೆಸುವ ಅನಿವಾರ್ಯತೆ ಎದುರಾಗಿದೆ. ಇದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತು ಕೇಂದ್ರ ಶಿಕ್ಷಣ ಸಚಿವಾಲಯದ ಅಸಮರ್ಥತೆಯನ್ನು ಬಹಿರಂಗಪಡಿಸುತ್ತದೆ” ಎಂದು ಟೀಕಿಸಿದ್ದಾರೆ.

ಹಾಗೆಯೇ ಸಶಸ್ತ್ರ ಪಡೆಗಳ ದುರ್ಬಳಕೆಯನ್ನೂ ಪ್ರಶ್ನಿಸಿದ್ದಾರೆ. “ಸಶಸ್ತ್ರ ಪಡೆಗಳ ಪ್ರಾಥಮಿಕ ಜವಾಬ್ದಾರಿ ದೇಶದ ಗಡಿಗಳನ್ನು ಕಾಯುವುದು ಮತ್ತು ರಾಷ್ಟ್ರೀಯ ಭದ್ರತೆ ನೋಡಿಕೊಳ್ಳುವುದು. ಅದರ ಹೊರತಾಗಿ ಶಿಕ್ಷಣ ಸಂಸ್ಥೆಗಳು ಮತ್ತು ಪರೀಕ್ಷಾ ಮಂಡಳಿಗಳ ತಪ್ಪುಗಳನ್ನು ಮುಚ್ಚಿಡುವುದಲ್ಲ” ಎಂದು ಹೇಳಿದ್ದಾರೆ.

ಸಾಮಾನ್ಯವಾಗಿಯೇ ಪರೀಕ್ಷೆಯನ್ನು ನಡೆಸುವಾಗ ಅದನ್ನು ಯಾವುದೇ ಅಡೆತಡೆಯಿಲ್ಲದೆ, ಸುರಕ್ಷಿತವಾಗಿ ನಡೆಸುವ ಜವಾಬ್ದಾರಿ ಪರೀಕ್ಷಾ ಸಂಸ್ಥೆಗಳದ್ದು, ಶಿಕ್ಷಣ ಇಲಾಖೆಯದ್ದು. ಆದರೆ ಇದೀಗ ಮೋದಿ ಸರ್ಕಾರ ವಿಫಲವಾಗಿದೆ. ನೈಸರ್ಗಿಕ ವಿಕೋಪಗಳು ಅಥವಾ ಯುದ್ಧದಂತಹ ತುರ್ತು ಪರಿಸ್ಥಿತಿಗಳಲ್ಲಿ ಬಳಸಬೇಕಾದ ಸಶಸ್ತ್ರ ಪಡೆಗಳನ್ನು ಪ್ರಶ್ನಾಪತ್ರಿಕೆ ಸಾಗಿಸಲು ಬಳಸುವುದು ಆಡಳಿತದ ದೌರ್ಬಲ್ಯವನ್ನು ಎತ್ತಿ ತೋರಿಸುತ್ತದೆ. ದೇಶದ ಸಾಮಾನ್ಯ ಭದ್ರತೆ ಮತ್ತು ಕೊರಿಯರ್/ಸಾರಿಗೆ ವ್ಯವಸ್ಥೆಯ ಮೇಲೆ ಸರ್ಕಾರಕ್ಕೇ ನಂಬಿಕೆ ಇಲ್ಲದಿರುವುದನ್ನು ಇದು ಬಿಂಬಿಸುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...