ಶನಿವಾರದ ದೆಹಲಿ ಪ್ರತಿಭಟನೆಗೂ ಮುನ್ನ CJP ನಾಯಕರನ್ನು ಮೋದಿ ಸರ್ಕಾರ ಬಂಧಿಸಬಹುದು: ಸೌರವ್ ದಾಸ್

Date:

ಎಸ್‌ಐಆರ್‌ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಅಕ್ಟೋಬರ್‌ 10ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಕರೆಕೊಟ್ಟಿದೆ. ಈ ಪ್ರತಿಭಟನೆಗೆ ಸಿದ್ದತೆ ನಡೆಯುತ್ತಿರುವ ಹೊತ್ತಿನಲ್ಲೇ – ಪ್ರತಿಭಟನೆಗೂ ಮುನ್ನವೇ -ತಮ್ಮ ಸಂಘಟನೆಯ ಪ್ರಮುಖ ನಾಯಕರನ್ನು ಬಂಧಿಸಲು ಮೋದಿ ಸರ್ಕಾರ ಸಂಚು ಹೆಣೆಯುತ್ತಿದೆ ಎಂದು ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್‌’ ನಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಸೌರವ್ ದಾಸ್, “ಸರ್ಕಾರವು ನನ್ನನ್ನೂ ಸೇರಿದಂತೆ ಸಿಜೆಪಿ ನಾಯಕ ಅಭೀಜಿತ್ ದೀಪ್ಕೆ, ಅಶುತೋಷ್ ರಾಂಕಾ, ರತ್ನ ಸಿಂಗ್ ಹಾಗೂ ಇತರ ಪ್ರಮುಖರನ್ನು ಬಂಧಿಸಲು ಸಂಚು ರೂಪಿಸುತ್ತಿದೆ. ಇಂತಹ ಸರ್ವಾಧಿಕಾರಿ ಕ್ರಮಗಳಿಂದ ನಮ್ಮ ಹೋರಾಟವನ್ನು ಹತ್ತಿಕ್ಕಬಹುದು ಎಂದು ಸರ್ಕಾರ ಭಾವಿಸಿದ್ದರೆ, ಅದು ಕೇವಲ ಭ್ರಮೆ. ದೇಶದ ಯುವಜನತೆ ಜಾಗೃತರಾಗಿದ್ದಾರೆ. ನಾವು ಜೈಲಿಗೆ ಹೋಗಲು ಅಥವಾ ಅದಕ್ಕಿಂತಲೂ ಭೀಕರ ಪರಿಣಾಮ ಎದುರಿಸಲು ಸದಾ ಸಿದ್ಧರಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

“ಸರ್ಕಾರ ಈ ಹಂತದಲ್ಲಿ ನಮ್ಮನ್ನು ಬಂಧಿಸಿದರೆ ಅದು ದೊಡ್ಡ ತಪ್ಪಾಗಲಿದೆ. ನಾವು ಇರಲಿ ಇಲ್ಲದಿರಲಿ, ಸಾರ್ವಜನಿಕರು ತಮ್ಮ ಹಕ್ಕು ಮತ್ತು ಭವಿಷ್ಯಕ್ಕಾಗಿ ನಡೆಸುತ್ತಿರುವ ಈ ಹೋರಾಟವನ್ನು ಮುಂದುವರಿಸುತ್ತಾರೆ. ಅಕ್ಟೋಬರ್ 10ರಿಂದ ಆರಂಭವಾಗುವ ಈ ಚಳವಳಿಯಲ್ಲಿ ಪ್ರತಿಯೊಬ್ಬ ಭಾರತೀಯನೂ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.

ಸಿಜೆಪಿ ಸಂಸ್ಥಾಪಕ ಅಭೀಜಿತ್ ಡಿಪ್ಕೆ ಕೂಡ ಅಕ್ಟೋಬರ್ 10ಕ್ಕೆ ಇಡೀ ದೇಶ ದೆಹಲಿಯತ್ತ ಬರಲಿದೆ ಎಂದು ಹೇಳಿದ್ದಾರೆ.  ಸಹ-ಸಂಚಾಲಕ ಅಶುತೋಷ್ ರಾಂಕಾ ಅವರು, “ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಥವಾ ಇತರ ಕಠಿಣ ಕಾನೂನುಗಳ ಅಡಿಯಲ್ಲಿ ನಮ್ಮನ್ನು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆಯಿದೆ ಎಂಬುದು ಏಜೆನ್ಸಿ ಮೂಲಗಳಿಂದ ಮಾಹಿತಿ ಬಂದಿದೆ” ಎಂದು ತಿಳಿಸಿದ್ದಾರೆ.

“ಜೂನ್ 6ರಿಂದಲೇ ನಾವು ಜೈಲಿಗೆ ಹೋಗಲು ಮಾನಸಿಕವಾಗಿ ಸಿದ್ಧರಾಗಿದ್ದೇವೆ. ದೇಶವನ್ನು ನಾಶಮಾಡಲು ಹೊರಟಿರುವವರೇ ನಿಜವಾಗಿ ಭಯಗೊಂಡಿದ್ದಾರೆ” ಎಂದು ರಾಂಕಾ ಹೇಳಿದ್ದಾರೆ.

ಕಾನೂನು ತಂಡದ ಮುಖ್ಯಸ್ಥೆ ರತ್ನ ಸಿಂಗ್ ಪ್ರಕಾರ, ತನಿಖಾ ಸಂಸ್ಥೆಯೊಂದರ ಹಿರಿಯ ಅಧಿಕಾರಿಯಿಂದಲೇ ಸೌರವ್ ದಾಸ್‌ಗೆ ಬಂಧನದ ಮಾಹಿತಿ ಲಭ್ಯವಾಗಿದೆ.

ಈ ಲೇಖನ ಓದಿದ್ದೀರಾ?: ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮುಂಬೈ ಮತ್ತು ದೆಹಲಿಯಲ್ಲಿ ಸಾವಿರಾರು ಜನರು ಬೀದಿಗಿಳಿದಿದ್ದರು. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಆದರೆ, ದೆಹಲಿಯ ಜಂತರ್ ಮಂತರ್‌ಗೆ ಶಾಂತಿಯುತ ಮೆರವಣಿಗೆ ಹೊರಟಿದ್ದ ಆಮ್ ಆದ್ಮಿ ಪಾರ್ಟಿ (AAP) ನಾಯಕರು, ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳು ಸೇರಿದಂತೆ 550ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ದೆಹಲಿ ಪೊಲೀಸರ ಕ್ರಮವು ಯುವಜನರ ಆಕ್ರೋಶವನ್ನು ಇಮ್ಮಡಿಗೊಳಿಸಿದೆ. ದೆಹಲಿಯಲ್ಲಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಪ್ರತಿಭಟನೆಗಳು ಮುಂದುವರಿದಿವೆ.  ಪ್ರತಿಭಟನಾಕಾರರನ್ನು ಹತ್ತಿಕ್ಕಲು ದೆಹಲಿ ಪೊಲೀಸರು ನಿರಂತರವಾಗಿ ಯತ್ನಿಸುತ್ತಿದ್ದಾರೆ. ಭಾನುವಾರ, ಎಐಎಸ್‌ಎ ನಾಯಕಿ ನೇಹಾ ಬೋರಾ ಅವರನ್ನು ಮಹಿಳಾ ಸಿಬ್ಬಂದಿಗಳನ್ನು ಒಳಗೊಳ್ಳದೆ ಪುರುಷ ಪೊಲೀಸರೇ ವಶಕ್ಕೆ ಪಡೆದು, ಪ್ರತ್ಯೇಕ ಕಾರಿನಲ್ಲಿ ಕರೆದೊಯ್ದಿದ್ದರು ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 10ರಂದು ನಡೆಯಲಿರುವ ಸಿಜೆಪಿ ಪ್ರತಿಭಟನೆಯು ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸಲಿರುವ ಎರಡನೇ ಬೃಹತ್ ಚಳವಳಿಯಾಗಲಿದೆ. ಈ ಹಿಂದೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಜುಲೈ ತಿಂಗಳಿನಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಧರಣಿ ನಡೆಸಿತ್ತು. ಜುಲೈ 20ರಂದು ನಡೆದ ಪಾರ್ಲಿಮೆಂಟ್‌ ಚಲೋ ಮೆರವಣಿಗೆ ವೇಳೆ 100ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆಪೊಲೀಸರು ಕ್ರೌರ್ಯ ಮೆರೆದಿದ್ದರು. ಅಂತಿಮವಾಗಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೊಂದಿಗೆ ಪ್ರತಿಭಟನೆ ಅಂತ್ಯಗೊಂಡಿತ್ತು. ಇದೀಗ ಎಸ್‌ಐಆರ್ ಮತ್ತು ಚುನಾವಣಾ ಆಯೋಗದ ವಿರುದ್ಧ ಸಿಜೆಪಿ ಮತ್ತೊಮ್ಮೆ ಬೃಹತ್ ಮಟ್ಟದಲ್ಲಿ ದೇಶಾದ್ಯಂತ ಹೋರಾಟಕ್ಕೆ ಮುಂದಾಗಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರಿ 10 ಗಂಟೆಗೂ ಮಹಿಳೆಯರು ನಿರ್ಭಯವಾಗಿ ಓಡಾಡುವಂತಿರಬೇಕು: ದೆಹಲಿ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ

ದೆಹಲಿಯ ಸಾರ್ವಜನಿಕ ಸ್ಥಳಗಳು ಹಾಗೂ ಸಾರಿಗೆ ವ್ಯವಸ್ಥೆಯನ್ನು ಬಳಸುವಾಗ ಪ್ರತಿಯೊಬ್ಬ ಮಹಿಳೆಯೂ...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...