ನೋಯ್ಡಾ ಡಿಎಂ ವಿರುದ್ಧದ ಹೈಕೋರ್ಟ್ ಕಟು ತೀರ್ಪು ಸುಪ್ರೀಂನಲ್ಲಿ ಪ್ರಶ್ನಿಸಲಿರುವ ಮೋದಿ ಸರ್ಕಾರ

Date:

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆ ವಿವೇಚನಾರಹಿತವಾಗಿ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ (ಎನ್ಎಸ್ಎ) ವಿಧಿಸಿದ್ದ ನೋಯ್ಡಾ ಜಿಲ್ಲಾಧಿಕಾರಿ (ಡಿಎಂ) ಮೇಧಾ ರೂಪಂ ವಿರುದ್ಧ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ನೀಡಿದ್ದ ಕಟು ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್ ಪೀಠಕ್ಕೆ ಬುಧವಾರ ಈ ಮಾಹಿತಿ ನೀಡಿದ್ದಾರೆ.

- Advertisement -

ನೋಯ್ಡಾ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಆಕೃತಿ ಚೌಧರಿ ವಿರುದ್ಧ ಡಿಎಂ ಮೇಧಾ ರೂಪಂ ಅವರು ಹೊರಡಿಸಿದ್ದ ಎನ್ಎಸ್ಎ ಬಂಧನ ಆದೇಶವನ್ನು ಹೈಕೋರ್ಟ್ ಸೆಪ್ಟೆಂಬರ್ 2ರಂದು ರದ್ದುಗೊಳಿಸಿತ್ತು. ಅಕ್ರಮ ಬಂಧನಕ್ಕಾಗಿ ವಿದ್ಯಾರ್ಥಿನಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಹಾಗೂ ಆ ಮೊತ್ತವನ್ನು ಜಿಲ್ಲಾಧಿಕಾರಿ ಮೇಧಾ ರೂಪಂ ಅವರ ವೈಯಕ್ತಿಕ ವೇತನದಿಂದಲೇ ವಸೂಲಿ ಮಾಡುವಂತೆ ಹೈಕೋರ್ಟ್ ಆದೇಶಿಸಿತ್ತು. ಮೋದಿ ಸರ್ಕಾರದ ಪರವಾಗಿ ಎಸ್ ಜಿ ಮೆಹ್ತಾ ಅವರು ಇದೇ ತೀರ್ಪನ್ನು ಇದೀಗ ಸುಪ್ರೀಂನಲ್ಲಿ ಪ್ರಶ್ನಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಎನ್ಎಸ್ಎ ಹೇರಿದ್ದ ಡಿಎಂ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಟೀಕಿಸಿತ್ತು. “ಅಧಿಕಾರಿಗಳ ನಿಷ್ಠೆ ಸಂವಿಧಾನಕ್ಕಿರಬೇಕೇ ಹೊರತು ರಾಜಕೀಯ ಕಾರ್ಯಾಂಗಕ್ಕಲ್ಲ. ಅಧಿಕಾರಿಗಳು ತಮ್ಮ ಸಾಂವಿಧಾನಿಕ ಹೊಣೆಗಾರಿಕೆ ಮರೆತರೆ ಉತ್ತರ ಪ್ರದೇಶವು ದಬ್ಬಾಳಿಕೆಯ ರಾಜ್ಯವಾಗಲಿದೆ (Orwellian Dystopia)” ಎಂದು ಎಚ್ಚರಿಸಿತ್ತು. ವಿವೇಚನೆ ಇಲ್ಲದೆ ಕಠಿಣ ಕಾಯ್ದೆ ಹೇರಿರುವ ಡಿಎಂ ನಡವಳಿಕೆ ‘ಹಾಸ್ಯಾಸ್ಪದ’ ಎಂದು ನ್ಯಾಯಮೂರ್ತಿಗಳಾದ ಅತುಲ್ ಶ್ರೀಧರನ್ ಮತ್ತು ಅಚಲ್ ಸಚ್‌ದೇವ್ ಅವರಿದ್ದ ಪೀಠ ಕಟುವಾಗಿ ನುಡಿದಿತ್ತು.

ಹೆಚ್ಚಿನ ವೇತನಕ್ಕೆ ಆಗ್ರಹಿಸಿ ಏಪ್ರಿಲ್ 2026ರಲ್ಲಿ ನೋಯ್ಡಾದಲ್ಲಿ ನಡೆದಿದ್ದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 24 ವರ್ಷದ ಇತಿಹಾಸ ವಿದ್ಯಾರ್ಥಿನಿ ಆಕೃತಿ ಮತ್ತು ಪತ್ರಕರ್ತ ಸತ್ಯ ವರ್ಮಾ ಅವರನ್ನು ಬಂಧಿಸಲಾಗಿತ್ತು. ಕೇವಲ ಪೊಲೀಸ್ ಆರೋಪಗಳ ಆಧಾರದ ಮೇಲೆ, ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸದೆ ಮೇ 13ರಂದು ಇವರ ಮೇಲೆ ಎನ್ಎಸ್ಎ ಹೇರಿದ್ದ ಅಧಿಕಾರಿಗಳ ನಡೆಯನ್ನು ಹೈಕೋರ್ಟ್ ಖಂಡಿಸಿತ್ತು.

ಈ ನಡುವೆ, ಸಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಗೌತಮ್ ಬುದ್ಧ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿಗೆ ಗ್ರೇಟರ್‌ ನೋಯ್ಡಾ ಡಿಎಂ ನೋಟಿಸ್ ನೀಡಿದ್ದನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಇಂದು ತೀವ್ರವಾಗಿ ಖಂಡಿಸಿತು. “ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸೆಪ್ಟೆಂಬರ್ 1ರಂದು ನಾವು ಸ್ಪಷ್ಟ ಆದೇಶ ನೀಡಿದ್ದರೂ, ನೋಟಿಸ್ ಜಾರಿ ಮಾಡುವ ಧೈರ್ಯ ಮ್ಯಾಜಿಸ್ಟ್ರೇಟ್‌ಗೆ ಹೇಗೆ ಬಂತು? ಯಾವೊಬ್ಬ ಮ್ಯಾಜಿಸ್ಟ್ರೇಟ್ ಕೂಡ ನಮ್ಮ ಆದೇಶ ಉಲ್ಲಂಘಿಸುವಂತಿಲ್ಲ” ಎಂದು ಅಧಿಕಾರಿಗಳ ನಡೆಗೆ ಸುಪ್ರೀಂ ಕೋರ್ಟ್ ತೀವ್ರ ಛೀಮಾರಿ ಹಾಕಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...