ಎಲ್ಲ ವಲಯದಲ್ಲೂ ಏಕಸ್ವಾಮ್ಯ ಸೃಷ್ಟಿಸುತ್ತಿರುವ ಮೋದಿ ಸರ್ಕಾರ: ರಾಹುಲ್ ಗಾಂಧಿ

Date:

‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಪ್ರತಿಯೊಂದು ಕ್ಷೇತ್ರದಲ್ಲೂ ‘ಏಕಸ್ವಾಮ್ಯ’ವನ್ನು ಸೃಷ್ಟಿಸುತ್ತಿದೆ’ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಭಾರತದ ಆರ್ಥಿಕತೆ ನಿಯಂತ್ರಣವನ್ನು ಪುನಃ ಎಂಎಸ್‌ಎಂಇಗಳ ಕೈಗೆ ನೀಡಬೇಕೆಂದು’ ಒತ್ತಾಯಿಸಿದ್ದಾರೆ.

- Advertisement -

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿರುವ ಅವರು, ಅತಿಸಣ್ಣ, ಸಣ್ಣ ಮತ್ತು ಮಧ್ಯಮವರ್ಗದ ಕೈಗಾರಿಕಾ ವಲಯದ ಐಸ್‌ಕ್ರೀಂ ತಯಾರಕ ಕಂಪನಿಗಳ ನಿಯೋಗವನ್ನು ಭೇಟಿಯಾಗಿ, ಅವರ ಸಮಸ್ಯೆಗಳನ್ನು ಆಲಿಸಿದ ನಂತರ ಸಾಮಾಜಿಕ ಜಾಲತಾಣವೊಂದರಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

‘ಒಬ್ಬರು ಅಥವಾ ಇಬ್ಬರು ಎಲ್ಲ ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸುತ್ತಿರುವುದು ಭಾರತಕ್ಕೆ ಅಂಟಿರುವ ಶಾಪ. ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ಕ್ಷೇತ್ರಗಳಲ್ಲೂ ಒಬ್ಬರು ಅಥವಾ ಇಬ್ಬರ ಪಾರಮ್ಯಕ್ಕೆ ಅವಕಾಶ ಕಲ್ಪಿಸುತ್ತಿದೆ’ ಎಂದು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಡಿ.19ರಂದು ಮೋದಿ ಸರ್ಕಾರ ಪತನ: ಪೃಥ್ವಿರಾಜ್ ನಂತರ ಸಂಜಯ್ ರಾವತ್ ಹೇಳಿಕೆ​

‘ಸಣ್ಣ ಮತ್ತು ಮಧ್ಯಮವರ್ಗದ ಐಸ್‌ಕ್ರೀಂ ತಯಾರಕರನ್ನು ಭೇಟಿಯಾಗಿ ಚರ್ಚಿಸಿದ ನಂತರ,ಸರ್ಕಾರ ತನಗೆ ಅನುಕೂಲವಾಗಿರುವ ಕೈಗಾರಿಕೋದ್ಯಮಿಗಳ ಲಾಭಕ್ಕಾಗಿ ಸಣ್ಣ ವ್ಯವಹಾರಗಳನ್ನು ನಾಶ ಮಾಡಲು ನಿರ್ಧರಿಸಿರುವುದು ಸ್ಪಷ್ಟವಾಗಿದೆ’ ಎಂದು ಹೇಳಿದ್ದಾರೆ.

‘ಸಣ್ಣ ಐಸ್ ಕ್ರೀಮ್ ತಯಾರಕರು, ಭಾರತದ ಬಡ ಮತ್ತು ಕೆಳ ಮಧ್ಯಮ ವರ್ಗದವರಾಗಿದ್ದಾರೆ. ಇಂಥವರು ದೇಶದಾದ್ಯಂತ ಸಾವಿರಾರು ಮಂದಿ ಇದ್ದಾರೆ. ಲಕ್ಷಾಂತರ ಜನರಿಗೆ ಉದ್ಯೋಗ ಒದಗಿಸುತ್ತಿದ್ದಾರೆ’ ಎಂದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...