ಹುದ್ದೆಗಳ ಭರ್ತಿ ಮಾಡದೆ ಮೋದಿ ಸರ್ಕಾರ ದುರ್ಬಲ ವರ್ಗಗಳ ವಿರೋಧಿಯಾಗಿದೆ: ಮಲ್ಲಿಕಾರ್ಜುನ ಖರ್ಗೆ

Date:

  • ಮಂಜೂರಾದ, ಖಾಲಿ ಇರುವ ಹುದ್ದೆಗಳ ಪಟ್ಟಿ ಬಿಡುಗಡೆ ಮಾಡಿದ ಖರ್ಗೆ
  • ಖಾಲಿ ಹುದ್ದೆಗಳ ಬಗ್ಗೆ ಮೋದಿ ಸರ್ಕಾರ ಟೀಕಿಸಿದ್ದ ರಾಹುಲ್‌ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾನಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡದೇ ಇರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ (ಜೂನ್‌ 20) ವಾಗ್ದಾಳಿ ನಡೆಸಿದ್ದಾರೆ.

- Advertisement -

2014ರ ನಂತರ ಖಾಲಿ ಇರುವ ನಾನಾ ಇಲಾಖೆಗಳ 30 ಲಕ್ಷ ಹುದ್ದೆಗಳಿಗೆ ಬಿಜೆಪಿ ಸರ್ಕಾರ ಭರ್ತಿ ಮಾಡದೆ ಯುವಕರ, ದುರ್ಬಲ ವರ್ಗಗಳಿಗೆ ಮೋಸ ಮಾಡುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತು ಮಂಗಳವಾರ ಟ್ವೀಟ್‌ ಮಾಡಿದ್ದಾರೆ.

“ಪ್ರಧಾನಿ ಮೋದಿ ಸರ್ಕಾರ ದಲಿತ, ಬುಡಕಟ್ಟು, ಹಿಂದುಳಿದ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ ವಿರೋಧಿಯಾಗಿದೆ. ಅದಕ್ಕಾಗಿಯೇ ಮೋದಿ ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ” ಎಂದು ಟ್ವೀಟ್‌ನಲ್ಲಿ ಕುಟುಕಿದ್ದಾರೆ.

ಕೇಂದ್ರ ಸರ್ಕಾರದಲ್ಲಿ ಮಂಜೂರಾದ ಮತ್ತು ಖಾಲಿ ಉಳಿದಿರುವ ಹುದ್ದೆಗಳನ್ನು ಹೋಲಿಕೆ ಮಾಡಿದ ಪಟ್ಟಿಯೊಂದನ್ನು ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಬಿಡುಗಡೆ ಮಾಡಿದ್ದು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“2014ರಿಂದ 2022ರ ವರೆಗಿನ ಅವಧಿಯಲ್ಲಿ ಖಾಲಿ ಹುದ್ದೆಗಳ ಸಂಖ್ಯೆ ದ್ವಿಗುಣಗೊಂಡಿದೆ. ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಪ್ರಧಾನಿ ಮೋದಿ ಸರ್ಕಾರ ಎಂದಿಗೂ ಬದ್ಧತೆ ತೋರಿಲ್ಲ. ಒಟ್ಟಾರೆ ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ” ಎಂದು ಖರ್ಗೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತದ 7 ಕೆಮ್ಮಿನ ಸಿರಪ್‌ಗಳು ವಿಷಪೂರಿತ ಎಂದ ವಿಶ್ವ ಆರೋಗ್ಯ ಸಂಸ್ಥೆ

ಕೇವಲ ಕೆಲವು ಸಾವಿರ ನೇಮಕಾತಿ ಪತ್ರಗಳನ್ನು ಹಂಚುವ ಮೂಲಕ ಪ್ರಧಾನಿ ಮೋದಿ ಚಪ್ಪಾಳೆ ಪಡೆದು ಯುವಕರ ಕಣ್ಣಿಗೆ ಮಣ್ಣು ಎರಚುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯಂತೆ ಯುವಕರಿಗೆ ಉದ್ಯೋಗ ಸೃಷ್ಟಿಸಲು ಮೋದಿ ಸರ್ಕಾರ ವಿಫಲವಾಗಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಎರಡು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರೂ ಸಹ ಖಾಲಿ ಹುದ್ದೆಗಳ ಬಗ್ಗೆ ಮೋದಿ ಸರ್ಕಾರವನ್ನು ಟೀಕಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...