ಸಂಶಯಾಸ್ಪದ ವ್ಯವಹಾರಗಳನ್ನು ಮುಚ್ಚಿಡಲು ಮೋದಿ ಸರ್ಕಾರಕ್ಕೆ ಎಸ್‌ಬಿಐ ಗುರಾಣಿ: ಖರ್ಗೆ ವಾಗ್ದಾಳಿ

Date:

ಮೋದಿ ಸರ್ಕಾರವು ಚುನಾವಣಾ ಬಾಂಡ್‌ಗಳ ಮೂಲಕ ತನ್ನ ಸಂಶಯಾಸ್ಪದ ವ್ಯವಹಾರಗಳನ್ನು ಮರೆಮಾಡಲು ನಮ್ಮ ದೇಶದ ಅತಿದೊಡ್ಡ ಬ್ಯಾಂಕ್ ಅನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಖರ್ಗೆ ಅವರು, ಸುಪ್ರೀಂ ಕೋರ್ಟ್ ಮೋದಿ ಸರ್ಕಾರದ ಚುನಾವಣಾ ಬಾಂಡ್‌ಗಳನ್ನು ‘ಕಪ್ಪು ಹಣದ ಪರಿವರ್ತನೆ ಯೋಜನೆ” “ಅಸಂವಿಧಾನಿಕ”, “ಆರ್‌ಟಿಐ ಉಲ್ಲಂಘನೆ” ಮತ್ತು “ಕಾನೂನುಬಾಹಿರ” ಎಂದು ಪರಿಗಣಿಸಿ ರದ್ದುಗೊಳಿಸಿದೆ. ಅಲ್ಲದೆ ಮಾರ್ಚ್ 6 ರೊಳಗೆ ದಾನಿಗಳ ವಿವರಗಳನ್ನು ಒದಗಿಸುವಂತೆ ಎಸ್‌ಬಿಐಗೆ ಕೇಳಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಆದರೆ ಲೋಕಸಭೆ ಚುನಾವಣೆ ನಂತರ ಕೆಲವೊಂದು ಅನೀತಿಗಳನ್ನು ಮಾಡಬೇಕೆಂದು ಬಿಜೆಪಿ ಬಯಸುತ್ತದೆ. ಈ ಲೋಕಸಭೆಯ ಅಧಿಕಾರಾವಧಿಯು ಜೂನ್ 16 ರಂದು ಕೊನೆಗೊಳ್ಳಲಿದೆ ಮತ್ತು ಎಸ್‌ಬಿಐ ಜೂನ್ 30 ರೊಳಗೆ ಅಂಕಿಅಂಶವನ್ನು ಹಂಚಿಕೊಳ್ಳಲು ಬಯಸುತ್ತದೆ. ಈ ಮೋಸದ ಯೋಜನೆಯ ಪ್ರಮುಖ ಫಲಾನುಭವಿ ಬಿಜೆಪಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

“ಈ ಅಪಾರದರ್ಶಕ ಚುನಾವಣಾ ಬಾಂಡ್‌ಗಳಿಗೆ ಬದಲಾಗಿ ಹೆದ್ದಾರಿಗಳು, ಬಂದರುಗಳು, ವಿಮಾನ ನಿಲ್ದಾಣಗಳು, ವಿದ್ಯುತ್ ಸ್ಥಾವರಗಳು ಇತ್ಯಾದಿಗಳ ಗುತ್ತಿಗೆಗಳನ್ನು ಮೋದಿ ಅವರ ಆಪ್ತರಿಗೆ ಹಸ್ತಾಂತರಿಸಿದ ಬಿಜೆಪಿಯ ಕರಾಳ ವ್ಯವಹಾರಗಳನ್ನು ಮೋದಿ ಸರ್ಕಾರವು ಅನುಕೂಲಕರವಾಗಿ ಮರೆಮಾಡುತ್ತಿಲ್ಲವೇ? ತಜ್ಞರು ಹೇಳುವಂತೆ ದಾನಿಗಳ 44,434 ಸ್ವಯಂಚಾಲಿತ ಅಂಕಿಅಂಶಗಳನ್ನು ಕೇವಲ 24 ಗಂಟೆಗಳಲ್ಲಿ ಬಹಿರಂಗಪಡಿಸಬಹುದು. ಈ ಮಾಹಿತಿಯನ್ನು ಒಟ್ಟುಗೂಡಿಸಲು ಎಸ್‌ಬಿಐಗೆ ಇನ್ನೂ 4 ತಿಂಗಳು ಏಕೆ ಬೇಕು?” ಎಂದು ಖರ್ಗೆ ಪ್ರಶ್ನಿಸಿದ್ದಾರೆ.

“ಚುನಾವಣಾ ಬಾಂಡ್‌ಗಳ ಯೋಜನೆಯು ಅಪಾರದರ್ಶಕ, ಪ್ರಜಾಪ್ರಭುತ್ವ ವಿರೋಧಿ ಮತ್ತು ವ್ಯವಸ್ಥೆಯನ್ನು ಹಾಳುಮಾಡುವ ವಿಧಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಸ್ಪಷ್ಟ ನಿಲುವಾಗಿದೆ. ಆದರೆ ಮೋದಿ ಸರ್ಕಾರ ಬಿಜೆಪಿಯ ಬೊಕ್ಕಸ ತುಂಬಲು ಪ್ರಧಾನ ಮಂತ್ರಿ ಸಚಿವಾಲಯ, ಹಣಕಾಸು ಸಚಿವಾಲಯ, ಆರ್‌ಬಿಐ, ಚುನಾವಣಾ ಆಯೋಗ, ಸಂಸತ್ತು ಮತ್ತು ಪ್ರತಿಪಕ್ಷಗಳನ್ನು ಸದೆಬಡಿಯುತ್ತಿದೆ. ಈಗ ಹತಾಶ ಮೋದಿ ಸರ್ಕಾರ, ಸುಪ್ರೀಂ ಕೋರ್ಟ್‌ ತೀರ್ಪನ್ನು ಹತ್ತಿಕ್ಕಲು ಎಸ್‌ಬಿಐ ಅನ್ನು ಬಳಸಲು ಪ್ರಯತ್ನಿಸುತ್ತಿದೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...