‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

Date:

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ ವೇತನದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. “ಪ್ರಧಾನಿ ಮೋದಿಯವರು ದೇಶದಲ್ಲಿ ‘ಎಲ್ಲವೂ ಸರಿಯಾಗಿದೆ’ ಎನ್ನುತ್ತಿದ್ದಾರೆ. ಆದರೆ, ‘ಎಲ್ಲವೂ ದುಬಾರಿಯಾಗಿದೆ’ ಎಂಬುದು ವಾಸ್ತವ” ಎಂದು ಕಾಂಗ್ರೆಸ್ ಟೀಕಿಸಿದೆ.

- Advertisement -

ಸೋಮವಾರ ಮೋದಿ‌ ಸರ್ಕಾರ ಬಿಡುಗಡೆ‌ ಮಾಡಿದ ಅಧಿಕೃತ ದತ್ತಾಂಶದ ಪ್ರಕಾರ, ಜುಲೈ ತಿಂಗಳಿನಲ್ಲಿದ್ದ 9.78% ರಷ್ಟಿದ್ದ ಸಗಟು ಬೆಲೆ ಆಧಾರಿತ ಹಣದುಬ್ಬರವು (WPI) ಆಗಸ್ಟ್ ತಿಂಗಳಿನಲ್ಲಿ 9.92%ಗೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಆಹಾರ ಪದಾರ್ಥಗಳ ಹಣದುಬ್ಬರವು 6.65%ನಿಂದ 7.05%ಗೆ ಏರಿಕೆ ಕಂಡಿದೆ. ಇನ್ನು, ತಯಾರಿಕಾ ವಲಯದ ಉತ್ಪನ್ನಗಳ ಹಣದುಬ್ಬರವು 8.29%ನಿಂದ 8.37%ರ ಗರಿಷ್ಠ ಮಟ್ಟವನ್ನು ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಈ ದತ್ತಾಂಶಗಳು ಪ್ರಕಟವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಸಗಟು ಹಣದುಬ್ಬರವು ಸತತ ನಾಲ್ಕು ತಿಂಗಳುಗಳಿಂದ 10%ರ ಸಮೀಪದಲ್ಲೇ ಮುಂದುವರಿದಿದೆ. ನಿತ್ಯೋಪಯೋಗಿ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗುತ್ತಿದೆ.‌ ಕೋಟ್ಯಂತರ ಕುಟುಂಬಗಳು ಕಷ್ಟ ಎದುರಿಸುತ್ತಿವೆ” ಎಂದು ಆರೋಪಿಸಿದ್ದಾರೆ.

“ಏಪ್ರಿಲ್ ತಿಂಗಳಿನಿಂದ ಹಣದುಬ್ಬರಕ್ಕೆ ಅನುಗುಣವಾಗಿ ಹೊಂದಾಣಿಕೆ ಮಾಡಿದ ಜನರ ನೈಜ ವೇತನವು 5.7% ರಷ್ಟು ಕುಸಿದಿದೆ. ಗ್ರಾಮೀಣ ಭಾರತದಲ್ಲಿ ಈ ಕುಸಿತವು 9% ರಷ್ಟಿದ್ದು, ಜನಸಾಮಾನ್ಯರ ಆರ್ಥಿಕ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ”ಎಂದು ದೂರಿದ್ದಾರೆ.

“ಪ್ರಧಾನಿಯವರು ‘ಸಬ್ ಚಂಗಾ ಸಿ’ (ಎಲ್ಲವೂ ಚೆನ್ನಾಗಿದೆ) ಎಂದು ಹೇಳುತ್ತಲೇ ಇರುತ್ತಾರೆ. ಆದರೆ, ವಾಸ್ತವವಾಗಿ ‘ಸಬ್ ಮೆಹೆಂಗಾ ಸಿ’ (ಎಲ್ಲವೂ ದುಬಾರಿಯಾಗಿದೆ)” ಎಂದು ರಮೇಶ್ ವ್ಯಂಗ್ಯವಾಡಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್‌ | ನ.4ರಂದು ಸಂಗ್‌ರೂರ್‌ನಲ್ಲಿ ʼಇನ್ಸಾಫ್ ರ‍್ಯಾಲಿʼ; ರಾಹುಲ್ ಗಾಂಧಿ ಭಾಗಿ

ಪಂಜಾಬ್‌ನ ಹಕ್ಕುಗಳು, ನ್ಯಾಯ ಮತ್ತು ಭವಿಷ್ಯದ ಕುರಿತು ಧ್ವನಿ ಎತ್ತುವ ಉದ್ದೇಶದಿಂದ...

ಬೀದರ್‌ | ವಸತಿ ಶಾಲೆಗಳ ಪ್ರಾಂಶುಪಾಲರು, ಮೇಲ್ವಿಚಾರಕರ ವರ್ಗಾವಣೆಗೆ ಡಿವಿಪಿ ಆಗ್ರಹ

ಬೀದರ್ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ...

​’ಮೊಬೈಲ್ ಒಡೆದು ಹಾಕಿ’: ‘ಡಿಜಿಟಲ್ ಅರೆಸ್ಟ್’ ಬಲೆಗೆ ಬೀಳುತ್ತಿರುವ ಸುಶಿಕ್ಷಿತರ ಬಗ್ಗೆ ಸುಪ್ರೀಂ ಬೇಸರ

ದೇಶಾದ್ಯಂತ ಹೆಚ್ಚುತ್ತಿರುವ 'ಡಿಜಿಟಲ್ ಅರೆಸ್ಟ್' (Digital Arrest) ಪ್ರಕರಣಗಳ ಕುರಿತು ತೀವ್ರ...

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2027ನೇ ಸಾಲಿನ...