ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ತಮ್ಮ ಪ್ರಮುಖ ಕಳವಳಗಳನ್ನು ವಿವರಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್ 21 ರಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನೇರ ಮಾತುಕತೆ ನಡೆಸಲಿದ್ದಾರೆ. ಈ ಕುರಿತು ಸ್ವತಃ ಖರ್ಗೆಯವರೇ ಮಂಗಳವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ಪ್ರಧಾನಿಯವರಿಗೆ ಈ ವಿಷಯಗಳ ಕುರಿತು ವೈಯಕ್ತಿಕವಾಗಿ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

- Advertisement -

ಬುಧವಾರ ನಡೆಯಲಿರುವ ಈ ಸಭೆಯಲ್ಲಿ, ಎಸ್‌ಐಆರ್‌ನಿಂದ ಉಂಟಾಗಿರುವ ಸಮಸ್ಯೆಗಳು ಮತ್ತು ಹಾನಿಗಳು, ಸರ್ಕಾರ ಕೈಗೊಂಡಿರುವ ಕ್ಷೇತ್ರ ಮರುವಿಂಗಡಣಾ ಪ್ರಕ್ರಿಯೆಯ ಸಾಧಕ-ಬಾಧಕಗಳು ಹಾಗೂ ಮಹಿಳಾ ಮೀಸಲಾತಿ ಜಾರಿಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಪ್ರಧಾನಿಯವರೊಂದಿಗೆ ವಿಸ್ತೃತವಾಗಿ ಚರ್ಚಿಸುವುದಾಗಿ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಸಂಸತ್ತಿನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ತಿದ್ದುಪಡಿ ಮಸೂದೆ ಮಂಡನೆಗೂ ಮುನ್ನ ಸರ್ವಪಕ್ಷಗಳ ಸಭೆ ಕರೆಯುವಂತೆ ಕೋರಿ ಅಕ್ಟೋಬರ್ 16 ರಂದು ಖರ್ಗೆಯವರು ಪತ್ರ ಬರೆದಿದ್ದರು. ಈ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಪ್ರಸ್ತಾವಿತ ಶಾಸನದ ಕುರಿತು ಚರ್ಚಿಸಲು ಮಾರ್ಚ್ ಮತ್ತು ಏಪ್ರಿಲ್ ತಿಂಹಳಲ್ಲಿಯೇ ಕಾಂಗ್ರೆಸ್ ನಾಯಕರೊಂದಿಗೆ ಮಾತನಾಡಲು ಯತ್ನಿಸಲಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷದಿಂದ ಕಾಲಕಾಲಕ್ಕೆ ಸೂಕ್ತ ದಿನಾಂಕಗಳು ಲಭ್ಯವಾಗದ ಕಾರಣ ಡಿಎಂಕೆ, ಎಸ್‌ಪಿ, ವೈಎಸ್‌ಆರ್‌ಸಿಪಿ, ಎನ್‌ಸಿಪಿಯಂತಹ ಇತರ ವಿರೋಧ ಪಕ್ಷಗಳೊಂದಿಗೆ ಸರ್ಕಾರವು ಸಮಾಲೋಚನೆ ನಡೆಸಬೇಕಾಯಿತು ಎಂದು ತಿಳಿಸಿದ್ದಾರೆ.

ಈ ರಾಜಕೀಯ ಬೆಳವಣಿಗೆಗಳ ನಡುವೆ ಖರ್ಗೆ ಮತ್ತು ಪ್ರಧಾನಿ ಮೋದಿ ಅವರ ನಡುವೆ ನಾಳೆ ಸಭೆ ನಿಗದಿಯಾಗಿದೆ. ಈ ನೇರ ಭೇಟಿ ಮತ್ತು ಚರ್ಚೆಯ ಮೇಲೆ ರಾಷ್ಟ್ರೀಯ ರಾಜಕಾರಣದಲ್ಲಿ ಕುತೂಹಲ ಹೆಚ್ವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಮುಖಂಡರ ಬಂಧನ ʼಸರ್ಕಾರ ಪ್ರಾಯೋಜಿತ ಭಯೋತ್ಪಾದನೆʼ: ಮಾಜಿ ಸಿಎಂ ಮಮತಾ ಬ್ಯಾನರ್ಜಿ

CJP ಸಹ ಸಂಚಾಲಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು...

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ ಸಂಚೇ?

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು...

ಜಿಮ್ ಇಲ್ಲ, ಟ್ರೆಡ್‌ಮಿಲ್ ಇಲ್ಲ; ಮನೆಯಲ್ಲೇ ಓಡಿ 4 ತಿಂಗಳಲ್ಲಿ 40 ಕೆಜಿ ತೂಕ ಇಳಿಸಿಕೊಂಡ ವ್ಯಕ್ತಿ!

ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗಲೇಬೇಕು, ದುಬಾರಿ ವ್ಯಾಯಾಮ ಉಪಕರಣಗಳನ್ನು ಖರೀದಿಸಲೇಬೇಕು ಎಂಬ...