ಮನಮೋಹನ್ ಸಿಂಗ್ ವಿರುದ್ಧದ ನಿಂದನೆಗಾಗಿ ಮೋದಿ ತಮ್ಮನ್ನು ತಾವೇ ಕ್ಷಮಿಸಿಕೊಳ್ಳಲಿ: ಸೋನಿಯಾ ಗಾಂಧಿ

Date:

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿರುದ್ಧ 2017ರಲ್ಲಿ “ರೇನ್‌ಕೋಟ್ ಧರಿಸಿ ಸ್ನಾನ ಮಾಡುವ ಕಲೆ ಗೊತ್ತಿರುವವರು” ಎಂದು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಹೇಳಿಕೆಯನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೆನಪಿಸಿದ್ದಾರೆ. ಸಿಂಗ್‌ ವಿರುದ್ಧ ಇಂತಹ ‘ಅನುಚಿತ ನಿಂದನೆ’ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ತಮ್ಮನ್ನು ತಾವೇ ಕ್ಷಮಿಸಿಕೊಳ್ಳಲಿ ಎಂದಿದ್ದಾರೆ.

- Advertisement -

‘ದಿ ಇಂಡಿಯನ್ ಎಕ್ಸ್‌ಪ್ರೆಸ್’ಗೆ ಲೇಖನ ಬರೆದಿರುವ ಸೋನಿಯಾ ಗಾಂಧಿ, ಇತಿಹಾಸ ಮರೆಯದ ಮಹಾವ್ಯಕ್ತಿ ಮನಮೋಹನ್ ಸಿಂಗ್ ಎಂದು ಬಣ್ಣಿಸಿದ್ದಾರೆ. “ಕಲ್ಲಿದ್ದಲು ಬ್ಲಾಕ್ ಹಂಚಿಕೆ ಪ್ರಕರಣದಲ್ಲಿ ಸಿಬಿಐ ನೀಡಿದ್ದ ಕ್ಲೀನ್ ಚಿಟ್ ಅನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಡಾ. ಸಿಂಗ್ ವಿರುದ್ಧ ಯೋಜಿತ ‘ರಾಜಕೀಯ ತನಿಖೆ/ಕಿರುಕುಳ’ ನಡೆಸಲಾಗಿತ್ತು. ಅಧಿಕಾರಶಾಹಿ, ಮಾಧ್ಯಮ, ನ್ಯಾಯಾಂಗ, ನಾಗರಿಕ ಸಮಾಜ ಹಾಗೂ ಮುಖ್ಯವಾಗಿ ಆರ್‌ಎಸ್‌ಎಸ್-ಬಿಜೆಪಿಯನ್ನು ಒಳಗೊಂಡ ಜಾಲವು ಡಾ. ಸಿಂಗ್‌ ವಿರುದ್ಧ ಕೆಲಸ ಮಾಡಿತ್ತು. ಆದರೆ, ಇಂದು ಅವರೆಲ್ಲರ ಆ ನಕಲಿ ಹೋರಾಟವು ಶೂನ್ಯದಲ್ಲಿ ಅಂತ್ಯಗೊಂಡಿದೆ. ಡಾ. ಸಿಂಗ್ ಅವರು ಪ್ರತಿಯೊಂದು ಆರೋಪದಿಂದಲೂ ದೋಷಮುಕ್ತರಾಗಿ ಹೊರಬಂದಿದ್ದಾರೆ” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

“ಡಾ. ಸಿಂಗ್‌ ಕುರಿತ ಪ್ರಧಾನಿ ಮೋದಿಯವರ ‘ರೇನ್‌ಕೋಟ್’ ಹೇಳಿಕೆಯು ಸಂಸದೀಯ ಇತಿಹಾಸದಲ್ಲೇ ಅತ್ಯಂತ ಕೆಳಮಟ್ಟದ ಹೇಳಿಕೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್ ವೀಡಿಯೋದಲ್ಲಿ ತಮ್ಮನ್ನು ನಿಂದಿಸಿದ ವಿದ್ಯಾರ್ಥಿಗಳನ್ನು ಕ್ಷಮಿಸಿರುವುದಾಗಿ ಹೇಳಿರುವ ಮೋದಿಯವರು, ಈಗ ಮನ್ಮೋಹನ್ ಸಿಂಗ್ ವಿರುದ್ಧ ತಾವು ಮಾಡಿದ ನಿಂದನೆಗೆ ತಮ್ಮನ್ನು ತಾವೇ ಕ್ಷಮಿಸಿಕೊಳ್ಳುವ ಅವಕಾಶವನ್ನು ಬಳಸಿಕೊಳ್ಳಬಹುದು” ಎಂದು ಕಾಲೆಳೆದಿದ್ದಾರೆ.

“ಜುಲೈ 29ರಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ಸಿಬಿಐ ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಅಂಗೀಕರಿಸಿದೆ. ಯಾವುದೇ ಪ್ರಬಲ ಆಧಾರಗಳಿಲ್ಲದೆ ಡಾ. ಸಿಂಗ್ ವಿರುದ್ಧ ಕೆಟ್ಟ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ವಿಚಾರಣಾ ನ್ಯಾಯಾಲಯದ ನಡವಳಿಕೆಯನ್ನು ಟೀಕಿಸಿದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಮುಂದುವರೆದು, “ಮೋದಿ ಸರ್ಕಾರವು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐ ರೀತಿಯ ತನಿಖಾ ಏಜೆನ್ಸಿಗಳನ್ನು ರಾಜಕೀಯ ವಿರೋಧಿಗಳ ವಿರುದ್ಧ ದುರ್ಬಳಕೆ ಮಾಡಿಕೊಳ್ಳುತ್ತಿದೆ. ವಿಪಕ್ಷದಲ್ಲಿದ್ದಾಗ ಭ್ರಷ್ಟರೆನಿಸಿಕೊಳ್ಳುವ ನಾಯಕರು ಬಿಜೆಪಿ ಸೇರಿದ ತಕ್ಷಣ ‘ಸ್ವಚ್ಛ’ರಾಗುತ್ತಾರೆ” ಎಂದು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಪ್ರಯಾಗ್‌ರಾಜ್‌ನ ಛಾತ್ರೋಂ ಕೀ ಗೂಂಜ್: ಯುವಜನರ ಆಕ್ರೋಶಕ್ಕೆ ಹೊಸ ರಾಜಕೀಯ ಭಾಷ್ಯ ಬರೆದ ರಾಹುಲ್

“ತಮ್ಮ 10 ವರ್ಷಗಳ ಪ್ರಧಾನಿ ಅವಧಿಯಲ್ಲಿ ಮನ್ಮೋಹನ್ ಸಿಂಗ್ ಅವರು ದೇಶದಲ್ಲಿ ಭಾರಿ ಆರ್ಥಿಕ ಪ್ರಗತಿ, ಬಡತನ ನಿರ್ಮೂಲನೆ, ಆರ್‌ಟಿಐ (ಮಾಹಿತಿ ಹಕ್ಕು ಕಾಯ್ದೆ), ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ), ಉದ್ಯೋಗ ಖಾತ್ರಿ (MGNREGA), ಆಹಾರ ಭದ್ರತಾ ಕಾಯ್ದೆ ಹಾಗೂ ಐತಿಹಾಸಿಕ ಇಂಡೋ-ಯುಎಸ್ ಪರಮಾಣು ಒಪ್ಪಂದದಂತಹ ಮಹತ್ವದ ಸಾಧನೆಗಳನ್ನು ಮಾಡಿದ್ದರು. ಇಂದು ಪ್ರಜಾಪ್ರಭುತ್ವ ಸಂಸ್ಥೆಗಳು ಕ್ಷೀಣಿಸುತ್ತಿರುವ ಕಾಲದಲ್ಲಿ ಮನ್ಮೋಹನ್ ಸಿಂಗ್ ಅವರ ಮುತ್ಸದ್ಧಿತನ ಮತ್ತು ಪ್ರಾಮಾಣಿಕತೆಯನ್ನು ದೇಶವು ಗಾಢವಾಗಿ ನೆನಪಿಸಿಕೊಳ್ಳುತ್ತಿದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...