ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

Date:

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೂ ಶುಲ್ಕ ನೀತಿಯನ್ನು ಜಾರಿಗೆ ತರಲು ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ. ಈ ಪ್ರಸ್ತಾವನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸಮರ್ಥಿಸಿಕೊಂಡಿದೆ. ಅಕ್ಟೋಬರ್ 15ರಿಂದ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

- Advertisement -

UPI ವಹಿವಾಟುಗಳಿಗೆ ಶುಲ್ಕ ವಿಧಿಸುವ ಕ್ರಮವನ್ನು ಪ್ರತಿಪಕ್ಷಗಳು, ವ್ಯಾಪಾರಿಗಳು ಮತ್ತು ಡಿಜಿಟಲ್ ಪಾವತಿ ಕ್ಷೇತ್ರದ ಹಲವರು ‘ಮೋದಿ ತೆರಿಗೆ’ ಮೋಸದ ತೆರಿಗೆ ಎಂದು ಟೀಕಿಸಿದ್ದಾರೆ. ಆದರೆ, ಈ ಟೀಕೆಗಳ ನಡುವೆಯೂ ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಮರುಚಿಂತನೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೂಡ ಹೊಸ UPI ಚೌಕಟ್ಟನ್ನು ಟೀಕಿಸಿ, ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಒತ್ತಡಕ್ಕೆ ಮಣಿದಿದ್ದಾರೆ ಎಂದು ಆರೋಪಿಸಿದ್ದಾರೆ. UPI ಮೇಲಿನ ಶುಲ್ಕವನ್ನು ಹಿಂಪಡೆಯುವಂತೆ ಅವರು ಒತ್ತಾಯಿಸಿದ್ದಾರೆ.

ಆದರೆ, ಈ ಬದಲಾವಣೆಗಳು ಯಾವುದೇ ವಿದೇಶಿ ಒತ್ತಡದಿಂದ ಆಗಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿಕೊಳ್ಳುತ್ತಿದೆ. ಯುಪಿಐ ನೀತಿ ನಿರ್ಧಾರಗಳನ್ನು ಭಾರತ ಸ್ವತಂತ್ರವಾಗಿ ಕೈಗೊಳ್ಳುತ್ತಿದ್ದು, ಸ್ವಾವಲಂಬಿ ಮತ್ತು ಎಲ್ಲರನ್ನೂ ಒಳಗೊಂಡ ಡಿಜಿಟಲ್ ಪಾವತಿ ವ್ಯವಸ್ಥೆ ನಿರ್ಮಿಸುವುದು ಉದ್ದೇಶವಾಗಿದೆ. MDR ವ್ಯಾಪಾರಿ ಪಾವತಿ ವ್ಯವಸ್ಥೆಯೊಳಗಿನ ಶುಲ್ಕವಾಗಿದ್ದು, ಯುಪಿಐ ಪಾವತಿ ಮಾಡುವ ಗ್ರಾಹಕರ ಮೇಲೆ ವಿಧಿಸುವ ಶುಲ್ಕವಲ್ಲ. ವ್ಯಕ್ತಿಯಿಂದ ವ್ಯಕ್ತಿಗೆ ನಡೆಯುವ ಯುಪಿಐ ವರ್ಗಾವಣೆಗಳು ಉಚಿತವಾಗಿಯೇ ಮುಂದುವರಿಯಲಿವೆ. QR ಕೋಡ್‌ ಮೂಲಕ ತಿಂಗಳಿಗೆ ₹1 ಲಕ್ಷದವರೆಗೆ ಪಾವತಿ ಸ್ವೀಕರಿಸುವ ವ್ಯಾಪಾರಿಗಳಿಗೆ ಶೂನ್ಯ MDR ಸೌಲಭ್ಯವೂ ಮುಂದುವರಿಯಲಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

ಶೂನ್ಯ MDR ವ್ಯವಸ್ಥೆಯ ಆರ್ಥಿಕ ಸುಸ್ಥಿರತೆ ಕುರಿತು ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿ ತನ್ನ 32ನೇ ವರದಿಯಲ್ಲಿ ಕಳವಳ ವ್ಯಕ್ತಪಡಿಸಿತ್ತು. ಪ್ರೋತ್ಸಾಹಧನ ಯೋಜನೆಗೆ ಸರ್ಕಾರವು ವಾರ್ಷಿಕವಾಗಿ ಸುಮಾರು ₹2,000 ಕೋಟಿ ವೆಚ್ಚ ಮಾಡುತ್ತಿದೆ ಎಂದು ಸಮಿತಿ ಗಮನಿಸಿತ್ತು.

ಅಕ್ಟೋಬರ್ 15ರಿಂದ ಹೊಸ ಚೌಕಟ್ಟು ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ, ವ್ಯಾಪಾರಿ ಪ್ರೋತ್ಸಾಹಧನ, ವ್ಯವಸ್ಥೆಯ ಅನುಷ್ಠಾನ ಮತ್ತು ಗ್ರಾಮೀಣ ಹಾಗೂ ಅರೆನಗರ ಪ್ರದೇಶಗಳಲ್ಲಿ ಯುಪಿಐ ವಿಸ್ತರಣೆಯತ್ತ ಸರ್ಕಾರ ಗಮನಹರಿಸುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ ಯಾರಿಗೆ?

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ ಅಮೆರಿಕ

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ...

ಈ ದಿನ ಸಂಪಾದಕೀಯ | ಹಬ್ಬ-ಆಚರಣೆಗಳೇ ಬಿಜೆಪಿಯ ದ್ವೇಷದ ಅಸ್ತ್ರ; ಜನತೆ ಎಚ್ಚೆತ್ತುಕೊಳ್ಳಲಿ!

ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಧಾರ್ಮಿಕ ಆಚರಣೆಗಳ ಪಾವಿತ್ರ್ಯವನ್ನು ಹಾಳುಗೆಡವುವ, ಹಬ್ಬಗಳನ್ನು...