ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಮಾಯ; ಕೋವಿಶೀಲ್ಡ್ ಎಫೆಕ್ಟ್ ಎಂದ ನೆಟ್ಟಿಗರು

Date:

ಕೋವಿಶೀಲ್ಡ್‌ ಅಡ್ಡಪರಿಣಾಮದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಜನರು ತಮ್ಮ ಲಸಿಕೆ ಪ್ರಮಾಣಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳುತ್ತಿದ್ದಾರೆ. ಈ ಹಿಂದೆ ಪ್ರಮಾಣಪತ್ರದಲ್ಲಿ ದೊಡ್ಡದಾಗಿ ಕಾಣಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಈಗ ಮಾಯವಾಗಿರುವುದನ್ನು ಕಂಡು ಆಶ್ಚರ್ಯಗೊಂಡಿದ್ದಾರೆ.

- Advertisement -

ಪ್ರಮಾಣಪತ್ರದಿಂದ ಪ್ರಧಾನಿ ಚಿತ್ರ ತೆಗೆದಿರುವುದಕ್ಕೆ ನೆಟ್ಟಿಗರು ಇದು ಕೋವಿಶೀಲ್ಡ್ ಎಫೆಕ್ಟ್ ಎಂದು ಗೇಲಿ ಮಾಡಿದ್ದಾರೆ. ಇನ್ನೂ ಕೆಲವರು ಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮೋದಿ ಚಿತ್ರ ತೆಗೆಯಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...


ಕೋವಿಶೀಲ್ಡ್ ಮತ್ತು ವ್ಯಾಕ್ಸ್‌ಜೆವ್ರಿಯಾ ಎಂಬ ಬ್ರ್ಯಾಂಡ್ ಹೆಸರುಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟವಾದ ಕೊರೊನಾ ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಅಸ್ಟ್ರಾಜೆನೆಕಾವು ಯುಕೆ ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ.

ಇದನ್ನು ಓದಿದ್ದೀರಾ?  ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದೆಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ

ಈ ಬೆನ್ನಲ್ಲೆ ತಾವು ಪಡೆದ ಲಸಿಕೆ ಯಾವುದೆಂದು ಪರಿಶೀಲಿಸುವ ನಿಟ್ಟಿನಲ್ಲಿ ಜನರು ಲಸಿಕೆ ಪ್ರಮಾಣಪತ್ರವನ್ನು ಪರಿಶೀಲಿಸಿದ್ದು, ಪ್ರಧಾನಿ ಮೋದಿ ಚಿತ್ರದಲ್ಲಿ ಪ್ರಮಾಣಪತ್ರದಲ್ಲಿ ಮಾಯವಾಗಿರುವುದು ಕಂಡು ಬಂದಿದೆ.

ಕೋವಿಶೀಲ್ಡ್ ಲಸಿಕೆಯಿಂದಾಗಿ ಅಪರೂಪದ ಸಂದರ್ಭದಲ್ಲಿ ರಕ್ತ ಹೆಪ್ಪುಗಟ್ಟುವುದು, ಪ್ಲೇಟ್‌ಲೆಟ್ ಪ್ರಮಾಣ ಕಡಿಮೆಯಾಗಬಹುದು. ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ಅಥವಾ ಟಿಟಿಎಸ್ ಎಂಬ ರೋಗಕ್ಕೆ ಲಸಿಕೆ ಕಾರಣವಾಗಬಹುದು ಎಂದು ಯುಕೆ ನ್ಯಾಯಾಲಯದಲ್ಲಿ ಅಸ್ಟ್ರಾಜೆನೆಕಾವು ಒಪ್ಪಿಕೊಂಡಿದೆ.

ಇದಾದ ಬೆನ್ನಲ್ಲೇ ಪ್ರಧಾನಿ ಮೋದಿ ಚಿತ್ರ ಲಸಿಕೆ ಪ್ರಮಾಣಪತ್ರದಲ್ಲಿ ಮಾಯವಾಗಿರುವುದನ್ನು ನೆಟ್ಟಿಗರು ಪ್ರಶ್ನಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ತೆಗೆದುಹಾಕಲಾಗಿದೆ, ಯಾಕೆ” ಎಂದು ನೆಟ್ಟಿಗರು ಕೇಳಿದ್ದಾರೆ. ಇದನ್ನು ಕೆಲವು ನೆಟ್ಟಿಗರು ಕೋವಿಶೀಲ್ಡ್ ಎಫೆಕ್ಟ್ ಎಂದರೆ ಇನ್ನೂ ಕೆಲವರು ಚುನಾವಣಾ ನೀತಿ ಸಂಹಿತೆ ಎಂದು ಹೇಳಿದ್ದಾರೆ.

ಚುನಾವಣಾ ನೀತಿ ಸಂಹಿತೆಯೇ?

ಲೋಕಸಭೆ ಚುನಾವಣೆ 2024ರ ಮಾದರಿ ನೀತಿ ಸಂಹಿತೆ ಕಾರಣದಿಂದಾಗಿ ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ತೆಗೆದುಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಗಳು ತಿಳಿಸಿರುವುದಾಗಿ ದಿ ಪ್ರಿಂಟ್ ವರದಿ ಮಾಡಿದೆ.

ಆದರೆ ನೆಟ್ಟಿಗರು ಹೇಳುವುದು ಏನು?

ಕೋವಿಶೀಲ್ಡ್‌ನಿಂದಾಗಿ ಉಂಟಾಗುವ ಅಡ್ಡಪರಿಣಾಮಗಳ ಬಗ್ಗೆ ಸುದ್ದಿಯಾದ ಮರುದಿನವೇ ಬಿಜೆಪಿ ಬಿಹಾರ ಎಕ್ಸ್‌ ಪೇಜ್‌ನಲ್ಲಿ ಕೋವಿಡ್‌ ಲಸಿಕೆಯ ಬಗ್ಗೆ ವಿಡಿಯೋ ಒಂದನ್ನು ಪೋಸ್ಟ್ ಮಾಡಲಾಗಿದೆ. “ಭಾರತ ಬಲಿಷ್ಠವಾಗಿ ಕಾರ್ಯನಿರ್ವಹಿಸುತ್ತಿದೆ. ಭಾರತದ ಪ್ರತಿ ತಿರುವು ಅದ್ಭುತವಾಗಿತ್ತು” ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

ಈ ಪೋಸ್ಟ್‌ನ ಕಾಮೆಂಟ್‌ನಲ್ಲಿ ಮೀಮ್ಸ್‌ಗಳ ಸುರಿಮಳೆಯಾಗಿದೆ. “ಉಚಿತ ಲಸಿಕೆ ಎಂದು ಹೇಳಿಕೊಂಡು ನಮಗೆ ವಿಷದ ಇಂಜೆಕ್ಷನ್ ನೀಡಿದ್ದಾರೆ” ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಮೋದಿ ಚಿತ್ರವನ್ನು ತೆಗೆದಿರುವುದನ್ನು ಕಾಮೆಂಟ್ ಮೂಲಕ ಪ್ರಶ್ನಿಸಿದ್ದಾರೆ. ಇದಕ್ಕೆ ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮದ ಸುದ್ದಿ ಕಾರಣ ಎಂದು ಹೇಳಿದ್ದಾರೆ. ಆದರೆ ಈ ನಡುವೆ ಏನೇ ಆದರೂ ನಾವು ಮೋದಿ ಪರ ಎಂದು ಕಾಮೆಂಟ್ ಮಾಡಿದವರೂ ಇದ್ದಾರೆ!

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...