2026ರ ಸಾಲಿನ ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಂದು ಆರಂಭವಾಗಲಿದ್ದು, ಆಗಸ್ಟ್ 13 ರವರೆಗೆ ನಡೆಯಲಿದೆ. ಅಧಿವೇಶನ ಕರೆಯುವ ಕುರಿತು ಕೇಂದ್ರ ಸರ್ಕಾರ ಮಾಡಿದ್ದ ಶಿಫಾರಸಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅನುಮೋದನೆ ನೀಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಸುಮಾರು ನಾಲ್ಕು ವಾರಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯ ಕಲಾಪಗಳು ಜರುಗಲಿವೆ. ಈ ಅವಧಿಯಲ್ಲಿ ಕೇಂದ್ರ ಸರ್ಕಾರವು ಹಲವು ಪ್ರಮುಖ ಶಾಸಕಾಂಗ ಮಸೂದೆಗಳನ್ನು ಮಂಡಿಸುವ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಮಹತ್ವದ ವಿಚಾರಗಳನ್ನು ಚರ್ಚೆಗೆ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ.
ಈ ಕುರಿತು ‘ಎಕ್ಸ್’ ಜಾಲತಾಣದಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಸಚಿವ ಕಿರಣ್ ರಿಜಿಜು, “ಭಾರತ ಸರ್ಕಾರದ ಶಿಫಾರಸಿನ ಮೇರೆಗೆ, ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2026ರ ಮುಂಗಾರು ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಸಮಾವೇಶಗೊಳಿಸಲು ಅನುಮೋದನೆ ನೀಡಿದ್ದಾರೆ,” ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ಭಕ್ತಿ ಮತ್ತು ಆರ್ಥಿಕತೆ: ಬದಲಾಗುತ್ತಿರುವ ಧಾರ್ಮಿಕ ಕ್ಷೇತ್ರಗಳ ಸ್ವರೂಪ




