ಸಂಸತ್ ಮುಂಗಾರು ಅಧಿವೇಶನ | ಮಣಿಪುರದ ಬಗ್ಗೆ ಚರ್ಚೆಗೆ ಒತ್ತಾಯ; ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ

Date:

ಮಣಿಪುರದಲ್ಲಿನ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಅನುಮತಿ ನೀಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ವಿಪಕ್ಷಗಳ ಸದಸ್ಯರು ಬುಧವಾರ ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿದರು.

- Advertisement -

ಸಂಸತ್ತಿನ ಮೇಲ್ಮನೆ ಮಧ್ಯಾಹ್ನದ ಊಟದ ನಂತರದ ಅವಧಿಗೆ ಮತ್ತೆ ಸೇರಿದಾಗ, ಉಪಸಭಾಪತಿ ಹರಿವಂಶ್ ಅವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರನ್ನು ಕರೆದು ಸಂವಿಧಾನ (ಪರಿಶಿಷ್ಟ ಪಂಗಡ) ಆದೇಶ (ಮೂರನೇ ತಿದ್ದುಪಡಿ) ಮಸೂದೆ, 2022 ಅನ್ನು ಮಂಡಿಸಲು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ನಂತರ ಅವರು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರು,  ಆಗ ಖರ್ಗೆ ಅವರು ತಮಾಷೆಯಾಗಿ ‘ಮೈಕ್ ಆಫ್ ಮಾಡಬೇಡಿ’ ಎಂದು ಉಪಸಭಾಪತಿಗೆ ಹೇಳಿದರು. ಹರಿವಂಶ್ ಅವರು, ‘ನೀವು ಮಾತನಾಡಿದ ನಂತರ ನನ್ನ ಮಾತನ್ನೂ ಕೇಳಿ’ ಎಂದು ಖರ್ಗೆ ಅವರಿಗೆ ಹೇಳಿದರು.

“ಮಣಿಪುರ ವಿಷಯದ ಬಗ್ಗೆ ಚರ್ಚೆ ಮತ್ತು ಆ ಕುರಿತ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಪ್ರತಿಪಕ್ಷಗಳು ಬಯಸಿವೆ ಮತ್ತು ನಾವೆಲ್ಲ ಅದಕ್ಕಾಗಿ ಕಾಯುತ್ತಿದ್ದೇವೆ. ಐದು ದಿನಗಳ ನಂತರವೂ, ಪ್ರಧಾನಿ ಸದನಕ್ಕೆ ಬಂದಿಲ್ಲ ಮತ್ತು ಅವರು ತಮ್ಮ ಕಚೇರಿಯಲ್ಲಿ ಕುಳಿತು ಕಲಾಪವನ್ನು ನೋಡುತ್ತಿದ್ದಾರೆ” ಎಂದು ಖರ್ಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ: ಈ ದಿನ ಸಂಪಾದಕೀಯ | ಮಂತ್ರಾಲಯದಲ್ಲಿ ರಾಮನ ವಿಗ್ರಹ; ಆಂಧ್ರದಲ್ಲಿ ಬಿಜೆಪಿಯ ಪ್ರತಿಮಾ ರಾಜಕಾರಣ

“ಇದರ ಪರಿಣಾಮವಾಗಿ, ಇಡೀ ದೇಶವೇ ಕಾಯುತ್ತಿದ್ದರೂ, ಪ್ರತಿಪಕ್ಷಗಳಿಗೆ ಮಣಿಪುರದ ಬಗೆಗಿನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರ್ಕಾರವು ವಿರೋಧ ಪಕ್ಷಗಳಿಗೆ ವಿಷಯ ಮಂಡನೆಗೆ ಅವಕಾಶವನ್ನೂ ನೀಡುತ್ತಿಲ್ಲ ಮತ್ತು ತಮ್ಮ ಬೇಡಿಕೆಗೆಳಿಗೆ ಕಿವಿಗೊಡುತ್ತಿಲ್ಲ. ಸರ್ಕಾರದ ನಿಲುವನ್ನು ವಿರೋಧಿಸಿ, ನಾವು ಸಭಾತ್ಯಾಗ ಮಾಡುತ್ತಿದ್ದೇವೆ” ಎಂದು ಖರ್ಗೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...