‘ಮೊಂತಾ’ ಚಂಡಮಾರುತದ ಅಬ್ಬರ; ಭಾರೀ ಮಳೆ, ಭೂಕುಸಿತ ಸಾಧ್ಯತೆ: 10 ಮುಖ್ಯಾಂಶಗಳು

Date:

ಬಂಗಾಳಕೊಲ್ಲಿಯಲ್ಲಿ ಬಿರುಸು ಪಡೆದುಕೊಂಡಿರುವ ‘ಮೊಂತಾ’ ಚಂಡಮಾರುತವು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಿಂದ ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುತ್ತಿದೆ. ಮಂಗಳವಾರ ಸಂಜೆ ವೇಳೆಗೆ ಆಂಧ್ರದಲ್ಲಿ ಭಾರೀ ಮಳೆಯಾಗಲಿದ್ದು, ಭೂಕುಸಿತಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದ ಆಂಧ್ರದ ಮಚಿಲಿಪಟ್ನಂ ಮತ್ತು ಕಳಿಂಗಪಟ್ಟಣಂ ಪ್ರದೇಶವು ಹೆಚ್ಚು ಅಪಾಯಗಳನ್ನು ಎದುಸಿರುವ ಸಾಧ್ಯತೆಯನ್ನು ಅಂದಾಜಿಸಲಾಗಿದೆ.

- Advertisement -

ಚಂಡಮಾರುತ ಪರಿಚಲನೆ ಮತ್ತು ಪರಿಣಾಮಗಳ 10 ಪ್ರಮುಖ ಅಂಶಗಳು ಹೀಗಿವೆ;

  • ಮಂಗಳವಾರ ಬೆಳಿಗ್ಗೆ 9:30 ರ ಸುಮಾರಿಗೆ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಪರಿಚಲನೆಗೊಂಡಿರುವ ಚಂಡಮಾರುತವು ಉತ್ತರದಿಂದ ವಾಯುವ್ಯಕ್ಕೆ 15 ಕಿ.ಮೀ ವೇಗದಲ್ಲಿ ಚಲಿಸಿದೆ.
  • ಮೊಂತಾ ಚಂಡಮಾರುತವು ಆಂಧ್ರಪ್ರದೇಶಕ್ಕೆ ಗರಿಷ್ಠ 90-100 ಕಿ.ಮೀ ವೇಗದಲ್ಲಿ ಅಪ್ಪಳಿಸುವ ನಿರೀಕ್ಷೆಯಿದೆ. ಆಂಧ್ರದ ಇಡೀ ಕರಾವಳಿ ಪ್ರದೇಶವು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.
  • ಮಂಗಳವಾರ ಸಂಜೆ ಮತ್ತು ರಾತ್ರಿ ಕಾಕಿನಾಡ, ಮಚಲಿಪಟ್ನಂ ಮತ್ತು ಕಳಿಂಗಪಟ್ಟಣಂ ಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದ್ದು, ಭೂಕುಸಿತದ ಸಂಭವವಿದೆ. ರಾತ್ರಿಯ ವೇಳೆಗೆ ಚಂಡಮಾರುತವು ಗಂಟೆಗೆ 110 ಕಿ.ಮೀ.ನಷ್ಟು ವೇಗ ಪಡೆದುಕೊಳ್ಳಲಿದೆ.
  • ‘ಮೊಂತ’ ಚಂಡಮಾರುತವು ಆಂಧ್ರ ಕರಾವಳಿಯನ್ನು ಅಪ್ಪಳಿಸಿದ ನಂತರ, ಸ್ವಲ್ಪಮಟ್ಟಿಗೆ ನಿಧಾನಗೊಂಡು ಒಡಿಶಾ ಕಡೆಗೆ ಚಲಿಸಲಿದೆ.
  • ಚಂಡಮಾರುತದಿಂದ ಆಂಧ್ರಪ್ರದೇಶ, ಒಡಿಶಾ ಹಾಗೂ ಛತ್ತೀಸ್‌ಗಢ ರಾಜ್ಯಗಳು ‘ಹೆಚ್ಚು ಪರಿಣಾಮ ಎದುರಿಸಲಿವೆ. ಅಕ್ಟೋಬರ್ 28 ರಿಂದ 30ರವರೆಗೆ ಆಂಧ್ರಪ್ರದೇಶ, ಒಡಿಶಾ, ಛತ್ತೀಸ್‌ಗಢ ಹಾಗೂ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ.
  • ಮುಂದಿನ ಎರಡು ದಿನಗಳವರೆಗೆ ದಕ್ಷಿಣ ಮಧ್ಯ ರೈಲ್ವೆ ಮತ್ತು ಪೂರ್ವ ಕರಾವಳಿ ರೈಲ್ವೆ 100ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿವೆ.
  • ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಕಾರ, ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
  • ಆಂಧ್ರಪ್ರದೇಶ, ಒಡಿಶಾ, ಪುದುಚೇರಿ, ತಮಿಳುನಾಡು ಹಾಗೂ ಛತ್ತೀಸ್‌ಗಢಗಳಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 22 ತಂಡಗಳನ್ನು ನಿಯೋಜಿಸಿದೆ.
  • ಜನರು ಮನೆಯೊಳಗೆ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಕರಾವಳಿ ಪ್ರದೇಶದ ಜನರು ಪರಿಹಾರ ಶಿಬಿರಗಳಿಗೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಲಾಗಿದೆ. ಸಮುದ್ರ ಪ್ರಕ್ಷುಬ್ಧವಾಗುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಪ್ರವಾಸಿಗರಿಗೆ ಎಲ್ಲ ಕಡಲತೀರಗಳನ್ನು ಮುಚ್ಚಲಾಗಿದೆ.
  • ಒಡಿಶಾ ಸರ್ಕಾರವು ಸಂಭವನೀಯ ಹೆಚ್ಚು ಪ್ರವಾಹ ಪೀಡಿತ ಸ್ಥಳಗಳಿಂದ ಜನರನ್ನು ಸ್ಥಳಾಂತರಿಸಿದೆ. ಎಂಟು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...