ದಲಿತ ದೌರ್ಜನ್ಯ | ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದ್ದ ಕುಟುಂಬದ ನಾಲ್ವರ ಹತ್ಯೆ

Date:

ಸರ್ಕಾರಿ ಶಾಲೆಯ ಶಿಕ್ಷಕ, ಅವರ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ. ಶಿಕ್ಷಕ ಸುನೀಲ್, ಅವರ ಪತ್ನಿ ಪೂನಂ (32), ದೃಷ್ಟಿ (6) ಮತ್ತು ಅವರ ಒಂದು ವರ್ಷದ ಮಗಳನ್ನು ಹತ್ಯೆಗೈಯಲಾಗಿದೆ. ಒಂದು ತಿಂಗಳ ಹಿಂದೆ ಸುನೀಲ್ ಅವರ ಬಲಿಷ್ಠ ಜಾತಿಯ ವ್ಯಕ್ತಿಯೊಬ್ಬನ ವರುದ್ಧ ದಲಿತ ದೌರ್ಜನ್ಯದ ಆರೋಪದ ಮೇಲೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ದೂರು ದಾಖಲಿಸಿತ್ತು. ಆ ಕಾರಣಕ್ಕಾಗಿಯೇ, ಅವರ ಕುಟುಂಬವನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

- Advertisement -

ಮೃತ ಶಿಕ್ಷಕ ಸುನೀಲ್ ಅವರು ರಾಯ್‌ ಬರೇಲಿ ಮೂಲದವರಾಗಿದ್ದು, ಅಮೇಥಿಯ ಪನ್ಹೌನಾದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಪತ್ನಿ ಪೂನಂ ಅವರಿಗೆ ರಾಯ್ ಬರೇಲಿಯಲ್ಲಿ ಚಂದನ್ ವರ್ಮಾ ಎಂಬಾತ ‘ಈವ್ ಟೀಸಿಂಗ್’ ಮಾಡಿದ್ದಾನೆಂದು ಆರೋಪಿಸಿ, ಆಗಸ್ಟ್‌ 18ರಂದು ಸುನೀಲ್ ದೂರು ದಾಖಲಿಸಿದ್ದರು. ಪ್ರಕರಣದ ದಾಖಲಾದ ಬಳಿಕ ತಮ್ಮ ಮೇಲೆ ಯಾವುದೇ ಅಹಿತಕರ ಘಟನೆ, ದಾಳಿಗಳು ನಡೆದರೆ, ಅದಕ್ಕೆ ಚಂದನ್ ವರ್ಮಾನೇ ಜವಾಬ್ದಾರನೆಂದೂ ದೂರಿನಲ್ಲಿ ಉಲ್ಲೇಖಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶುಕ್ರವಾರ ರಾತ್ರಿ, ಅಮೇಥಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಸುನೀಲ್ ಅವರ ನಿವಾಸಕ್ಕೆ ನುಗ್ಗಿರುವ ದುಷ್ಕರ್ಮಿಗಳು ಸುನೀಲ್, ಅವರ ಪತ್ನಿ ಹಾಗೂ ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಾಲ್ವರನ್ನೂ ಹತ್ಯೆಗೈದಿದ್ದಾರೆ.

ದುರ್ಘಟನೆ ನಡೆದಿರುವ ಸ್ಥಳಕ್ಕೆ ಅಮೇಥಿ ಜಿಲ್ಲಾಧಿಕಾರಿ ನಿಶಾ ಅನಂತ್‌, ಪೊಲೀಸ್ ವರಿಷ್ಠಾಧಿಕಾರಿ ಅನೂಪ್‌ ಸಿಂಗ್‌ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ನೆರೆಹೊರೆಯವರು ಹೇಳುವಂತೆ, ರಾತ್ರಿ ಭಾರೀ ಗುಂಡಿನ ಸದ್ದು ಕೇಳಿಬಂದಿದೆ. ಎಲ್ಲರೂ ಹೊರ ಬಂದು ನೋಡುವ ವೇಳೆಗೆ, ಕುಟುಂಬದ ನಾಲ್ವರೂ ಮೃತಪಟ್ಟಿದ್ದರು. ಅವರ ಮೃತದೇಹಗಳು ಮನೆಯ ಹಿಂಭಾಗ ಬಿದ್ದಿದ್ದವು.

ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ತನಿಖೆಗೆ ಸಹಾಯ ಮಾಡಲು ಸ್ಥಳೀಯ ಗುಪ್ತಚರ ಘಟಕ ಮತ್ತು ವಿಶೇಷ ಕಾರ್ಯಾಚರಣೆ ತಂಡಗಳನ್ನೂ ಕೂಡ ಕೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಕೋರರನ್ನು ಗುರುತಿಸುವ ಪ್ರಯತ್ನದ ಭಾಗವಾಗಿ ನಾವು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...