ವಿದ್ಯಾರ್ಥಿನಿ ಮೇಲೆ ಗೂಂಡಾಗಿರಿ; ಬಿಹಾರ ಸರ್ಕಾರದ ವಿರುದ್ಧ ರಾಹುಲ್ ಕಿಡಿ; ಪೋಕ್ಸೋ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

Date:

ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳಿಗೆ ಸಾರ್ವಜನಿಕ ರಸ್ತೆಯಲ್ಲಿ ‘ಗೂಂಡಾಗಿರಿ’ ನಡೆಸಿ, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಸಂಜೆ ವೇಳೆಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಗುಂಪೊಂದು ಬಲವಂತವಾಗಿ ತಡೆದು ನಿಲ್ಲಿಸಿದೆ. ವಿದ್ಯಾರ್ಥಿನಿಯು ಕೈಜೋಡಿಸಿ ತಮ್ಮನ್ನು ಬಿಟ್ಟುಬಿಡುವಂತೆ ಗೋಗರೆದರೂ, ಪುಂಡರ ಗುಂಪು ಆಕೆಯ ಮೇಲೆ ದೌರ್ಜನ್ಯ ಎಸಗಿ, ಎಳೆದಾಡಿ ಕಿರುಕುಳ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ಮೋದಿ ಉಪನಾಮ ಟೀಕೆ ಪ್ರಕರಣ| ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು ತರಲಿದೆಯೇ ಜೈಲು ಶಿಕ್ಷೆ

ಈ ಕುರಿತು ‘ಎಕ್ಸ್’ (X) ವೇದಿಕೆಯಲ್ಲಿ ಸರಣಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಜಮುಯಿಯ ವಿಡಿಯೋ ಅತ್ಯಂತ ಕಳವಳಕಾರಿಯಾಗಿದೆ. ಬಾಲಕಿಯು ಎಷ್ಟೇ ಬೇಡಿಕೊಂಡರೂ ಆಕೆಯ ಮೇಲೆ ದೌರ್ಜನ್ಯ ಎಸಗಲಾಗಿದೆ. ಈ ರೀತಿಯಾಗಿ ವರ್ತಿಸಲು ಈ ಪುಂಡರಿಗೆ ಹಕ್ಕು ನೀಡಿದವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಇದು ನಮ್ಮ ‘ಸಂಸ್ಕೃತಿ’ಯಲ್ಲ, ಇದು ಪಿತೃಪ್ರಭುತ್ವದ ವಿಕೃತಿ. ಮಹಿಳೆಯರ ದೇಹ, ಅವರ ಸಂಚಾರ ಮತ್ತು ನಿರ್ಧಾರಗಳನ್ನು ನಿಯಂತ್ರಿಸುವ ಹಕ್ಕು ಪುರುಷರಿಗಿದೆ ಎನ್ನುವ ಮನಸ್ಥಿತಿಯೇ ಇದಕ್ಕೆ ಕಾರಣ. ಈ ಘಟನೆ ಸೆಪ್ಟೆಂಬರ್ 19ರಂದು ನಡೆದಿದ್ದರೂ, ಆರೋಪಿಗಳು ಇನ್ನೂ ಏಕಾಗಿ ಜೈಲು ಪಾಲಾಗಿಲ್ಲ? ರಾಜ್ಯದ ರಸ್ತೆಗಳಲ್ಲಿ ಸಂಜೆ 7 ಗಂಟೆಯ ನಂತರ ಹೆಣ್ಣುಮಕ್ಕಳು ಸುರಕ್ಷಿತವಾಗಿರಲು ಸಾಧ್ಯವಿಲ್ಲವೇ ಎನ್ನುವುದಕ್ಕೆ ಬಿಹಾರ ಸರ್ಕಾರ ಉತ್ತರಿಸಬೇಕು” ಎಂದು ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರದ ವಿರುದ್ಧ ಹರಿದಾಯ್ದಿದ್ದಾರೆ.

ವೈರಲ್ ವಿಡಿಯೋದಲ್ಲಿ ಕಂಡುಬರುವ ಪ್ರತಿಯೊಬ್ಬ ವ್ಯಕ್ತಿಯನ್ನು ತಕ್ಷಣವೇ ಗುರುತಿಸಿ, ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕಠಿಣ ಪ್ರಕರಣ ದಾಖಲಿಸಿ ಶೀಘ್ರವೇ ಶಿಕ್ಷೆ ವಿಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಮುಯಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ವೀಡಿಯೋ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲಾಗಿದ್ದು, ಈಗಾಗಲೇ ಕೆಲವರನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಗನಕ್ಕೇರಿದ ದಿನಬಳಕೆ ವಸ್ತುಗಳ ದರ: ‘ಕ್ಯಾ ಹುವಾ ತೇರಾ ವಾದಾ’ – ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ದೇಶದಲ್ಲಿ ಪ್ರಮುಖ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿರುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್...

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...