ಪುಣೆ | ಇಂದ್ರಯಾಣಿ ನದಿ ಸೇತುವೆ ಕುಸಿತ; ಇಬ್ಬರ ಸಾವು, 20ಕ್ಕೂ ಅಧಿಕ ಪ್ರವಾಸಿಗರು ನಾಪತ್ತೆ

Date:

ಮಹಾರಾಷ್ಟ್ರದ ಪುಣೆಯಲ್ಲಿ ಇಂದ್ರಯಾಣಿ ನದಿ ಸೇತುವೆ ಕುಸಿದು ಸುಮಾರು 20ಕ್ಕೂ ಅಧಿಕ ಪ್ರವಾಸಿಗರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಪತ್ತೆಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಜನಸಂದಣಿ ಕಂಡುಬರುವ ಜನಪ್ರಿಯ ಪ್ರವಾಸಿ ತಾಣವಾದ ಕುಂದ್ಮಲಾದಿಂದ ಭಾನುವಾರದ ಘಟನೆ ವರದಿಯಾಗಿದೆ.

- Advertisement -

ಇದನ್ನು ಓದಿದ್ದೀರಾ? ಬಿಹಾರ | ಮತ್ತೊಂದು ಸೇತುವೆ ಕುಸಿತ; ಮೂರು ವಾರಗಳಲ್ಲಿ 13ನೇ ಪ್ರಕರಣ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ದುರದೃಷ್ಟವಶಾತ್ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ: ಎಂದು ಎನ್‌ಸಿಪಿ ಶಾಸಕ ಸುನೀಲ್ ಶೆಲ್ಕೆ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ನಿವಾಸಿ ರಘುವೀರ್ ಶೆಲರ್, “ಅರ್ಧ ಗಂಟೆಗೂ ಮುಂಚೆ ಈ ಘಟನೆ ನಡೆದಿದೆ. ಈವರೆಗೆ 20-25 ಮಂದಿಯ ರಕ್ಷಣೆ ಮಾಡಲಾಗಿದೆ. ಆದರೆ ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈ ಬಗ್ಗೆ ಪಿಟಿಐಗೆ ಪ್ರತಿಕ್ರಿಯೆ ನೀಡಿರುವ ರಕ್ಷಣಾ ತಂಡದ ಸಿಬ್ಬಂದಿ, “ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈವರೆಗೆ ಕೆಲವರ ರಕ್ಷಣೆ ಮಾಡಲಾಗಿದೆ. ಆದರೆ ಇನ್ನೂ ಕುಸಿದ ಸೇತುವೆಯಡಿ 20-25 ಮಂದಿ ಸಿಲುಕಿರುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, “ಲಭ್ಯವಾಗಿರುವ ಮಾಹಿತಿ ಪ್ರಕಾರ ಹಲವು ಮಂದಿಯ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಲವು ಮಂದಿ ಕುಸಿದ ಸೇತುವೆಯಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬಡತನದ ಸರಪಳಿ ಮುರಿಯಲು ಸೀರೆಯಲ್ಲೇ ಓಟ: ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯ ಸಾಹಸಕ್ಕೆ ಪ್ರಶಂಸೆ

ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...