ಜಿಲ್ಲಾಧಿಕಾರಿ ಕಚೇರಿ ಆವರಣದ ಮಸೀದಿ ‘ಅಕ್ರಮ’ ಎಂದ ಕೋರ್ಟ್: ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಕಾರ್ಯಾಚರಣೆ

Date:

ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ (ಕಲೆಕ್ಟರೇಟ್) ಆವರಣದಲ್ಲಿದ್ದ ಮಸೀದಿಯನ್ನು ನ್ಯಾಯಾಲಯವು ‘ಅಕ್ರಮ’ ಎಂದು ಘೋಷಿಸಿದ ಬೆನ್ನಲ್ಲೇ, ಆಡಳಿತ ಮಂಡಳಿಯು ಶನಿವಾರ ಬೆಳಿಗ್ಗೆ ಅದನ್ನು ತೆರವುಗೊಳಿಸಿದೆ.

- Advertisement -

​ಮಸೀದಿ ತೆರವಿಗೆ ಈ ಹಿಂದೆ ನೀಡಿದ್ದ ಆದೇಶವನ್ನು ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯವು ಎತ್ತಿಹಿಡಿದ ಬಳಿಕ ಈ ಕಾರ್ಯಾಚರಣೆ ನಡೆದಿದೆ. ಉಪವಿಭಾಗಾಧಿಕಾರಿ (ಎಸ್‌ಡಿಎಂ) ಮತ್ತು ಸಿಟಿ ಮ್ಯಾಜಿಸ್ಟ್ರೇಟ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಬುಲ್ಡೋಜರ್‌ಗಳ ಮೂಲಕ ಕಟ್ಟಡವನ್ನು ನೆಲಸಮ ಮಾಡಲಾಯಿತು. ಕಾರ್ಯಾಚರಣೆ ವೇಳೆ ಕಲೆಕ್ಟರೇಟ್ ಆವರಣದಲ್ಲಿ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟೆಬ್ಯುಲರಿ (ಪಿಎಸಿ) ಸಿಬ್ಬಂದಿ ಸೇರಿದಂತೆ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಕಚೇರಿ ಆವರಣದ ಎಲ್ಲ ಗೇಟ್‌ಗಳನ್ನು ಮುಚ್ಚಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಸಿಟಿ ಮ್ಯಾಜಿಸ್ಟ್ರೇಟ್ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದವರು ಸಲ್ಲಿಸಿದ್ದ ಮೇಲ್ಮನವಿಯನ್ನು ಸೆಪ್ಟೆಂಬರ್ 4ರಂದು ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯವು ವಜಾಗೊಳಿಸಿತ್ತು. ಎರಡೂ ಕಡೆಯ ವಾದಗಳು ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ ಹಳೆಯ ಆದೇಶವನ್ನೇ ಎತ್ತಿಹಿಡಿದಿತ್ತು. ಜುಲೈ 17ರಂದು ಆದೇಶ ಹೊರಡಿಸಿದ್ದ ಸಿಟಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ಈ ಮಸೀದಿಯನ್ನು ಅಕ್ರಮ ಎಂದು ಘೋಷಿಸಿತ್ತು. ಅಲ್ಲದೆ, ಸರ್ಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಮಸೀದಿ ಆಕ್ರಮಿಸಿಕೊಂಡವರಿಗೆ ಅಂದಾಜು ₹6.41 ಕೋಟಿ ದಂಡ (ಪರಿಹಾರ) ಪಾವತಿಸುವಂತೆ ಸೂಚಿಸಿತ್ತು.

ಬಜರಂಗದಳದ ಮಾಜಿ ಪ್ರಾಂತೀಯ ಸಂಚಾಲಕ ವಿಕಾಸ್ ತ್ಯಾಗಿ ಎಂಬುವವರು ನೀಡಿದ್ದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು. ‘ಗೌಪ್ಯ ಆಡಳಿತಾತ್ಮಕ ಕಾರ್ಯಾಚರಣೆಗಳು ನಡೆಯುವ ಅತ್ಯಂತ ಸೂಕ್ಷ್ಮ ಪ್ರದೇಶವಾದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಕ್ರಮವಾಗಿ ಮಸೀದಿ ನಿರ್ಮಿಸಲಾಗಿದೆ. ಧಾರ್ಮಿಕ ಚಟುವಟಿಕೆಗಳ ಜೊತೆಗೆ ವಾಣಿಜ್ಯ ಉದ್ದೇಶಗಳಿಗೂ ಇದನ್ನು ಬಳಸಲಾಗುತ್ತಿದ್ದು, ಅಲ್ಲಿ ಅಂಚೆ ಕಚೇರಿಯೊಂದು ಕಾರ್ಯನಿರ್ವಹಿಸುತ್ತಿದೆ. ಕೆಲವು ಕೊಠಡಿಗಳನ್ನು ಹೊರಗಿನವರಿಗೆ ಬಾಡಿಗೆಗೆ ನೀಡಲಾಗಿದ್ದು, ಮಸೀದಿ ಸಮಿತಿಯು ಪ್ರತಿ ತಿಂಗಳು ಬಾಡಿಗೆ ವಸೂಲಿ ಮಾಡುತ್ತಿದೆ’ ಎಂದು ತ್ಯಾಗಿ ಆರೋಪಿಸಿದ್ದರು. ಕಚೇರಿ ಆವರಣದ ಒತ್ತುವರಿ ಮತ್ತು ದುರ್ಬಳಕೆಯಿಂದಾಗಿ ಸರ್ಕಾರಿ ಕಾರ್ಯಾಚರಣೆಗಳ ಭದ್ರತೆ ಮತ್ತು ಗೌಪ್ಯತೆಗೆ ಆತಂಕ ಎದುರಾಗಿದೆ ಎಂದು ಆಡಳಿತ ಮಂಡಳಿಯೂ ಸಮರ್ಥಿಸಿಕೊಂಡಿತ್ತು. ಉತ್ತರ ಪ್ರದೇಶದ ವಿವಿಧೆಡೆ ಅಕ್ರಮ ಧಾರ್ಮಿಕ ಕಟ್ಟಡಗಳ ವಿರುದ್ಧ ನಡೆಯುತ್ತಿರುವ ಸರಣಿ ಕಾರ್ಯಾಚರಣೆಗಳ ಮುಂದುವರಿದ ಭಾಗವಾಗಿ ಈ ಬೆಳವಣಿಗೆ ನಡೆದಿದೆ.

ಮಸೀದಿ ತೆರವು ಕಾರ್ಯಾಚರಣೆಯು ಭಾರಿ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದೆ ಇಕ್ರಾ ಹಸನ್ ಅವರನ್ನು ಕೈರಾನಾದಲ್ಲಿರುವ ಅವರ ನಿವಾಸದಲ್ಲಿಯೇ ಗೃಹಬಂಧನದಲ್ಲಿರಿಸಲಾಗಿತ್ತು. ‘ರಾತ್ರಿಯಿಡೀ ನನ್ನ ಮನೆಯ ಸುತ್ತ ಭಾರಿ ಪೊಲೀಸ್ ಪಡೆಯನ್ನು ನಿಯೋಜಿಸಿ, ನಾನು ಹೊರಹೋಗದಂತೆ ತಡೆಯಲಾಯಿತು’ ಎಂದು ಅವರು ‘ಎಎನ್‌ಐ’ (ANI) ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

​ಸಂಸದರ ಗೃಹಬಂಧನವನ್ನು ಕಟುವಾಗಿ ಖಂಡಿಸಿರುವ ಎಸ್‌ಪಿ ಸಂಸದ ಅವಧೇಶ್ ಪ್ರಸಾದ್, ‘ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವುದು ಮತ್ತು ಧ್ವನಿ ಎತ್ತುವುದು ಚುನಾಯಿತ ಪ್ರತಿನಿಧಿಗಳ ಸಾಂವಿಧಾನಿಕ ಜವಾಬ್ದಾರಿಯಾಗಿದೆ’ ಎಂದು ಹೇಳಿದ್ದಾರೆ.

​ರಾಜ್ಯಾದ್ಯಂತ ನಡೆಯುತ್ತಿರುವ ಇಂತಹ ಕಾರ್ಯಾಚರಣೆಗಳನ್ನು ಟೀಕಿಸಿರುವ ಬಿಎಸ್‌ಪಿ ವರಿಷ್ಠೆ ಮಾಯಾವತಿ, ಮಸೀದಿಗಳ ತೆರವು ಕಾರ್ಯಾಚರಣೆಯನ್ನು ಸರ್ಕಾರ ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಇಂತಹ ವಿವಾದಗಳನ್ನು ಬಗೆಹರಿಸಲು ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

​ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಈ ಕಾರ್ಯಾಚರಣೆಯನ್ನು ತೀವ್ರವಾಗಿ ವಿರೋಧಿಸಿದ್ದು, ‘ಈ ಮಸೀದಿಯು 1911ಕ್ಕೂ ಹಿಂದಿನ ಇತಿಹಾಸ ಹೊಂದಿದೆ. ಈ ಪ್ರಕರಣದಲ್ಲಿ ವಕ್ಫ್ ಮಂಡಳಿಯನ್ನು ಕಕ್ಷಿದಾರರನ್ನಾಗಿಯೇ (Party) ಮಾಡಿಲ್ಲ. ಈ ಕುರಿತು ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಸಹಾರನ್‌ಪುರ ಡಿಐಜಿ ಅಭಿಷೇಕ್ ಸಿಂಗ್ ಪ್ರತಿಕ್ರಿಯಿಸಿ, ‘ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣವಾಗಿತ್ತು ಎಂದು ಸಿಟಿ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ನೀಡಿತ್ತು. ಅದರ ವಿರುದ್ಧದ ಮೇಲ್ಮನವಿಯೂ ವಜಾಗೊಂಡಿದೆ. ನ್ಯಾಯಾಲಯದ ಆದೇಶ ಮತ್ತು ಕಾನೂನು ಪ್ರಕ್ರಿಯೆಯಂತೆಯೇ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಆಯಕಟ್ಟಿನ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪಿಎಸಿ ಮತ್ತು ಆರ್‌ಎಎಫ್ (RAF) ತುಕಡಿಗಳನ್ನು ನಿಯೋಜಿಸಲಾಗಿದೆ. ವದಂತಿಗಳಿಗೆ ಕಡಿವಾಣ ಹಾಕಲು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಲಾಗಿದೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...