ಮಗಳ ಖಾಸಗಿ ವಿಡಿಯೋ ಚಿತ್ರೀಕರಿಸಿ ಹರಿಬಿಟ್ಟ ಆರೋಪ; ತಾಯಿ ಬಂಧನ

Date:

ತನ್ನ 14 ವರ್ಷದ ಮಗಳ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮಹಾರಾಷ್ಟ್ರದ ಪುಣೆ ಬಳಿಯ ಬಿಬ್ವೆವಾಡಿಯಲ್ಲಿ ಘಟನೆ ನಡೆದಿದೆ. 89ನೇ ತರಗತಿಯ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ತಾಯಿ ಮತ್ತು ಆಕೆಯ ಸ್ನೇಹಿತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದೇ ವರ್ಷದ ಜನವರಿಯಲ್ಲಿ ಬಾಲಕಿಯ ಚಿಕ್ಕಮ್ಮನಿಗೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿವೆ. ಬಳಿಕ, ಅವರು ಬಾಲಕಿಯ ಗಮನಕ್ಕೆ ತಂದಿದ್ದಾರೆ. ಈ ಕೃತ್ಯವನ್ನು ತನ್ನ ತಾಯಿಯೇ ಮಾಡಿದ್ದಾರೆ ಎಂಬುದನ್ನು ಅರಿತ ಬಾಲಕಿ, ಬಿಬ್ವೆವಾಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. “ತಾನು ಸ್ನಾನ ಮಾಡುವಾಗ ಮತ್ತು ಬಟ್ಟೆ ಬದಲಿಸುವಾಗ ನನ್ನ ತಾಯಿ ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋಗಳನ್ನು ಸಂಬಂಧಿಕರೊಂದಿಗೆ ಹಂಚಿಕೊಂಡಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿಯೂ ಹರಿಬಿಟಿದ್ದಾರೆ” ಎಂದು ದೂರಿನಲ್ಲಿ ಬಾಲಕಿ ಆರೋಪಿಸಿದ್ದರು.

ತನ್ನ ತಾಯಿಯ ವಿವಾಹೇತರ ಸಂಬಂಧದ ಬಗ್ಗೆ ಬಾಲಕಿಗೆ ತಿಳಿದಿತ್ತು. ಈ ಬಗ್ಗೆ ಮನೆಯವರಿಗೆ ಹೇಳಿದ್ದರು. ಆ ಕಾರಣಕ್ಕಾಗಿ, ಆಕೆಯ ತಾಯಿ ಇಂಥಹ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ದೂರು ಸ್ವೀಕರಿಸಿದ ಪೊಲೀಸರು ವೀಡಿಯೊಗಳು ಮತ್ತು ಅವುಗಳನ್ನು ಅಪ್‌ಲೋಡ್ ಮಾಡಿದ ವೆಬ್‌ಸೈಟ್‌ಗಳ ವಿವರಗಳನ್ನು ಪರಿಶೀಲಿಸಿದ್ದಾರೆ. ವಿಡಿಯೋಗಳನ್ನು ವೆಬ್‌ಸೈಟ್‌ಗಳಿಂದ ಅಳಿಸಿಹಾಕಲು ಕ್ರಮ ಕೈಗೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಜಾತಿಗಣತಿ ವರದಿ ವಿರೋಧಿಸುತ್ತಿರುವ ಜಾತಿವಾದಿ ಲಿಂಗಾಯತರು

“ತನ್ನ ಮಗಳು ತನ್ನ ವಿವಾಹೇತರ ಸಂಬಂಧವನ್ನು ಬಹಿರಂಗಪಡಿದ್ದರಿಂದ ಮಹಿಳೆ ಕುಪಿತಗೊಂಡಿದ್ದರು. ಆದೇ ಸಿಟ್ಟಿನಲ್ಲಿ ತನ್ನ ಮಗಳ ಖಾಸಗಿ ದೇಶ್ಯಗಳನ್ನು ಚಿತ್ರೀಕರಿಸಿ ವೀಡಿಯೊಗಳನ್ನು ಇತರರೊಂದಿಗೆ ಹಂಚಿಕೊಂಡಿದ್ದರು. ಆಕೆ ವಿಡಿಯೋ ಹಂಚಲು ಆಕೆಯ ಸ್ನೇಹಿತ ಸಹಾಯ ಮಾಡಿದ್ದು, ಸ್ನೇಹಿತನನ್ನೂ ಬಂಧಿಸಿದ್ದೇವೆ” ಎಂದು ಬಿಬ್ವೆವಾಡಿ ಹಿರಿಯ ಇನ್ಸ್‌ಪೆಕ್ಟರ್ ಶಂಕರ್ ಸಾಲುಂಕೆ ಹೇಳಿದ್ದಾರೆ.

“ಪ್ರಕರಣವನ್ನು ತನಿಖೆ ನಡೆಸಿದಾಗ ಬಾಲಕಿಯ ತಾಯಿಯ ಸೆಲ್‌ಫೋನ್‌ನಿಂದ ವಿಡಿಯೋವನ್ನು ಚಿತ್ರೀಕರಿಸಲಾಗಿದೆ ಮತ್ತು ಅದೇ ಫೋನ್‌ನಿಂದ ಅಪ್‌ಲೋಡ್ ಮಾಡಲಾಗಿದೆ ಎಂಬುದು ಗೊತ್ತಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ತಾಯಿ ಪರಾರಿಯಾಗಿದ್ದರು. ಆಕೆಗಾಗಿ ಹಲವೆಡೆ ಹುಡುಕಾಟ ನಡೆಸಿ, ಶನಿವಾರ ಬಂಧಿಸಿದ್ದೇವೆ. ನಾವು ಆಕೆಯ ಸೆಲ್‌ಫೋನ್ಅನ್ನು ವಶಕ್ಕೆ ಪಡೆದಿದ್ದೇವೆ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ” ಎಂದು ಬಿಬ್ವೆವಾಡಿ ಪೊಲೀಸರ ಸಬ್ ಇನ್ಸ್‌ಪೆಕ್ಟರ್ ಅಶೋಕ್ ಯೆವಾಲೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...