ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ ನಡೆಸಿದ ಬಿಜೆಪಿ ಮುಖಂಡ: ಸಿಸಿಟಿವಿ ದೃಶ್ಯ ವೈರಲ್; ಎಫ್‌ಐಆರ್

Date:

ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಮಧ್ಯಪ್ರದೇಶದ ಬಿಜೆಪಿ ಮುಖಂಡನೋರ್ವ ಕಾಮಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

- Advertisement -

ಕಾಮಕೃತ್ಯದಲ್ಲಿ ತೊಡಗಿಸಿಕೊಂಡು ಸಿಕ್ಕಿಬಿದ್ದಿರುವ ಬಿಜೆಪಿ ಮುಖಂಡನನ್ನು ಮನೋಹರ್‌ಲಾಲ್ ಧಾಕಡ್‌ ಎಂದು ಗುರುತಿಸಲಾಗಿದೆ. ಈತ ಮಧ್ಯಪ್ರದೇಶದ ಮಂದ್ಸೌ‌ರ್ ಬಿಜೆಪಿಯಲ್ಲಿ ಸಕ್ರಿಯನಾಗಿದ್ದು, ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಘಟಕದಲ್ಲೂ ಜವಾಬ್ದಾರಿ ಹೊಂದಿದ್ದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರನ್ನು ನಿಲ್ಲಿಸಿದ ಬಳಿಕ, ಕಾರಿನಿಂದ ಇಳಿಯುವ ನಗ್ನ ಮಹಿಳೆಯೊಂದಿಗೆ ರಸ್ತೆಯಲ್ಲೇ ನಿಂತು ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾನೆ. ಈ ಘಟನೆಯು ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿರುವುದಾಗಿ ವರದಿಯಾಗಿದೆ. ಕಾಮಕೃತ್ಯದ ವಿಡಿಯೋ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ಕಾರಿನ ನಂಬರ್ ಪ್ಲೇಟ್ ಅನ್ನು ಆಧರಿಸಿ ಪರಿಶೀಲನೆ ನಡೆಸಿದಾಗ ಕಾರು ಮನೋಹರ್ ಲಾಲ್ ಧಾಕಡ್ ಅವರಿಗೆ ಸೇರಿದ್ದೆಂದು ತಿಳಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಭಾನ್ಪುರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 296, 285, 3 (5) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಂದ್ಸೌ‌ರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಆನಂದ್‌, “ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋ ಗಮನಕ್ಕೆ ಬಂದಿದೆ. ತನಿಖೆಯ ವೇಳೆ ಆ ವಿಡಿಯೋ ದೆಹಲಿ ಮುಂಬೈ ಅಷ್ಟಪಥದ ಎಕ್ಸ್‌ಪ್ರೆಸ್‌ವೇಯ ಪ್ರದೇಶದ್ದು ಎಂದು ಕಂಡುಬಂದಿದೆ. ಈ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ, ಭಾನ್ಪುರದಲ್ಲಿ ಸೆಕ್ಷನ್ 296, 285, 3 (5) ಬಿ.ಎನ್.ಎಸ್. ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಮನೋಹರ್ ಲಾಲ್ ಧಾಕಡ್ ಅವರಿಗೆ ಇತ್ತೀಚೆಗಷ್ಟೇ ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾದಲ್ಲೂ ಪ್ರಮುಖ ಜವಾಬ್ದಾರಿ ನೀಡಲಾಗಿತ್ತು ಎಂದು ವರದಿಯಾಗಿದೆ. ಈ ಘಟನೆಯು ಸುಮಾರು ನಾಲ್ಕು ದಿನಗಳ ಹಿಂದೆ ನಡೆದಿದ್ದೆಂದು ವರದಿಯಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರಾದರೂ, ಮನೋಹರ್‌ಲಾಲ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮನೋಹರ್‌ಲಾಲ್ ಧಾಕಡ್‌ ಅವರು ವಿವಾಹಿತರಾಗಿದ್ದು, ಅವರ ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯರು ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮನೋಹರ್‌ಲಾಲ್ ಧಾಕಡ್‌ ಅವರ ಈ ಕಾಮಕೃತ್ಯದ ವಿಡಿಯೋ ವೈರಲಾಗುತ್ತಿದ್ದಂತೆಯೇ ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮಧ್ಯಪ್ರದೇಶದ ಕಾಂಗ್ರೆಸ್, “ಮಂದ್ಸೌ‌ರ್ ಬಿಜೆಪಿ ನಾಯಕ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿಯಾಗಿರುವ ಮನೋಹರ್‌ಲಾಲ್ ಧಾಕಡ್‌ ಅವರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಶ್ಲೀಲ ಕೃತ್ಯದ ಅತ್ಯಂತ ಆಕ್ಷೇಪಾರ್ಹ ವೀಡಿಯೊ ವೈರಲ್ ಆಗಿ ನಾಲ್ಕು ದಿನಗಳಾಗಿವೆ. ಆದರೂ ಬಿಜೆಪಿಯ ಅವರನ್ನು ಪಕ್ಷದಿಂದ ಉಚ್ಛಾಟಿಸಿಲ್ಲ. ಬಿಜೆಪಿಯ ಜಿಲ್ಲಾಧ್ಯಕ್ಷರು ವಿಡಿಯೋದ ಸತ್ಯಾಸತ್ಯತೆಯವನ್ನು ಪರಿಶೀಲಿಸುವುದಾಗಿ ಹೇಳುತ್ತಿದ್ದಾರೆ. ಬಿಜೆಪಿ ನಾಯಕರ ಚಾರಿತ್ರ್ಯ ಪಾತಾಳಕ್ಕೆ ತಲುಪಿದೆ ಎಂಬುದು ಇಂತಹ ಕೃತ್ಯಗಳಿಂದ ತಿಳಿಯಬಹುದು. ಇದು ಇಡೀ ಸಮಾಜಕ್ಕೆ ಅವಮಾನಕರ ಘಟನೆ. ಅಧಿಕಾರದ ದುರಾಸೆಯಲ್ಲಿ ಪಕ್ಷವು ನೈತಿಕತೆಯನ್ನು ಚರಂಡಿಗೆ ಎಸೆದಿದೆ” ಎಂದು ವಾಗ್ದಾಳಿ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...