ಎಂಪಿ | ಆದಿವಾಸಿಗಳ ಮನೆಗಳ ನೆಲಸಮ ಹದ್ದು ಮೀರಿದ ಅನ್ಯಾಯ; ತಮ್ಮದೇ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಶಿವರಾಜ್ ಸಿಂಗ್ ಆಕ್ರೋಶ

Date:

ಮಧ್ಯಪ್ರದೇಶದ ಸೀಹೋರ್ ಜಿಲ್ಲೆಯ ಬುಡ್ನಿ ಕ್ಷೇತ್ರದ ಕೋಸ್ಮಿ ಗ್ರಾಮದಲ್ಲಿ ಬುಡಕಟ್ಟು ಕುಟುಂಬಗಳ ಮನೆಗಳನ್ನು ನೆಲಸಮಗೊಳಿಸಿರುವ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಕ್ರಮದ ವಿರುದ್ಧ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮದೇ ಬಿಜೆಪಿ ನೇತೃತ್ವದ ಮಧ್ಯಪ್ರದೇಶ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಗೆಲುವಿಗೆ ಮತ ನೀಡಿ ಅವರ ಗೆಲುವಿಗೆ ಕಾರಣರಾಗಿದ್ದ ಬುಡಕಟ್ಟು ಜನರ ಮನೆಗಳನ್ನೇ ನೆಲಸಮಗೊಳಿಸಿರುವುದು ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಕೋಸ್ಮಿ ಗ್ರಾಮದಲ್ಲಿ ಬರೆಲಾ ಬುಡಕಟ್ಟು ಸಮುದಾಯಕ್ಕೆ ಸೇರಿದ 12 ಕುಟುಂಬಗಳ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಮನೆಗಳ ಜೊತೆಗೆ ಅವರ ಬೆಳೆಗಳಿಗೂ ಹಾನಿಯಾಗಿದ್ದು, ಬಾವಿಯೊಂದನ್ನು ಮಣ್ಣಿನಿಂದ ಮುಚ್ಚಲಾಗಿದೆ. ಅರಣ್ಯ ಪ್ರದೇಶದಲ್ಲಿನ ಒತ್ತುವರಿಗಳನ್ನು ತೆರವುಗೊಳಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅರಣ್ಯ ಇಲಾಖೆ ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಘಟನೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವರಾಜ್ ಸಿಂಗ್ ಚೌಹಾಣ್, ಬಡ ಬುಡಕಟ್ಟು ರೈತರು ವರ್ಷಗಳ ಕಾಲ ಕಷ್ಟಪಟ್ಟು ಕಟ್ಟಿಕೊಂಡಿದ್ದ ಮನೆಗಳನ್ನು ಜೆಸಿಬಿ ಯಂತ್ರಗಳ ಮೂಲಕ ನೆಲಸಮಗೊಳಿಸಲಾಗಿದೆ. ಬಡ ಕುಟುಂಬಗಳ ಶ್ರಮವನ್ನು ನಾಶಮಾಡಿ ಅವರನ್ನು ನಿರಾಶ್ರಿತರನ್ನಾಗಿಸಿರುವುದು ದಬ್ಬಾಳಿಕೆ ಮತ್ತು ಅನ್ಯಾಯದ ಪರಮಾವಧಿ. ಅಧಿಕಾರಿಗಳ ಸ್ವಂತ ಮಕ್ಕಳು, ತಾಯಿ ಅಥವಾ ಪತ್ನಿಯರಿಗೇ ಇಂತಹ ಪರಿಸ್ಥಿತಿ ಎದುರಾದರೆ ಅವರು ಅದನ್ನು ಒಪ್ಪಿಕೊಳ್ಳುತ್ತಾರೆಯೇ? ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೆಲವು ಅಧಿಕಾರಿಗಳು ಪಕ್ಷಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸುತ್ತಿದ್ದಾರೆ. ನಾವು ಅವರ ಮತಗಳಿಂದಲೇ ಗೆಲ್ಲುತ್ತೇವೆ. ಮೋಹನ್ ಜೀ (ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌ ಯಾದವ್) ಕೂಡ ಅವರ ಮತಗಳಿಂದಲೇ ಮುಖ್ಯಮಂತ್ರಿಯಾಗಿದ್ದಾರೆ. ಇಂತಹ ಘಟನೆ ನನಗೆ ನಿಜಕ್ಕೂ ತೀವ್ರ ನೋವುಂಟು ಮಾಡಿದೆ. ಬುಡ್ನಿ ಕ್ಷೇತ್ರದ ಸಂತ್ರಸ್ತ ಕುಟುಂಬಗಳ ನೋವು, ಈ ಅನ್ಯಾಯ, ಅವರ ಅಳಲು, ಕಣ್ಣೀರಿನಿಂದ ತುಂಬಿದ ಕಣ್ಣುಗಳು, ನಾಶವಾದ ಹೊಲಗಳು ಮತ್ತು ಹಾಳಾದ ಭವಿಷ್ಯದ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸುತ್ತೇನೆ. ಈ ಘಟನೆ ಮುಖ್ಯಮಂತ್ರಿಗಳಿಗೂ ಕೆಟ್ಟ ಹೆಸರು ತರಲು ರೂಪಿಸಿರುವ ಸಂಚಿನಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಈ ಘಟನೆಗೆ ಕಾಂಗ್ರೆಸ್ ಕೂಡ ಪ್ರತಿಕ್ರಿಯಿಸಿದೆ. ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉಮಂಗ್ ಸಿಂಘಾರ್, ಬಿಜೆಪಿ ಸರ್ಕಾರದೊಳಗಿನ ಆಂತರಿಕ ಸಂಘರ್ಷದ ಪರಿಣಾಮವನ್ನು ಬುಡಕಟ್ಟು ಕುಟುಂಬಗಳು ಎದುರಿಸುತ್ತಿವೆಯೇ ಎಂದು ಪ್ರಶ್ನಿಸಿದ್ದಾರೆ. “ಮೋಹನ್ ಯಾದವ್ ಅವರೇ, ನಿಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿಯೊಬ್ಬರು ಪ್ರಶ್ನೆ ಕೇಳುತ್ತಿರುವಾಗ, ನಿಮ್ಮ ಸರ್ಕಾರ ಯಾವಾಗ ಸ್ಪಷ್ಟ ಕ್ರಮ ಕೈಗೊಳ್ಳಲಿದೆ ಎಂಬುದನ್ನು ತಿಳಿಸಬೇಕು. ಸರ್ಕಾರದೊಳಗಿನ ಅಧಿಕಾರದ ಪೈಪೋಟಿ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆಯೇ? ಅದನ್ನ ಸರ್ಕಾರ ಮರೆಮಾಚುತ್ತಿದೆಯೇ?” ಎಂದು ಸಿಂಘಾರ್ ಪ್ರಶ್ನಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಬುಡಕಟ್ಟು ನಿವಾಸಿಗಳು ಮತ್ತು ಅರಣ್ಯ ಇಲಾಖೆ ನಡುವಿನ ವಿವಾದದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರವೇಶಿಸಿರುವುದು ಇದೇ ಮೊದಲಲ್ಲ. 2025ರ ಜೂನ್‌ನಲ್ಲಿ ಸೀಹೋರ್ ಜಿಲ್ಲೆಯ ಖಿವ್ನಿ ವನ್ಯಜೀವಿ ಅಭಯಾರಣ್ಯ ಪ್ರದೇಶದ ಬುಡಕಟ್ಟು ನಿವಾಸಿಗಳ ವಿರುದ್ಧ ನಡೆದ ಕ್ರಮದ ಬಗ್ಗೆಯೂ ಅವರು ಧ್ವನಿ ಎತ್ತಿದ್ದರು. ಆ ಬಳಿಕ ರಾಜ್ಯ ಸರ್ಕಾರ ವಿಭಾಗೀಯ ಅರಣ್ಯಾಧಿಕಾರಿಯನ್ನು ವರ್ಗಾವಣೆ ಮಾಡುವುದರ ಜೊತೆಗೆ ಮಳೆಗಾಲದಲ್ಲಿ ಇಂತಹ ಕ್ರಮಗಳನ್ನು ಕೈಗೊಳ್ಳದಂತೆ ಸೂಚಿಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ | ಬಿಜೆಪಿ ʼಡಬಲ್‌ ಎಂಜಿನ್‌ʼ ಬೂಟಾಟಿಕೆ ಬಯಲು; ಶೋಚನೀಯ ಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳು

ಇತ್ತೀಚೆಗಷ್ಟೇ, 2026ರ ಜುಲೈನಲ್ಲಿ ಹೆಸರುಕಾಳು (ಮೂಂಗ್) ಖರೀದಿ ವಿಚಾರದಲ್ಲಿಯೂ ಚೌಹಾಣ್ ಮತ್ತು ಮಧ್ಯಪ್ರದೇಶ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು. ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಯ ಪ್ರಮಾಣ ಹೆಚ್ಚಿಸುವಂತೆ ರಾಜ್ಯದ ಕೃಷಿ ಸಚಿವ ಐದಲ್ ಸಿಂಗ್ ಕನ್ಸಾನಾ ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಚೌಹಾಣ್, ರಾಜ್ಯಕ್ಕೆ ಈಗಾಗಲೇ 4.54 ಲಕ್ಷ ಮೆಟ್ರಿಕ್ ಟನ್ ಹೆಸರುಕಾಳು ಖರೀದಿಸಲು ಅನುಮತಿ ನೀಡಲಾಗಿದೆ. ತಕ್ಷಣದ ಸಮಸ್ಯೆ ಖರೀದಿಯ ವೇಗದಲ್ಲಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಪತ್ರ ಬರೆದಿದ್ದರು. ರೈತರು ತಮ್ಮ ಉತ್ಪನ್ನಗಳ ಖರೀದಿಯಾಗದೆ ಸಂಕಷ್ಟ ಎದುರಿಸುತ್ತಿದ್ದ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿತ್ತು.

ಶಿವರಾಜ್ ಸಿಂಗ್ ಚೌಹಾಣ್ ಅವರು ದೀರ್ಘಕಾಲ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದವರು ಮತ್ತು ಬುಡಕಟ್ಟು ಸಮುದಾಯದಲ್ಲಿ (‘ಮಾವಾಜಿ’ ಎಂದೇ ಪರಿಚಿತರು) ಜನಪ್ರಿಯತೆ ಹೊಂದಿರುವವರು. ತಮ್ಮದೇ ಪಕ್ಷದ ಸರ್ಕಾರವಿದ್ದರೂ ಬುಡಕಟ್ಟು ಹಿತಾಸಕ್ತಿಗಾಗಿ ಬಹಿರಂಗವಾಗಿ ಧ್ವನಿ ಎತ್ತಿದ್ದಾರೆ. ಕೇಂದ್ರ ಸಚಿವರೊಬ್ಬರು ನೇರವಾಗಿ ರಾಜ್ಯ ಸರ್ಕಾರದ ಆಡಳಿತ ಯಂತ್ರವನ್ನು (ಅರಣ್ಯ ಇಲಾಖೆ ಮತ್ತು ಅಧಿಕಾರಿಗಳನ್ನು) ತರಾಟೆಗೆ ತೆಗೆದುಕೊಂಡಿರುವುದು ಸಿಎಂ ಮೋಹನ್ ಯಾದವ್ ಹಾಗೂ ಚೌಹಾಣ್ ಬಣದ ನಡುವಿನ ಹೊಂದಾಣಿಕೆಯ ಕೊರತೆಯನ್ನೂ ಬಹಿರಂಗಗೊಳಿಸಿದೆ ಎನ್ನಲಾಗುತ್ತಿದೆ.

ಭಾರತೀಯ ಕಾನೂನಿನ ಪ್ರಕಾರ, ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಸಮುದಾಯಗಳಿಗೆ ‘ಅರಣ್ಯ ಹಕ್ಕು ಪತ್ರ’ ಪಡೆಯಲು ಅವಕಾಶವಿದೆ. ಇಂತಹ ಕಾನೂನುಗಳು ಜಾರಿಯಲ್ಲಿದ್ದರೂ, ಜೆಸಿಬಿ ಬಳಸಿ ಮನೆಗಳನ್ನು ನೆಲಸಮ ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬುಡಕಟ್ಟು ಸಮುದಾಯಗಳು ಸಾಂಪ್ರದಾಯಿಕವಾಗಿ ಮಧ್ಯಪ್ರದೇಶದಲ್ಲಿ ನಿರ್ಣಾಯಕ ಮತದಾರರು (ವಿಶೇಷವಾಗಿ ವಿಂಧ್ಯ ಮತ್ತು ಮಹಾಕೋಶಲ್ ಭಾಗದಲ್ಲಿ). ಅವರ ಮೇಲಿನ ಇಂತಹ ದೌರ್ಜನ್ಯವು ಚುನಾವಣಾ ರಾಜಕಾರಣದ ಮೇಲೆ ದೀರ್ಘಕಾಲಿಕ ಪರಿಣಾಮ ಬೀರಬಹುದು. ಜತೆಗೆ ಸಂತ್ರಸ್ತ 12 ಬರೆಲಾ ಬುಡಕಟ್ಟು ಕುಟುಂಬಗಳಿಗೆ ತಕ್ಷಣದ ಪರಿಹಾರ, ತಾತ್ಕಾಲಿಕ ವಸತಿ ಮತ್ತು ನಾಶವಾದ ಬೆಳೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಸರ್ಕಾರದ ಮೇಲೆ ತೀವ್ರ ಒತ್ತಡ ಬೀರಲಿದೆ. ಒಟ್ಟಿನಲ್ಲಿ, ಕೋಸ್ಮಿ ಗ್ರಾಮದಲ್ಲಿ ಬುಡಕಟ್ಟು ಕುಟುಂಬಗಳ ಮನೆಗಳ ನೆಲಸಮ ಪ್ರಕರಣವು ಬಿಜೆಪಿ ಸರ್ಕಾರದೊಳಗಿನ ಅಸಮಾಧಾನವನ್ನು ಬಹಿರಂಗಪಡಿಸಿದೆ. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಸ್ವಪಕ್ಷದ ನಾಯಕರೇ ಒತ್ತಾಯಿಸಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಪ್ರಭಾವಿ ನಾಯಕಿ, ಮಾಜಿ ಸಂಸದೆ ಈಗ ಕರ್ನಾಟಕದ ನೂತನ ರಾಜ್ಯಪಾಲೆ

ಕರ್ನಾಟಕದ ರಾಜಭವನಕ್ಕೆ ಮತ್ತೊಬ್ಬ ಬಿಜೆಪಿ ಹಿನ್ನೆಲೆಯ ರಾಜಕಾರಣಿ ಪ್ರವೇಶಿಸುತ್ತಿದ್ದಾರೆ. ಅಕ್ಟೋಬರ್ 12ರಂದು...

ದಲಿತ ಯುವಕರ ಮೇಲೆ ದಲಿತ ಸಮುದಾಯದವರಿಂದಲೇ ಅಮಾನವೀಯ ಹಲ್ಲೆ, ಬಾಯಿಗೆ ಮೂತ್ರ ವಿಸರ್ಜನೆ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಕೂಲಿ ಕಾರ್ಮಿಕರನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿ, ಮಾರಣಾಂತಿಕವಾಗಿ ಥಳಿಸಿದರಲ್ಲದೆ,...

ಪ್ರತಿಭಟನೆಗಳ ಭೀತಿ: ಅಕ್ಟೋಬರ್ 20ರವರೆಗೆ ದೆಹಲಿಯಲ್ಲಿ ‘ಸಿಎಪಿಎಫ್’ಭದ್ರತೆ ವಿಸ್ತರಿಸಲು ಪೊಲೀಸರ ಮನವಿ

ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು...