ಮಾನನಷ್ಟ ಮೊಕದ್ದಮೆ: ಅಭಿಷೇಕ್ ಬ್ಯಾನರ್ಜಿ ವಿರುದ್ಧದ ಬಂಧನ ವಾರಂಟ್‌ಗೆ ತಡೆ

Date:

ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ ಆಕಾಶ್ ವಿಜಯವರ್ಗಿಯಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧದ ಬಂಧನ ವಾರಂಟ್‌ಗೆ ಮಧ್ಯಪ್ರದೇಶ ಹೈಕೋರ್ಟ್ ಮತ್ತೆ ಮಧ್ಯಂತರ ತಡೆ ನೀಡಿದೆ.

- Advertisement -

2020ರಲ್ಲಿ ಕೋಲ್ಕತ್ತಾದಲ್ಲಿ ನಡೆದ ರಾಜಕೀಯ ರ‍್ಯಾಲಿಯಲ್ಲಿ ಅಭಿಷೇಕ್ ಬ್ಯಾನರ್ಜಿ ಅವರು ಬಿಜೆಪಿ ನಾಯಕ ಆಕಾಶ್ ವಿಜಯವರ್ಗಿಯಾ ಅವರನ್ನು “ಗೂಂಡಾ” ಎಂದು ಕರೆದಿದ್ದರು. ಈ ಹೇಳಿಕೆಯಿಂದ ತಮ್ಮ ಖ್ಯಾತಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಆಕಾಶ್ 2021ರಲ್ಲಿ ಭೋಪಾಲ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಇದನ್ನೂ ಓದಿ: ಬಂಗಾಳ ರಾಜಕಾರಣದ ಮಹಾ ಕುಸಿತ: ಅಭಿಷೇಕ್ ಬ್ಯಾನರ್ಜಿ ಪತನಕ್ಕೆ ಕಾರಣವೇನು?

ನ್ಯಾಯಾಲಯದ ಸಮನ್ಸ್‌ಗಳಿಗೆ ಬ್ಯಾನರ್ಜಿ ಸತತವಾಗಿ ಗೈರುಹಾಜರಾದ ಕಾರಣ, ಭೋಪಾಲ್‌ನ ವಿಶೇಷ ನ್ಯಾಯಾಲಯವು ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಕಳೆದ ವರ್ಷ (2025) ನವೆಂಬರ್‌ನಲ್ಲಿ ಹೈಕೋರ್ಟ್ ಈ ವಾರಂಟ್‌ಗೆ ಮಧ್ಯಂತರ ತಡೆ ನೀಡಿತ್ತು.

ಆದರೆ ಜೂನ್ 17ರಂದು ನಡೆದ ವಿಚಾರಣೆಗೆ ಬ್ಯಾನರ್ಜಿ ಪರ ವಕೀಲರು ಹಾಜರಾಗದ ಕಾರಣ, ನ್ಯಾಯಾಲಯವು ತಡೆಯಾಜ್ಞೆಯನ್ನು ತೆರವುಗೊಳಿಸಿ ಅರ್ಜಿಯನ್ನು ವಜಾಗೊಳಿಸಿತ್ತು. ಈ ಬೆನ್ನಲ್ಲೇ ಬ್ಯಾನರ್ಜಿ ತಡೆಯಾಜ್ಞೆ ಮರುಸ್ಥಾಪಿಸುವಂತೆ ಕೋರಿ ಹೈಕೋರ್ಟ್‌ಗೆ ಮರುಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ಮಧ್ಯಪ್ರದೇಶ ಹೈಕೋರ್ಟ್ ಈಗ ಅಭಿಷೇಕ್ ಬ್ಯಾನರ್ಜಿಗೆ ಮತ್ತೊಮ್ಮೆ ತಾತ್ಕಾಲಿಕ ರಿಲೀಫ್ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ...

ಅರ್ನಾಬ್ ಗೋಸ್ವಾಮಿ ವಿರುದ್ಧ ₹45 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಕಾಂಗ್ರೆಸ್ ಸಂಸದ

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ಜವಾಹರಲಾಲ್ ನೆಹರು...

ಲಾಪತಾ ಲೇಡೀಸ್: ಮನೆ ಒಳಗೂ ಹೊರಗೂ ಕಳೆದುಹೋಗುವ ಮಹಿಳೆಯರ ಹುಡುಕಾಟ

'ಲಾಪತಾ ಲೇಡೀಸ್' ಕೇವಲ ರೈಲಿನಲ್ಲಿ ಕಾಣೆಯಾದ ಇಬ್ಬರು ವಧುಗಳ ಕಥೆಯಲ್ಲ. ಮಹಿಳೆ...

‘ಅಟ್ಟಿಕಾ ಗೋಲ್ಡ್’ ಕಚೇರಿಗಳ ಮೇಲೆ ದಾಳಿ: ನಗದು, ಆಭರಣ ಜಪ್ತಿ

ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ...