ಸಂಸದೆ ಮೊಯಿತ್ರಾ ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ; ಟಿಎಂಸಿ ಕಾಲೆಳೆದ ಬಿಜೆಪಿ

Date:

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮೊಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಭಾರೀ ಗದ್ದಲ ಶುರುವಾಗಿದೆ. ಆರೋಪದ ಬೆನ್ನಲ್ಲೇ, ಮೊಯಿತ್ರಾ ಅವರನ್ನು ಟಿಎಂಸಿ ಕೈಬಿಟ್ಟಿದೆ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ವ್ಯಂಗ್ಯವಾಡಿದ್ದಾರೆ.

- Advertisement -

“ಟಿಎಂಸಿ ತೃಣಮೂಲ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷದ ನಾಯಕರನ್ನು ಬಂಧಿಸಿದಾಗಲೆಲ್ಲ ಮೌನ ವಹಿಸಿದ್ದಾರೆ” ಎಂದು ಮಾಳವೀಯ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಮಮತಾ ಬ್ಯಾನರ್ಜಿ ಅವರು ಮಹುವಾ ಮೊಯಿತ್ರಾ ಅವರನ್ನು ಕೈಬಿಟ್ಟಿರುವುದರಲ್ಲಿ ಆಶ್ಚರ್ಯವೇನಿಲ್ಲ. ಆದರೆ, ಅವರು ಅಭಿಷೇಕ್ ಬ್ಯಾನರ್ಜಿಯವರನ್ನು ಹೊರತುಪಡಿಸಿ ಬೇರೆ ಯಾರನ್ನೂ ರಕ್ಷಿಸುವುದಿಲ್ಲ. ಹಲವಾರು ಟಿಎಂಸಿ ನಾಯಕರು ಗಂಭೀರ ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಆರೋಪಗಳಲ್ಲಿ ಜೈಲಿನಲ್ಲಿದ್ದಾರೆ. ಆದರೆ, ಮಮತಾ ಬ್ಯಾನರ್ಜಿ ಮೌನವಾಗಿದ್ದಾರೆ” ಎಂದು ಮಾಳವೀಯ ಟ್ವೀಟ್ ಮಾಡಿದ್ದಾರೆ.

ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಕ್ಕಾಗಿ ಮೊಹಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ 2 ಕೋಟಿ ರೂ. ನಗದು ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೊಯಿತ್ರಾ ಅವರ ವಿರುದ್ಧದ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಲು ಟಿಎಂಸಿ ಶನಿವಾರ ನಿರಾಕರಿಸಿದೆ.

“ಈ ವಿಷಯದ ಬಗ್ಗೆ ಪಕ್ಷವು ಏನೂ ಹೇಳುವುದಿಲ್ಲ. ಈ ವಿವಾದವು ಯಾರ ಸುತ್ತ ಸುತ್ತುತ್ತಿದೆಯೋ ಅವರೇ ಇದಕ್ಕೆ ಪ್ರತಿಕ್ರಿಯಿಸಲು ಸೂಕ್ತ ಎಂದು ನಾವು ಭಾವಿಸುತ್ತೇವೆ” ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಹೇಳಿದ್ದಾರೆ.

ಪಕ್ಷವು ವಿವಾದದಲ್ಲಿ ಭಾಗಿಯಾಗಲು ಬಯಸುವುದಿಲ್ಲ. ಆದ್ದರಿಂದ ಅಂತರವನ್ನು ಕಾಯ್ದುಕೊಳ್ಳುತ್ತದೆ ಎಂದು ಪಕ್ಷದ ಮೂಲಗಳು ಹೇಳುತ್ತವೆ.

ಮೊಯಿತ್ರಾ ಅವರು ಉದ್ಯಮಿಯಿಂದ ಲಂಚ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ತನಿಖೆಗೆ ಒತ್ತಾಯಿಸಿ ದುಬೆ ಅವರು ಲೋಕಪಾಲ್‌ಗೂ ಪತ್ರ ಬರೆದಿದ್ದಾರೆ.

ಉದ್ಯಮಿ ದರ್ಶನ್ ಹಿರಾನಂದಾನಿ ಅವರು ಮೊಯಿತ್ರಾ ಅವರಿಗೆ ಆಗಾಗ್ಗೆ ಬೇಡಿಕೆಗಳನ್ನು ನೀಡುತ್ತಿದ್ದರು. ಅದಕ್ಕೆ ಪ್ರತಿಯಾಗಿ ದುಬಾರಿ ಐಷಾರಾಮಿ ವಸ್ತುಗಳನ್ನು ಉಡುಗೊರೆಯಾಗಿ ನೀಡುವುದು ಸೇರಿದಂತೆ ವಿವಿಧ ಅನುಕೂಲಗಳನ್ನು ಒದಗಿಸುತ್ತಿದ್ದರು. ಎಂದು ಆರೋಪಿಸಲಾಗಿದೆ.

ಮೊಯಿತ್ರಾ ಅವರು ಆರೋಪಗಳನ್ನು ನಿರಾಕರಿಸಿದ್ದಾರೆ. ಲೋಕಸಭೆಯ ತನಿಖಾ ಸಮಿತಿಯ ವಿಚಾರಣೆ ಹಾಜರಾಗಿ, ಪ್ರಶ್ನೆಗಳನ್ನು ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...