MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

Date:

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧ ಪುಣೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳ ಬೆಂಬಲಕ್ಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ನಿಂತಿದ್ದಾರೆ. ವಿದ್ಯಾರ್ಥಿಗಳ ಪರವಾಗಿ ಸಿಜೆಪಿ ಇದೆ ಎಂದು ಹೇಳಿರುವ ದೀಪ್ಕೆ, ಎಂಪಿಎಸ್‌ಸಿ ಅಧ್ಯಕ್ಷರಾದ ಹಿರಿಯ ಐಎಎಸ್ ಅಧಿಕಾರಿ ವಿವೇಕ್ ಭೀಮನ್ವರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ.

- Advertisement -

ಎಂಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವು ರಾಜ್ಯ ರಾಜಕೀಯ ಹಾಗೂ ಶೈಕ್ಷಣಿಕ ವಲಯದಲ್ಲಿ ಕಾವು ಏರಿದೆ. ಪುಣೆಯಲ್ಲಿ ಸಾವಿರಾರು ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈಗಾಗಲೇ ಹಲವು ನಾಯಕರು, ಸಂಘಟನೆಗಳು ಈ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಸಿಜೆಪಿಯೂ ಬೆಂಬಲ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಪರೀಕ್ಷಾ ಅಕ್ರಮ | ಪುಣೆಯ FTII ನಲ್ಲಿ ಏರುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ಕಾವು

ಈ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅಭಿಜೀತ್ ದೀಪ್ಕೆ, “ಪ್ರತಿಭಟನೆ ನಡೆಸುತ್ತಿರುವ ಎಂಪಿಎಸ್‌ಸಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಲು ನಾನು ಪುಣೆಗೆ ಬಂದಿದ್ದೇನೆ. ಮಹಾರಾಷ್ಟ್ರದಲ್ಲಿ ಸುಮಾರು 20 ಲಕ್ಷ ಎಂಪಿಎಸ್‌ಸಿ ವಿದ್ಯಾರ್ಥಿಗಳಿದ್ದಾರೆ. ಪದೇ ಪದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿರುವುದರಿಂದ ಅವರ ಭವಿಷ್ಯವು ದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗುತ್ತಿದೆ. ಆದರೂ, ಸರ್ಕಾರವು ಈ ವಿಷಯದ ಗಂಭೀರತೆಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಎಂಪಿಎಸ್‌ಸಿ ಅಧ್ಯಕ್ಷ ಭೀಮನ್ವರ್ ರಾಜೀನಾಮೆ ನೀಡಬೇಕೆಂಬ ವಿದ್ಯಾರ್ಥಿಗಳ ಬೇಡಿಕೆಯನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಅವರು ರಾಜೀನಾಮೆ ನೀಡುವವರೆಗೂ ಈ ಪ್ರತಿಭಟನೆ ಮುಂದುವರಿಯುತ್ತದೆ. ಸಿಜೆಪಿ ಈ ಚಳವಳಿಗೆ ತನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತದೆ” ಎಂದು ತಿಳಿಸಿದರು.

ಇನ್ನು, ವಿದ್ಯಾರ್ಥಿಗಳ ನಿರಂತರ ಆಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ, ಈಗಾಗಲೇ ಎಂಪಿಎಸ್‌ಸಿ ಕಾರ್ಯದರ್ಶಿ ಮಹೇಂದ್ರ ಉತ್ತಮ್‌ರಾವ್ ಹರ್ಪಾಲ್ಕರ್ ಅವರ ನಿಯೋಜನೆ ಅವಧಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಆದೇಶಿಸಿದೆ. ಸಾಮಾನ್ಯ ಆಡಳಿತ ಇಲಾಖೆ (GAD) ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಅವರನ್ನು ಹುದ್ದೆಯಿಂದ ವಾಪಸ್ ಕರೆಸಿಕೊಳ್ಳಲಾಗಿದೆ.

ಆದರೆ ಕಾರ್ಯದರ್ಶಿಯ ವರ್ಗಾವಣೆ ಸಾಲದು ಎನ್ನುತ್ತಿರುವ ಪ್ರತಿಭಟನಾನಿರತ ಅಭ್ಯರ್ಥಿಗಳು, ಎಂಪಿಎಸ್‌ಸಿ ಅಧ್ಯಕ್ಷರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಇದರೊಂದಿಗೆ, ಸಂಪೂರ್ಣ ಪರೀಕ್ಷಾ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು, ಆನ್‌ಲೈನ್ ಗೊಂದಲಗಳನ್ನು ತಪ್ಪಿಸಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಆಫ್‌ಲೈನ್ ಮಾದರಿಯಲ್ಲೇ ನಡೆಸಬೇಕು ಎಂಬುದು ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...