‘ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಮಾಜಘಾತುಕರಲ್ಲ, ಅವರಿಗೆ ಹೋರಾಡುವ ಹಕ್ಕಿದೆ’: ಬಾಂಬೆ ಹೈಕೋರ್ಟ್

Date:

ಮಹಾರಾಷ್ಟ್ರ ಲೋಕಸೇವಾ ಆಯೋಗದ (ಎಂಪಿಎಸ್‌ಸಿ) ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪುಣೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ‘ಸಮಾಜಘಾತುಕ ಶಕ್ತಿಗಳಲ್ಲ’. ತಮ್ಮ ಕುಂದುಕೊರತೆಗಳ ವಿರುದ್ಧ ಧ್ವನಿ ಎತ್ತುವ ಹಕ್ಕು ಅವರಿಗಿದೆ ಎಂದು ಬಾಂಬೆ ಹೈಕೋರ್ಟ್ ಬುಧವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ, ನೇಮಕಾತಿ ಪರೀಕ್ಷೆಗಳನ್ನು ನ್ಯಾಯಸಮ್ಮತವಾಗಿ ಮತ್ತು ನಿಷ್ಪಕ್ಷಪಾತವಾಗಿ ನಡೆಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ನ್ಯಾಯಾಲಯ ಒತ್ತಿಹೇಳಿದೆ.

- Advertisement -

​ಮುಖ್ಯ ನ್ಯಾಯಮೂರ್ತಿ ಮಹೇಶ್ ಚಂದ್ರ ತ್ರಿಪಾಠಿ ಮತ್ತು ನ್ಯಾಯಮೂರ್ತಿ ಅದ್ವೈತ್ ಸೇಠ್ನಾ ಅವರಿದ್ದ ವಿಭಾಗೀಯ ಪೀಠವು, ಪರೀಕ್ಷಾ ವ್ಯವಸ್ಥೆಯ ಮೇಲೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಮತ್ತೆ ನಂಬಿಕೆ ಮೂಡಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸೂಚಿಸಿದೆ. “ಗಂಟೆಗಟ್ಟಲೆ ಓದಿ ಪರೀಕ್ಷೆ ಬರೆದರೂ ತಮಗೆ ಸೂಕ್ತ ಅವಕಾಶ ಸಿಗುತ್ತಿಲ್ಲ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಭಾವನೆ ಮೂಡಿದಾಗ, ವಿದ್ಯಾರ್ಥಿಗಳಿಗೆ ಅದರ ವಿರುದ್ಧ ಪ್ರತಿಭಟಿಸುವ ಹಕ್ಕಿದೆ,” ಎಂದು ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

​ಪುಣೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಂದ ಆಗುತ್ತಿರುವ ತೊಂದರೆಗಳ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್ ದಾಖಲಿಸದ ರಾಜ್ಯ ಸರ್ಕಾರದ ಕ್ರಮವನ್ನು ಶ್ಲಾಘಿಸಿತು. ಇದೇ ವೇಳೆ, ವಿದ್ಯಾರ್ಥಿಗಳು ತಮ್ಮ ಭವಿಷ್ಯ ಮತ್ತು ಕುಟುಂಬದ ಹಿತದೃಷ್ಟಿಯಿಂದ ಮರಳಿ ತರಗತಿಗಳಿಗೆ ತೆರಳಿ, ನ್ಯಾಯಾಂಗ ಪ್ರಕ್ರಿಯೆಯ ಮೇಲೆ ನಂಬಿಕೆ ಇಡಬೇಕು ಎಂದು ಕೋರ್ಟ್ ಕಿವಿಮಾತು ಹೇಳಿದೆ. “ಈ ಮಕ್ಕಳು ಮುಗ್ಧರು, ಆದರೆ ಈಗ ಅವರು ರಸ್ತೆಗೆ ಇಳಿದಿದ್ದಾರೆ. ಇದರಿಂದ ಅವರ ಭವಿಷ್ಯ ಹಾಳಾಗುತ್ತದೆ. ಪುಣೆಯ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದಂತೆ ಪ್ರತಿಭಟನಾಕಾರರು ಎಚ್ಚರವಹಿಸಬೇಕು” ಎಂದು ಮುಖ್ಯ ನ್ಯಾಯಮೂರ್ತಿಗಳು ಮನವಿ ಮಾಡಿದರು.

​ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಮಿಲಿಂದ್ ಸಾಠೆ, ಅಧಿಕಾರಿಗಳು ಸಾಕಷ್ಟು ಸಂಯಮ ವಹಿಸಿದ್ದಾರೆ ಹಾಗೂ ಪ್ರತಿಭಟನಾಕಾರರ ಬಹುತೇಕ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. “ಎಂಪಿಎಸ್‌ಸಿ ಅಧ್ಯಕ್ಷರ ರಾಜೀನಾಮೆ ನೀಡಬೇಕೆಂಬ ಪ್ರಮುಖ ಬೇಡಿಕೆಗೆ ಸಂಬಂಧಿಸಿದಂತೆ, ರಾಜ್ಯಪಾಲರಿಗೆ ಶಿಫಾರಸು ಕಳುಹಿಸಲಾಗಿದ್ದು, ಮುಂದಿನ ಕ್ರಮಕ್ಕಾಗಿ ಕಾಯಲಾಗುತ್ತಿದೆ” ಎಂದು ಅವರು ವಿವರಿಸಿದರು.

Advertisements

​ಪುಣೆಯ ನಿವಾಸಿಗಳಾದ ಅಮಿತ್ ಸುಪೇಕರ್ ಮತ್ತು ಸೌರಭ್ ವಿರ್ಕರ್ ಎನ್ನುವವರು ಸಲ್ಲಿಸಿದ್ದ ಈ ಅರ್ಜಿಯಲ್ಲಿ, ರಾಜ್ಯ ಸರ್ಕಾರ ಹಾಗೂ ಪ್ರತಿಭಟನೆಯ ಆಯೋಜಕರಾದ ಪ್ರಮೋದ್ ಪಾಟೀಲ್, ನಿತಿನ್ ಆಂಧಳೆ ಮತ್ತು ಚೇತನ್ ವಾಗಜ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ವಿಚಾರಣೆ ವೇಳೆ, ಓರ್ವ ಆಯೋಜಕರು ಪ್ರತಿಭಟನೆ ಹಿಂಪಡೆಯುವುದಾಗಿ ತಿಳಿಸಿದರೆ, ಉಳಿದಿಬ್ಬರು ಆಯೋಜಕರು ಪುಣೆ ಪ್ರಾಧಿಕಾರ ಸೂಚಿಸುವ ಬೇರೆ ಯಾವುದೇ ಸ್ಥಳಕ್ಕೆ ಪ್ರತಿಭಟನೆಯನ್ನು ಸ್ಥಳಾಂತರಿಸಲು ಸಿದ್ಧರಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.

​ಈ ಕುರಿತು ಮೂರು ವಾರಗಳೊಳಗೆ ಸಮಗ್ರ ವರದಿ ಹಾಗೂ ಮಾರ್ಗಸೂಚಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಪೀಠವು, ಮುಂದಿನ ವಿಚಾರಣೆಯನ್ನು ನವೆಂಬರ್ 25ಕ್ಕೆ ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವಸೃಷ್ಟಿಯ ಶತಮಾನದ ರಹಸ್ಯ ಬಯಲು ಮಾಡಿದ ಕಗನ್, ಸೋಯಿಗೆ ಒಲಿದ ರಸಾಯನಶಾಸ್ತ್ರ ನೊಬೆಲ್

ಜೀವರಸಾಯನಶಾಸ್ತ್ರದ ಶತಮಾನದ ರಹಸ್ಯವೊಂದನ್ನು ಭೇದಿಸಿದ ಫ್ರಾನ್ಸ್‌ನ ವಿಜ್ಞಾನಿ ಹೆನ್ರಿ ಬಿ. ಕಗನ್...

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....