ಏರ್‌ ಇಂಡಿಯಾ ವಿಮಾನ ದುರಂತ: ಹಲವು ಸಂಸ್ಥೆಗಳಿಂದ ತನಿಖೆ

Date:

ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ಹಾರಿದ ಏರ್ ಇಂಡಿಯಾ ಬೋಯಿಂಗ್ 787 ವಿಮಾನ(AI 171) ವಿಮಾನ ಗುರುವಾರ(ಜೂನ್ 12) ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದು ದುರಂತದಲ್ಲಿ 230 ಮಂದಿ ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರಂತದ ಬಗ್ಗೆ ಹಲವು ಸಂಸ್ಥೆಗಳು ತನಿಖೆ ನಡೆಸಲಿದೆ.

- Advertisement -

ಈ ದುರಂತದ ಬೆನ್ನಲ್ಲೇ ಬೋಯಿಂಗ್ 787 ವಿಮಾನದಲ್ಲಿ ಈ ಹಿಂದೆ ಹಲವು ಸಮಸ್ಯೆಗಳು ಕಾಣಿಸಿಕೊಂಡಿರುವ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಹಾಗೆಯೇ ಈವರೆಗೂ ಈ ವಿಮಾನ ಅಪಘಾತದ ಕಾರಣ ನಿಗೂಢವಾಗಿದೆ. ಈ ಹಿನ್ನೆಲೆ ಹಲವು ಸಂಸ್ಥೆಗಳು ಈ ಅವಘಡದ ಬಗ್ಗೆ ತನಿಖೆ ನಡೆಸಲು ಆರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದನ್ನು ಓದಿದ್ದೀರಾ? ಬೋಯಿಂಗ್ 787 ವಿಮಾನಗಳ ತಾಂತ್ರಿಕ ದೋಷಗಳ ಬಗ್ಗೆ ಎಚ್ಚರಿಸಿದ್ದ ಎಂಜಿನಿಯರ್ ನಿಗೂಢ ಸಾವು; ಮತ್ತೆ ಮುನ್ನೆಲೆಗೆ

ಈಗಾಗಲೇ ವಿಮಾನ ಅಪಘಾತ ತನಿಖಾ ಬ್ಯೂರೋ(AAIB) ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ. ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ(ICAO) ನಿಗದಿಪಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ AAIB ಔಪಚಾರಿಕ ತನಿಖೆಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಈಗಾಗಲೇ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸ್ಥಳಕ್ಕೆ ಭೇಟಿ ನೀಡಿದೆ.

ಇದನ್ನು ಹೊರತುಪಡಿಸಿ ಅಪಘಾತದ ಬಗ್ಗೆ ವಿವರವಾದ ಪರಿಶೀಲನೆ ನಡೆಸಲು ಸರ್ಕಾರ ಬಹು ವಿಭಾಗಗಳ ತಜ್ಞರನ್ನು ಒಳಗೊಂಡ ‘ಉನ್ನತ ಮಟ್ಟದ ಸಮಿತಿ’ಯನ್ನು ರಚಿಸುತ್ತಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಮಿತಿಯು ವಾಯುಯಾನ ಸುರಕ್ಷತೆಯನ್ನು ಬಲಪಡಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತದೆ ಎನ್ನಲಾಗಿದೆ.

ಇನ್ನು ಅಮೆರಿಕದ ವಾಯುಯಾನ ನಿಯಂತ್ರಕ ಫೆಡರಲ್ ವಿಮಾನಯಾನ ಆಡಳಿತ(FAA) ಏರ್‌ ಇಂಡಿಯಾ ವಿಮಾನ ಅಪಘಾತದ ಬಗ್ಗೆ ಮಾಹಿತಿ ಪಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ(NTSB)ನೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಕಳೆದ ಐದು ವರ್ಷಗಳಲ್ಲಿ ಜಗತ್ತು ಕಂಡ ಭೀಕರ ವಿಮಾನ ದುರಂತಗಳಿವು

“ಅಂತಾರಾಷ್ಟ್ರೀಯವಾಗಿ ಯಾವುದೇ ಅವಘಡ ಸಂಭವಿಸಿದಾಗ ಅಲ್ಲಿನ ಸರ್ಕಾರ ತನಿಖೆಯನ್ನು ಮುನ್ನಡೆಸುತ್ತದೆ. ಎನ್‌ಟಿಎಸ್‌ಬಿ ಅಮೆರಿಕದ ಅಧಿಕೃತ ಪ್ರತಿನಿಧಿಯಾಗಿರುತ್ತದೆ. ಎಫ್‌ಎಎ ತಾಂತ್ರಿಕ ಬೆಂಬಲವನ್ನು ಒದಗಿಸುತ್ತದೆ. ಎನ್‌ಟಿಎಸ್‌ಬಿ ಸಮನ್ವಯದೊಂದಿಗೆ ತಕ್ಷಣವೇ ತಂಡವನ್ನು ರಚಿಸಲು ನಾವು ಸಿದ್ಧರಿದ್ದೇವೆ” ಎಂದು ಹೇಳಿಕೆಯಲ್ಲಿ ಹೇಳಿದೆ.

“DOT(ಯುಎಸ್ ಸಾರಿಗೆ ಇಲಾಖೆ) ಮತ್ತು FAA ಯಾವಾಗಲೂ ಸುರಕ್ಷತೆಗೆ ಮೊದಲ ಆದ್ಯತೆ ನೀಡುತ್ತದೆ. ಸತ್ಯಾಂಶದ ತನಿಖೆ ನಡೆಸಲಾಗುತ್ತದೆ. ಸದ್ಯ ನಾವು ಎಫ್‌ಎಎ ಮುಖಾಂತರ ಎನ್‌ಟಿಎಸ್‌ಬಿಯಿಂದ ತಂಡವನ್ನು ನಿಯೋಜಿಸುವ ಪ್ರಕ್ರಿಯೆಯಲ್ಲಿದ್ದೇವೆ. ನಮ್ಮಲ್ಲಿ ಜಿಇ ಮತ್ತು ಬೋಯಿಂಗ್ ಕೂಡಾ ಇವೆ. ಅವುಗಳ ತಮ್ಮ ತನಿಖಾಧಿಕಾರಿಗಳನ್ನು ಭಾರತದಲ್ಲಿ ನಿಯೋಜಿಸುತ್ತಿದ್ದಾರೆ. ಭಾರತ ತನಿಖೆಯ ನೇತೃತ್ವ ವಹಿಸಲಿ. ಭಾರತಕ್ಕೆ ಅಗತ್ಯವಿರುವ ಯಾವುದೇ ಸಹಾಯವನ್ನು ಒದಗಿಸಲು ನಾವು ಸಿದ್ಧರಿದ್ದೇವೆ” ಎಂದು ಯುಎಸ್ ಸಾರಿಗೆ ಕಾರ್ಯದರ್ಶಿ ಸೀನ್ ಡಫಿ ಅವರು ತಿಳಿಸಿರುವುದಾಗಿ ಫಾರ್ಚೂನ್ ಇಂಡಿಯಾ ವರದಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...