ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಸ್ಥಳದಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.
ಬಲರಾಮ ಕಟ್ಟಡದ ಬಳಿಯಿರುವ ಬಿಕೆಸಿಯಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೌಟುಂಬಿಕ ನ್ಯಾಯಾಲಯದ ಬಳಿ ಇರುವ ವಸತಿ ವೇತನ ಮತ್ತು ಖಾತೆಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಮೊದಲು ಕಾಣಿಸಿಕೊಂಡಿದೆ.
#WATCH | Maharashtra: A fire broke out at Mumbai’s Pay and Accounts office. Further details awaited. pic.twitter.com/TRsi8e8ORI
— ANI (@ANI) April 13, 2024
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮದ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದೆ. ಈ ವೇಳೆ ಅಗ್ನಿ ಶಾಮಕ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು ಎಂದು ವರದಿಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ? ತೆನೆ ಹೊತ್ತ ಮಹಿಳೆಗೆ ‘ಕಮಲ’ ಎಂಬ ಹೊಸ ನಾಮಕರಣ: ಪ್ರಜ್ವಲ್ ರೇವಣ್ಣ
ಸದ್ಯ ಯಾವುದೇ ಪ್ರಾಣಹಾನಿ ಅಥವಾ ಗಾಯಾಳುಗಳ ಬಗ್ಗೆ ಇನ್ನೂ ವರದಿಯಾಗಿಲ್ಲ.