ತತ್ತರಿಸಿದ ಮುಂಬೈ: ಮಹಾರಾಷ್ಟ್ರದಲ್ಲಿ ಮುಂಗಾರು ಅಬ್ಬರಕ್ಕೆ 15ಕ್ಕೆ ಸಾವು

Date:

ವಾಣಿಜ್ಯ ನಗರಿ ಮುಂಬೈನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದ್ದು, ಎಲ್ಲೆಡೆ ಟ್ರಾಫಿಕ್ ದಟ್ಟಣೆ ಉಂಟಾಗಿದೆ.

- Advertisement -

ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಮುಂಬೈಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತು, ಐಟಿ ಸೇರಿದಂತೆ ವಿವಿಧ ವಲಯದ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ (ವರ್ಕ್ ಫ್ರಂ ಹೋಮ್) ಮಾಡಲು ಸೂಚಿಸಲಾಗಿದೆ. ಅತ್ಯಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಬರುವಂತೆ ನಾಗರಿಕರಿಗೆ ಆಡಳಿತ ಮುನ್ನೆಚ್ಚರಿಕೆ ನೀಡಿದೆ. ಶಾಲಾ ಕಾಲೇಜುಗಳಿಗೆ ಕೂಡ ರಜೆ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪುಣೆ, ಥಾಣೆ, ಮತ್ತು ರಾಯಗಡ ಜಿಲ್ಲೆಗಳಲ್ಲೂ ವರುಣನ ರೌದ್ರಾವತಾರ ಮುಂದುವರಿದಿದೆ. ಇದರೂಂದಿಗೆ ಮಹಾರಾಷ್ಟ್ರದಾದ್ಯಂತ ಮಳೆ ಸಂಬಂಧಿತ ಅವಘಡಗಳಿಗೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ ಸಂಭವಿಸಿದ್ದು, ಈ ಪ್ರಮುಖ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ರಸ್ತೆ ತೆರವುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಥಾಣೆ ಮತ್ತು ರಾಯಗಡ ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆ ಭೀತಿ ಎದುರಾಗಿದೆ. ಅಪಾಯದ ಅಂಚಿನಲ್ಲಿರುವ ಮತ್ತು ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮುಂಬರುವ ದಿನಗಳಲ್ಲೂ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಸರ್ಕಾರ ಮತ್ತು ವಿಪತ್ತು ನಿರ್ವಹಣಾ ಪಡೆಗಳು ಕಟ್ಟೆಚ್ಚರ ವಹಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಶಾಲೆ ಮಾನವೀಯ ಮೌಲ್ಯ ಬೆಳೆಸುವ ಸ್ಫೂರ್ತಿಯ ಕೇಂದ್ರ

ಶಿಕ್ಷಣವೆಂಬುದು ಕೇವಲ ಶಾಲೆಯಲ್ಲಿ ಕಲಿಯುವ ಪಾಠಗಳಿಗೆ ಸೀಮಿತವಾಗದೆ, ಸಂಗೀತ, ಸಾಹಿತ್ಯ, ಅಭಿನಯ...

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಈ ದಿನ ಸಂಪಾದಕೀಯ | ಎದ್ದು ನಿಂತ ಯುವಜನತೆ, ಹೊಸ ಬೆಳವಣಿಗೆಯತ್ತ ಭಾರತ

ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ, ಸರ್ಕಾರ ರಚನೆ, ಆಡಳಿತ ನಡೆಸುವುದಷ್ಟೇ ಅಲ್ಲ, ದನಿ...