ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿದ್ದು, ಮುಂಬೈನಲ್ಲೂ ಸಿಜೆಪಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯಲ್ಲಿ ಮತ್ತೆ ಭಾಗಿಯಾದರೆ ನಕಲಿ ಡ್ರಗ್ಸ್ ಕೇಸ್ ದಾಖಲಿಸುವೆ. ನೀವು ಜೈಲಿನಲ್ಲೇ ಕೊಳೆಯುವಂತೆ ಮಾಡವೆ ಎಂದು ಬೆದರಿಕೆ ಹಾಕಿದ್ದ ಮುಂಬೈ ಪೊಲೀಸ್ ಪವನ್ ಸಾಂಗ್ಲೆಯನ್ನು ವಜಾಗೊಳಿಸಲಾಗಿದೆ.
ಪೊಲೀಸ್ ಕಾನ್‌ಸ್ಟೆಬಲ್ ಪವನ್ ಸಾಂಗ್ಲೆ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಪೊಲೀಸ್ ವಿದ್ಯಾರ್ಥಿಗಳು ಸಿಜೆಪಿ ಪ್ರತಿಭಟನೆಯಲ್ಲಿ ಭಾಗಯಾಗದಂತೆ ಬೆದರಿಸುವುದು ಕಂಡುಬಂದಿತ್ತು. ಮುಂದಿನ ಪ್ರತಿಭಟನೆಗಳಲ್ಲಿ ಭಾಗವಹಿಸಿದರೆ ಉಳಿದ ಜೀವನವನ್ನು ಜೈಲಿನಲ್ಲಿ ಕಳೆಯಬೇಕಾಗುತ್ತದೆ ಎಂದೂ ಬೆದರಿಕೆ ಹಾಕುವ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ: ಫ್ರೀಡಂ ಪಾರ್ಕ್‌ಗೆ ಬನ್ನಿ ಕೂತು ಮಾತಾಡೋಣ: ಕನ್ನಡದ ಮಕ್ಕಳಿಗೆ ನಟ ಕಿಶೋರ್ ಕರೆ
ಪೊಲೀಸ್ ಕಾನ್‌ಸ್ಟೆಬಲ್ ಪವನ್ ಸಾಂಗ್ಲೆ ಮೋಟಾರು ವಾಹನ ಇಲಾಖೆಗೆ ಸೇರಿದ್ದು, ಪ್ರಸ್ತುತ ಸಿಯಾನ್ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
“ಸತ್ಯಾಸತ್ಯತೆಯನ್ನು ಪರಿಶೀಲಿಸಿ ಸಂಬಂಧಪಟ್ಟವರನ್ನು ವಿಚಾರಣೆಗೆ ಒಳಪಡಿಸುವವರೆಗೂ ಹುದ್ದೆಯಿಂದ ತೆಗೆದುಹಾಕಲಾಗುವುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿವಿಧ ಅಕ್ರಮಗಳ ಹೊಣೆಯನ್ನು ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಂಡಿದೆ. ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಕ್ರೂರವಾಗಿ ದೌರ್ಜನ್ಯ ಎಸಗಿ, ಥಳಿಸಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ನಡುವೆ ಬೆಂಗಳೂರಿನ ಫ್ರೀಡಂ ಪಾರ್ಕ್, ಮುಂಬೈ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ.





