ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ; ಹಾವೇರಿಯಲ್ಲಿ ಆರೋಪಿ ಬಂಧನ

Date:

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿ 5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಹಾವೇರಿಯ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಮೂಲತಃ ರಾಜಸ್ಥಾನದ ಜಲೋರ್‌ನ ನಿವಾಸಿಯಾದ 35 ವರ್ಷದ ಆರೋಪಿ ಭೀಕಾರಾಂ ಜಲರಾಮ್ ಬಿಷ್ಣೋಯ್ ಹಾವೇರಿಯಲ್ಲಿ ನೆಲೆಸಿದ್ದು ಬುಧವಾರ ವರ್ಲಿ ಪೊಲೀಸ್ ಠಾಣೆಯ ತಂಡ ವಿಚಾರಣೆ ನಡೆಸಿ ಆತನ ಬಂಧನ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿಷ್ಣೋಯ್ ಸೋಮವಾರ ರಾತ್ರಿ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಮ್‌ನ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪವಿದೆ.

ಬಂಧನ 5

ಇದನ್ನು ಓದಿದ್ದೀರಾ? ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೊಂದು ಕೊಲೆ ಬೆದರಿಕೆ, ಪೊಲೀಸ್‌ ತನಿಖೆ ಆರಂಭ

“ಸಲ್ಮಾನ್ ಖಾನ್ ಬದುಕಿರಬೇಕಾದರೆ ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂಪಾಯಿ ನೀಡಬೇಕು. ಹಾಗೆ ಮಾಡದಿದ್ದರೆ ಆತನನ್ನು ಸಾಯಿಸುತ್ತೇವೆ. ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ” ಎಂದು ಬೆದರಿಕೆ ಸಂದೇಶದಲ್ಲಿ ಬರೆಯಲಾಗಿದೆ.

ಸಂದೇಶ ಕಳುಹಿಸಿದವನು ತಾನು ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಎಂದು ಹೇಳಿಕೊಂಡಿದ್ದ. ಆರೋಪಿ ವಿರುದ್ಧ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ತನಿಖೆಯ ಸಮಯದಲ್ಲಿ, ಆರೋಪಿಯು ಕರ್ನಾಟಕದಲ್ಲಿರುವುದು ಬೆಳಕಿಗೆ ಬಂದಿದೆ. ಆತನ ಬಂಧನಕ್ಕಾಗಿ ವರ್ಲಿ ಪೊಲೀಸರ ತಂಡ ಹಾವೇರಿಗೆ ಬಂದಿದೆ. ಮಂಗಳವಾರ ತಡರಾತ್ರಿ ಬಿಷ್ಣೋಯ್ ಬಂಧನ ಮಾಡಲಾಗಿದ್ದು ವಿಚಾರಣೆಯ ನಂತರ ವರ್ಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...