ಮುಂಬೈನ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈನ ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಮುಂಜಾನೆ ಸುಮಾರು 5.20ಕ್ಕೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಟ್ಟಡದ ನೆಲ ಮಹಡಿಯು ಅಂಗಡಿಯಾಗಿದ್ದು, ಮೇಲಿನ ಮಹಡಿಯು ನಿವಾಸವಾಗಿತ್ತು. ನೆಲ ಮಹಡಿಯಲ್ಲಿ ಹೊತ್ತಿದ ಬೆಂಕಿ ಕಟ್ಟಡಕ್ಕೆ ಆವರಿಸಿದೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಮುಂಬೈ: ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 5 ಮಂದಿ
ನೆಲ ಮಹಡಿಯಲ್ಲಿನ ಅಂಗಡಿಯಲ್ಲಿನ ವಿದ್ಯುತ್ ಕೇಬಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಇದು ಮಹಡಿಗೆ ವ್ಯಾಪಿಸಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ವೈದ್ಯರು ಏಳು ಮಂದಿ ಕೂಡಾ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಮೃತರನ್ನು ಪಾರಿಸ್ ಗುಪ್ತಾ (7), ಮಂಜು ಪ್ರೇಮ್ ಗುಪ್ತಾ (30), ಅನಿತಾ ಗುಪ್ತಾ (39), ಪ್ರೇಮ್ ಗುಪ್ತಾ (30) ಮತ್ತು ನರೇಂದ್ರ ಗುಪ್ತಾ (10) ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಮಾಹಿತಿ ಲಭ್ಯವಾಗಿಲ್ಲ. ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.
#WATCH | Mumbai, Maharashtra | 7 people including 3 children died after a fire broke out at a shop in Chembur around 5 am today: BMC pic.twitter.com/Q87SN0Pgdo
— ANI (@ANI) October 6, 2024
