‌ಮುಂಬೈ | ಆರು ಅಂತಸ್ತಿನ ವಾಣಿಜ್ಯ ಮಳಿಗೆ ಕಟ್ಟಡದಲ್ಲಿ ಬೆಂಕಿ; 50 ಮಂದಿ ರಕ್ಷಣೆ

Date:

ಮುಂಬೈನ ಉಪನಗರ ಮುಲುಂಡ್‌ನಲ್ಲಿರುವ ಆರು ಅಂತಸ್ತಿನ ವಾಣಿಜ್ಯ ಮಳಿಗೆ ಕಟ್ಟಡದಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 50 ಮಂದಿಯನ್ನು ರಕ್ಷಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಎಲ್‌ಬಿಎಸ್‌ ರಸ್ತೆಯಲ್ಲಿರುವ ʼಏವಿಯರ್ ಕಾರ್ಪೊರೇಟ್‌ ಪಾರ್ಕ್‌ʼ ಕಟ್ಟಡದ ಆರನೇ ಮಹಡಿಯಲ್ಲಿ ಇಂದು ಬೆಳಿಗ್ಗೆ 9.25ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಆರನೇ ಮಹಡಿಯಲ್ಲಿ ಹೊಗೆ ಆವರಿಸಿದ್ದು, ವಿವಿಧ ಮಹಡಿಗಳಲ್ಲಿ ಸಿಲುಕಿದ್ದವರನ್ನು ಮುಂಬೈ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

“ಘಟನೆಯಲ್ಲಿ ಸಿಲುಕಿದ್ದವರನ್ನು ಮೆಟ್ಟಿಲುಗಳ ಮೂಲಕ ಮತ್ತು ವಿದ್ಯುತ್‌ ಚಾಲಿತ ಏಣಿ(ಟರ್ನ್‌ಟೇಬಲ್‌ ಲ್ಯಾಡರ್)ಗಳ ಸಹಾಯದಿಂದ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿರುವುದು ಕಂಡುಬಂದಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ” ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವಾಣಿಜ್ಯ ಮಳಿಗೆಗಳ ಕಟ್ಟಡದ ಸುಮಾರು 1,000 ಚದರ ಅಡಿ ಪ್ರದೇಶದಲ್ಲಿ ವೈರಿಂಗ್, ವಿದ್ಯುತ್ ಪರಿಕರಗಳು, ಎಸಿ ಘಟಕಗಳು, ಮರದ ಪೀಠೋಪಕರಣಗಳು ಮತ್ತು ಕಚೇರಿ ದಾಖಲೆಗಳಿಗೆ ಬೆಂಕಿ ತಗುಲಿದ್ದು, ವಸ್ತುಗಳು ಹಾನಿಯಾಗಿವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಜೈಲಿನಿಂದಲೇ ಅರವಿಂದ್ ಕೇಜ್ರಿವಾಲ್ ಅವರ 2ನೇ ಆದೇಶ

“ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ನಾಲ್ಕು ಅಗ್ನಿಶಾಮಕ ವಾಹನಗಳು, ಮೂರು ಜಂಬೋ ಟ್ಯಾಂಕರ್‌ಗಳು, ಎರಡು ಟರ್ನ್ ಟೇಬಲ್ ಏಣಿಗಳು ಮತ್ತು ಇತರ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ” ಎಂದು ಹೇಳಿದರು.

ಮುಂಬೈ ಪೊಲೀಸರು, ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ಇತರ ಏಜೆನ್ಸಿಗಳ ಸಿಬ್ಬಂದಿಯನ್ನು ಸ್ಥಳದಲ್ಲಿ ಸಜ್ಜುಗೊಳಿಸಲಾಗಿದೆ ಎಂದು ಹೇಳಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಉತ್ತರ ಪ್ರದೇಶ ಶಹಜಹಾನ್‌ಪುರದಲ್ಲಿ ಬಸ್‌ ಹಾಗೂ ಟ್ರಕ್ ನಡುವೆ  ಸಂಭವಿಸಿದ ಭೀಕರ...

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್...

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...